Tag: MCC pourakarmikas

ಮೈಸೂರು ನಗರ ಪಾಲಿಕೆ ಪೌರ ಕಾರ್ಮಿಕರ ಮುಷ್ಕರ ಅಂತ್ಯ
ಮೈಸೂರು

ಮೈಸೂರು ನಗರ ಪಾಲಿಕೆ ಪೌರ ಕಾರ್ಮಿಕರ ಮುಷ್ಕರ ಅಂತ್ಯ

October 10, 2018

ಮೈಸೂರು: ಮುಖ್ಯಮಂತ್ರಿಗಳೊಂದಿಗಿನ ಮಾತುಕತೆ ಯಶಸ್ವಿಯಾಗಿದ್ದು, ಇದರೊಂದಿಗೆ ಕಳೆದ 7 ದಿನಗಳಿಂದ ಮೈಸೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕರು ನಡೆಸುತ್ತಿದ್ದ ಮುಷ್ಕರ ಅಂತ್ಯ ಗೊಂಡಿದೆ. ತಮ್ಮ ಬೇಡಿಕೆ ಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿರುವುದರಿಂದ ಮುಷ್ಕರ ಕೈಬಿಟ್ಟು ಇಂದು ರಾತ್ರಿಯಿಂದಲೇ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗುವಂತೆ ತಾವು ಪೌರ ಕಾರ್ಮಿಕರಿಗೆ ಸೂಚನೆ ನೀಡಿದ್ದೇನೆ ಎಂದು ಪೌರ ಕಾರ್ಮಿಕರ ಸಂಘದ ಮುಖಂಡರಾದ ಮಾಜಿ ಮೇಯರ್ ನಾರಾಯಣ ಅವರು `ಮೈಸೂರು ಮಿತ್ರ’ನಿಗೆ ತಿಳಿಸಿದ್ದಾರೆ. ಎಲ್ಲಾ 2000 ಮಂದಿ ಪೌರಕಾರ್ಮಿ ಕರು…

ಮೈಸೂರು ಪಾಲಿಕೆ ಗುತ್ತಿಗೆ ಪೌರ ಕಾರ್ಮಿಕರ ಮುಷ್ಕರ ಮುಂದುವರಿಕೆ
ಮೈಸೂರು

ಮೈಸೂರು ಪಾಲಿಕೆ ಗುತ್ತಿಗೆ ಪೌರ ಕಾರ್ಮಿಕರ ಮುಷ್ಕರ ಮುಂದುವರಿಕೆ

October 9, 2018

ಮೈಸೂರು:  ಮೈಸೂರು ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸ ಬೇಕೆಂಬುದು ಸೇರಿದಂತೆ ಇನ್ನಿತರೆ ಪ್ರಮುಖ ಬೇಡಿಕೆಯೊಂದಿಗೆ ಪಾಲಿಕೆಯ ಪೌರಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಆರನೇ ದಿನವಾದ ಸೋಮವಾರವೂ ಮುಂದುವರೆಯಿತು. ಮೈಸೂರು ಮಹಾನಗರ ಪಾಲಿಕೆ ಮುಖ್ಯ ದ್ವಾರದ ಬಳಿ ಪಾಲಿಕೆ ಪೌರಕಾರ್ಮಿಕರು ಮುಷ್ಕರ ನಡೆಸುತ್ತಿದ್ದು, ಇಂದು ನಿವೃತ್ತ ಐಎಎಸ್ ಅಧಿಕಾರಿ, ಬಿಜೆಪಿ ಮುಖಂಡ ಹಾಗೂ ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷರೂ ಆದ ಕೆ.ಶಿವರಾಂ, ಮಾಜಿ ಮೇಯರ್ ಪುರುಷೋತ್ತಮ್, ಮೈಸೂರು ಗಾಂಧಿ ನಗರದ ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ,…

ಖಾಯಂ ಪೌರ ಕಾರ್ಮಿಕರಿಂದ ಸ್ವಚ್ಛತೆ ಆರಂಭ
ಮೈಸೂರು

ಖಾಯಂ ಪೌರ ಕಾರ್ಮಿಕರಿಂದ ಸ್ವಚ್ಛತೆ ಆರಂಭ

October 8, 2018

ಮೈಸೂರು: ಮೈಸೂರು ಮಹಾನಗರಪಾಲಿಕೆಯಲ್ಲಿ ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕೆಂಬ ಪ್ರಮುಖ ಬೇಡಿಕೆಯೊಂದಿಗೆ ಇನ್ನಿತರ ಸೌಲಭ್ಯಕ್ಕಾಗಿ ಪಾಲಿಕೆಯ ಪೌರ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಐದನೇ ದಿನವಾದ ಭಾನುವಾರವೂ ಮುಂದುವರೆಯಿತು. ಮೈಸೂರು ಮಹಾನಗರ ಪಾಲಿಕೆಯ ಮುಖ್ಯ ದ್ವಾರದ ಬಳಿ ಪಾಲಿಕೆ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದು, ಮಂಗಳವಾರ (ಅ.9) ವಿಧಾನಸೌಧದಲ್ಲಿ ಸಭೆ ನಡೆಸಿ ಬೇಡಿಕೆ ಈಡೇರಿಸುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಪಾಲಿಕೆ ಖಾಯಂ…

ಮೈಸೂರು ಜಿಲ್ಲಾಡಳಿತದ ಮಾತುಕತೆ ವಿಫಲ
ಮೈಸೂರು

ಮೈಸೂರು ಜಿಲ್ಲಾಡಳಿತದ ಮಾತುಕತೆ ವಿಫಲ

October 7, 2018

ಮೈಸೂರು:  ಮುಷ್ಕರ ನಿರತ ಪೌರ ಕಾರ್ಮಿಕರೊಂದಿಗೆ ಜಿಲ್ಲಾಡಳಿತ ನಡೆಸಿದ ಮಾತುಕತೆ ವಿಫಲವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೇ ದೂರವಾಣಿ ಮೂಲಕ ಭರವಸೆ ನೀಡಿದರೂ ಪ್ರತಿಭಟನೆ ಕೈಬಿಡಲು ಒಪ್ಪದ ಪೌರ ಕಾರ್ಮಿಕರ ಮುಖಂಡರು, ಈ ಸಂಬಂಧ ನಾಳೆ(ಅ.7) ಒಮ್ಮತದ ತೀರ್ಮಾನಕ್ಕೆ ಬರಲು ನಿರ್ಧರಿಸಿದ್ದಾರೆ. ಖಾಯಂಮಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮೈಸೂರು ನಗರ ಪಾಲಿಕೆ ಪೌರಕಾರ್ಮಿಕರು ಕಳೆದ ನಾಲ್ಕು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಉನ್ನತ…

ಪೌರ ಕಾರ್ಮಿಕರ ಮುಷ್ಕರಕ್ಕೆ ಶಾಸಕ ನಾಗೇಂದ್ರ ಬೆಂಬಲ
ಮೈಸೂರು

ಪೌರ ಕಾರ್ಮಿಕರ ಮುಷ್ಕರಕ್ಕೆ ಶಾಸಕ ನಾಗೇಂದ್ರ ಬೆಂಬಲ

October 5, 2018

ಮೈಸೂರು: ಖಾಯಂ ಮಾತಿಗೆ ಆಗ್ರಹಿಸಿ ಪೌರಕಾರ್ಮಿಕರು ನಡೆಸುತ್ತಿ ರುವ ಮುಷ್ಕರಕ್ಕೆ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿ, ಮಾತನಾಡಿದ ಎಲ್. ನಾಗೇಂದ್ರ ಅವರು, ನಗರ ಪಾಲಿಕೆ ವ್ಯಾಪ್ತಿಯಲ್ಲಿ 3 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರಿಗೆ ಸಮರ್ಪಕ ವಾಗಿ ವೇತನ ಸಿಗುತ್ತಿಲ್ಲ. ಇಎಸ್‍ಐ, ಪಿಎಫ್ ಸೇರಿ ದಂತೆ ಯಾವುದೇ ಸೌಲಭ್ಯ ನೀಡುತ್ತಿಲ್ಲ. ಈ ಕಾರಣದಿಂದಲೇ ಪೌರಕಾರ್ಮಿಕರಿಗೆ ಚೆಕ್ ಮೂಲಕವೇ ವೇತನ ನೀಡಬೇಕೆಂದು…

ಖಾಯಂಮಾತಿಗೆ ಆಗ್ರಹಿಸಿ ಮೈಸೂರು ಪಾಲಿಕೆ ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಮೈಸೂರು

ಖಾಯಂಮಾತಿಗೆ ಆಗ್ರಹಿಸಿ ಮೈಸೂರು ಪಾಲಿಕೆ ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

October 4, 2018

ಮೈಸೂರು: ಸೇವಾ ಖಾಯಂಮಾತಿ ಹಾಗೂ ಇತರ ಸೌಲಭ್ಯಗಳಿಗೆ ಆಗ್ರಹಿಸಿ ಮೈಸೂರು ಮಹಾನಗರ ಪಾಲಿಕೆಯ ಸುಮಾರು 2000 ಪೌರಕಾರ್ಮಿಕರು ಸ್ವಚ್ಛತಾ ಕೆಲಸ ಸ್ಥಗಿತಗೊಳಿಸಿ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ತಮ್ಮ ಬೇಡಿಕೆಯನ್ನು ಈಡೇರಿಸಿ ಸರ್ಕಾರ ಲಿಖಿತ ಆದೇಶ ಹೊರಡಿ ಸುವವರೆಗೂ ತಾವು ಮುಷ್ಕರ ಸ್ಥಗಿತಗೊಳಿಸುವುದಿಲ್ಲ ಎಂದು ಪಟ್ಟು ಹಿಡಿದಿರುವ ಪೌರಕಾರ್ಮಿಕರು ಸಯ್ಯಾಜಿರಾವ್ ರಸ್ತೆಯಲ್ಲಿರುವ ಪಾಲಿಕೆ ಪ್ರಧಾನ ಕಚೇರಿ ಎದುರು ಫುಟ್‍ಪಾತ್‍ನಲ್ಲಿ ಪೆಂಡಾಲ್ ಹಾಕಿಕೊಂಡು ಧರಣಿ ನಡೆಸುತ್ತಿದ್ದಾರೆ. ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ-ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷರಾದ ಕರ್ನಾಟಕ…

Translate »