ದಲಿತ ವೆಲ್‍ಫೇರ್ ಟ್ರಸ್ಟ್‍ನಿಂದ ನವೆಂಬರ್‍ನಲ್ಲಿ ಟಿಪ್ಪು ಜಯಂತಿ; ಮಾಜಿ ಸಿಎಂ ಸಿದ್ದರಾಮಯ್ಯಗೆ ಅಭಿನಂದನಾ ಸಮಾರಂಭ ಮೈಸೂರು: ಮೈಸೂರಿನ ಇತರೆ ಸಂಘಟನೆಗಳ ಸಹಯೋಗದಲ್ಲಿ ದಲಿತ ವೆಲ್‍ಫೇರ್ ಟ್ರಸ್ಟ್ ನವೆಂಬರ್ ತಿಂಗಳಲ್ಲಿ ಮೈಸೂರಿನ ಕಲಾಮಂದಿರದಲ್ಲಿ ಅದ್ಧೂರಿ ಟಿಪ್ಪು ಜಯಂತಿ ಆಚರಣೆ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾವiಯ್ಯರಿಗೆ ಅಭಿ ನಂದನಾ ಸಮಾರಂಭ ಹಮ್ಮಿಕೊಳ್ಳಲಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಶಾಂತರಾಜು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಮಟ್ಟದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಆದೇಶ ಹೊರಡಿಸಿದ ಮಾಜಿ ಮುಖ್ಯಮಂತ್ರಿ…