ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷದ ಅಭ್ಯರ್ಥಿ ಯಾದ ನನಗೆ ಕಾನೂನುಬದ್ಧವಾಗಿ ಸಿಗಬೇಕಿದ್ದ ಕ್ರಮಸಂಖ್ಯೆ ವಿಚಾರದಲ್ಲಿ ಮಂಡ್ಯ ಚುನಾವಣಾ ಧಿಕಾರಿಗಳಿಂದಲೇ ಲೋಪವಾಗಿದೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತಿದ್ದೇನೆ ಎಂದು ಬಿಎಸ್‍ಪಿ ಅಭ್ಯರ್ಥಿ ನಂಜುಂಡಸ್ವಾಮಿ ತಿಳಿಸಿದರು. ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾ ಧಿಕಾರಿಗೆ ದೂರು ನೀಡಲು ಬಂದಿದ್ದ ವೇಳೆ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಾದ ನನಗೆ ಮತಯಂತ್ರದಲ್ಲಿ ಕ್ರಮಸಂಖ್ಯೆ 1 ನೀಡಬೇಕಿತ್ತು. ಆದರೆ ಕ್ರಮಸಂಖ್ಯೆ…