Tag: Mallikarjun Kharge

ಸಂವಿಧಾನ ವಿರುದ್ಧದ ಕಾನೂನನ್ನು ಒಗ್ಗಟ್ಟಿನಿಂದ ವಿರೋಧಿಸಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ
ಚಾಮರಾಜನಗರ

ಸಂವಿಧಾನ ವಿರುದ್ಧದ ಕಾನೂನನ್ನು ಒಗ್ಗಟ್ಟಿನಿಂದ ವಿರೋಧಿಸಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ

March 8, 2020

ಚಾಮರಾಜನಗರ, ಮಾ.7(ಎಸ್‍ಎಸ್)- ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ. ಸಂವಿಧಾನಕ್ಕೆ ವಿರುದ್ಧವಾಗಿರುವ ಯಾವುದೇ ಕಾನೂನು ಬಂದರೂ ಅದನ್ನು ಎಲ್ಲರೂ ಒಗ್ಗಟ್ಟಿನಿಂದ ವಿರೋಧಿಸಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಂವಿಧಾನ ಪ್ರಚಾರ ಸಮಿತಿ ವೇದಿಕೆ, ಇಸ್ಲಾಹುಲ್ ಮುಸ್ಲೀ ಮಿನ್ ಕಮಿಟಿ ಹಾಗೂ ಸಂವಿಧಾನ ಸಂರಕ್ಷಣಾ ವೇದಿಕೆ ವತಿಯಿಂದ ಶನಿವಾರ ಆಯೋಜಿಸಿದ್ದ ಸಂವಿಧಾನ ಸಂರಕ್ಷಣಾ ಸಮಾವೇಶದಲ್ಲಿ ಅವರು ಮಾತನಾಡಿದರು. ಎನ್‍ಆರ್‍ಪಿ, ಸಿಎಎ ಹಾಗೂ ಎನ್‍ಆರ್ ಸಿಯಿಂದ ದೇಶದಲ್ಲಿರುವ ಕಡು ಬಡವರಿಗೆ, ಬಡ…

ಖರ್ಗೆಗೆ ಸಿಎಂ ಪಟ್ಟ ಸಾಧ್ಯತೆ
ಮೈಸೂರು

ಖರ್ಗೆಗೆ ಸಿಎಂ ಪಟ್ಟ ಸಾಧ್ಯತೆ

July 8, 2019

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದಿರುವ 13 ಶಾಸಕರು ತಮ್ಮ ವಿಧಾನಸಭಾ ಸದ ಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕವೂ ಸರ್ಕಾರ ಉಳಿಸಿಕೊಳ್ಳುವತ್ತ ಕಾಂಗ್ರೆಸ್-ಜೆಡಿಎಸ್ ನಾಯಕರು ಗಂಭೀರ ಚಿಂತನೆ ನಡೆಸಿದ್ದು, ಅಗತ್ಯ ಬಿದ್ದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಬದಲಾವಣೆಯಂತಹ ಕಠಿಣ ನಿರ್ಧಾರ ಅನಿವಾರ್ಯ ಎನ್ನುವ ನಿಲುವಿಗೆ ಬಂದಿದ್ದಾರೆ. ಸರ್ಕಾರ ರಕ್ಷಣೆಗೆ ಹಲವು ಸೂತ್ರಗಳನ್ನು ಸಿದ್ಧಪಡಿಸಿದ್ದು, ಇದರಲ್ಲಿ ರಾಜೀನಾಮೆ ನೀಡಿರುವ ಶಾಸಕರನ್ನು ಮನವೊಲಿಸುವುದು ಸೇರಿದೆ. ಸರ್ಕಾರ ಉಳಿಯಬೇಕಾದರೆ ಅತೃಪ್ತ ಶಾಸಕರ ಬೇಡಿಕೆಗಳಿಗೆ ಮನ್ನಣೆ ನೀಡುವುದು ಅನಿವಾರ್ಯ ಎಂಬುದನ್ನು ಮನಗಂಡಿದ್ದಾರೆ. ರಾಜೀನಾಮೆ ನೀಡಿರುವ…

ಮೋದಿ ಮಣಿಸಲು ಸ್ಥಳೀಯ ಪಕ್ಷಗಳೊಂದಿಗೆ  ಹೊಂದಾಣಿಕೆ ನಿರ್ಧಾರ
ದೇಶ-ವಿದೇಶ

ಮೋದಿ ಮಣಿಸಲು ಸ್ಥಳೀಯ ಪಕ್ಷಗಳೊಂದಿಗೆ ಹೊಂದಾಣಿಕೆ ನಿರ್ಧಾರ

July 23, 2018

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದಲ್ಲಿ ಸೋಲನುಭವಿಸಿದ ಕಾಂಗ್ರೆಸ್, ಪ್ರಧಾನಿ ಮೋದಿ ಅವರನ್ನು ಮಣಿಸಲು 2019ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜ್ಯಗಳ ಸ್ಥಳೀಯ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದೆ. ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿಯವರು ಅಧಿಕಾರ ಸ್ವೀಕರಿಸಿದ ನಂತರ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ರಚಿಸಲಾದ 23 ಸದಸ್ಯರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮೊದಲ ಸಭೆ ಇಂದು ನವದೆಹಲಿ ಯಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ…

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ
ದೇಶ-ವಿದೇಶ

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ

July 18, 2018

ನವದೆಹಲಿ: ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಎಲ್ಲಾ ಪಕ್ಷಗಳು ಸಹಕರಿಸುವಂತೆ ಪ್ರಧಾನಿ ನರೇಂದ್ರಮೋದಿ ಮನವಿ ಮಾಡಿದ್ದಾರೆ. ಅಧಿವೇಶನ ಹಿನ್ನೆಲೆಯಲ್ಲಿ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರಮೋದಿ, ಜನರು ತಮ್ಮಿಂದ ನಿರೀಕ್ಷಿಸುತ್ತಿರುವ ವಿಷಯಗಳನ್ನು ಸದನದಲ್ಲಿ ಚರ್ಚಿಸುವಂತೆ ಪ್ರಧಾನಿ ಎಲ್ಲಾ ನಾಯಕರಿಗೂ ಹೇಳಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ತಿಳಿಸಿದರು. ಸುಗಮ ಕಲಾಪಕ್ಕೆ ಎಲ್ಲಾ ಪಕ್ಷಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಕಲಾಪ ಸುಗಮವಾಗಿ ಸಾಗಲು…

ನಾನು ಸಿಎಂ ಆಗುವುದು ಮುಖ್ಯವಲ್ಲ, ಕಾಂಗ್ರೆಸ್ ನೀತಿ-ನಿಯಮ ಉಳಿವು ಮುಖ್ಯ ಎನ್.ಆರ್.ಕ್ಷೇತ್ರದ ಅಭ್ಯರ್ಥಿ ತನ್ವೀರ್ ಸೇಠ್ ಪರ ಮಲ್ಲಿಕಾರ್ಜುನ ಖರ್ಗೆ ಮತಯಾಚನೆ
ಮೈಸೂರು

ನಾನು ಸಿಎಂ ಆಗುವುದು ಮುಖ್ಯವಲ್ಲ, ಕಾಂಗ್ರೆಸ್ ನೀತಿ-ನಿಯಮ ಉಳಿವು ಮುಖ್ಯ ಎನ್.ಆರ್.ಕ್ಷೇತ್ರದ ಅಭ್ಯರ್ಥಿ ತನ್ವೀರ್ ಸೇಠ್ ಪರ ಮಲ್ಲಿಕಾರ್ಜುನ ಖರ್ಗೆ ಮತಯಾಚನೆ

May 7, 2018

ಮೈಸೂರು: ಪ್ರಸ್ತುತ ನಾನು ಮುಖ್ಯ ಮಂತ್ರಿಯಾಗುವುದು ಮುಖ್ಯವಲ್ಲ. ಬದಲಾಗಿ ದೇಶದಲ್ಲಿ ಕಾಂಗ್ರೆಸ್‍ನ ನೀತಿ-ನಿಯಮಗಳು ಉಳಿಯುವುದು ಮುಖ್ಯ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟರು. ಎನ್.ಆರ್.ಕ್ಷೇತ್ರದ ವ್ಯಾಪ್ತಿಯ ಗಾಂಧಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತನ್ವೀರ್‍ಸೇಠ್ ಪರ ಮತಯಾಚನೆ ಮಾಡಿದ ನಂತರ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಕೆ.ಆರ್.ಕ್ಷೇತ್ರ ವ್ಯಾಪ್ತಿಯ ಅಶೋಕಪುರಂನಲ್ಲಿ ನಾನು ಚುನಾವಣಾ ಪ್ರಚಾರದಲ್ಲಿದ್ದಾಗ ಕೆಲ ನನ್ನ ಅಭಿಮಾನಿಗಳು ನೀವು ಮುಖ್ಯಮಂತ್ರಿಯಾಗಬೇಕು. ಬೇರೆ ಯಾರನ್ನೋ ಮುಖ್ಯಮಂತ್ರಿ ಮಾಡುವುದಾದರೆ, ಕಾಂಗ್ರೆಸ್‍ಗೆ ಮತ ಹಾಕುವುದಿಲ್ಲ ಎಂದು ಉದ್ವೇಗದಲ್ಲಿ ಮಾತನಾಡಿದ್ದಾರೆ. ಇದು ಅವರ ತಪ್ಪು…

Translate »