ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ 127ನೇ ಜಯಂತಿ ಅಂಗವಾಗಿ ಮೈಸೂರಿನ ಅರಿವು ಸಂಸ್ಥೆ ಚಾಮುಂಡಿಪುರಂ ಸಾರ್ವಜನಿಕ ಗ್ರಂಥಾಲಯದಲ್ಲಿ ಬುಧವಾರ `ಮಾಸ್ತಿ ಕನ್ನಡ ಆಸ್ತಿ’ ಆಯೋಜಿಸಿತ್ತು. ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಮಾಸ್ತಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಮಾಸ್ತಿಯವರ ಮಾತೃಭಾಷೆ ತಮಿಳು. ಆದರೆ, ಅವರ ಹೃದಯ ಭಾಷೆ ಕನ್ನಡವಾಗಿತ್ತು. ಮೂಲತಃ ಕಂದಾಯ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ ಅವರು ಕನ್ನಡ ಭಾಷೆಯನ್ನು ಪ್ರೀತಿಸುತ್ತಾ, ಸರ್ಕಾರಿ ಕಚೇರಿಗಳಲ್ಲಿಯೂ…