ನವದೆಹಲಿ: ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರು ಬುಧವಾರ ಮತ್ತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದು, ಕೇಂದ್ರ ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡುವಂತೆ ಬಿಜೆಪಿ ಹಿರಿಯ ನಾಯಕರಿಗೆ ಮತ್ತು ಸಂಸದರಿಗೆ ಆಗ್ರಹಿಸಿದ್ದಾರೆ. ಬಿಜೆಪಿ ಮಾರ್ಗದರ್ಶಕ್ ಮಂಡಳಿಯ ಸದಸ್ಯರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರು ಮೌನ ಮುರಿದು ಮಾತನಾಡುವ ಮೂಲಕ ಸಂಸದರು ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡಲು ಪ್ರೇರೇಪಿಸಬೇಕು ಎಂದು ಯಶವಂತ್ ಸಿನ್ಹಾ ಹೇಳಿದ್ದಾರೆ. 2014ರಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ…