Tag: MLA L Nagendra

ಕುಕ್ಕರಹಳ್ಳಿ ಕೆರೆ ಪ್ರವಾಸಿ ತಾಣವಾಗಿಸಲು ಸಚಿವ ಸಾರಾ ನಿರ್ಧಾರ
ಮೈಸೂರು

ಕುಕ್ಕರಹಳ್ಳಿ ಕೆರೆ ಪ್ರವಾಸಿ ತಾಣವಾಗಿಸಲು ಸಚಿವ ಸಾರಾ ನಿರ್ಧಾರ

November 23, 2018

ಮೈಸೂರು: ತಾಂತ್ರಿಕ ತಜ್ಞರ ಕಮಿಟಿ ವರದಿಯಂತೆ ಕುಕ್ಕರಹಳ್ಳಿ ಕೆರೆ ಅಭಿವೃದ್ಧಿ ಯೋಜನೆಯ ಬಾಕಿ ಉಳಿದಿರುವ ಕಾಮಗಾರಿಯನ್ನು ಮುಂದುವರೆಸಿ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಮೈಸೂರು ವಿಶ್ವವಿದ್ಯಾನಿಲಯದ ಇಂಜಿನಿಯರ್‌ಗಳಿಗೆ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ. ಪ್ರವಾಸೋದ್ಯಮ ಇಲಾಖೆಯಿಂದ 2009-10ನೇ ಸಾಲಿನಲ್ಲಿ ಮಂಜೂರಾ ಗಿದ್ಧ 2 ಕೋಟಿ ರೂ. ಅನುದಾನದಲ್ಲಿ ಕುಕ್ಕರಹಳ್ಳಿ ಕೆರೆ ಆವರಣವನ್ನು ಮೂಲ ಸೌಲಭ್ಯ ಕಲ್ಪಿಸಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ವಿಶ್ವವಿದ್ಯಾನಿಲಯವು ಪೂರೈಸಿದೆ. ಅದನ್ನು ಪರಿಶೀಲನೆ ನಡೆಸಿದ ಸಚಿವರು. ಈಗಾಗಲೇ 1.5 ಕೋಟಿ ರೂಗಳನ್ನು ಖರ್ಚು ಮಾಡಿ…

ಜೀವನದಲ್ಲಿ ಆಯುರ್ವೇದವನ್ನು ಒಂದು ಭಾಗವಾಗಿ ಅಳವಡಿಸಿಕೊಳ್ಳಿ
ಮೈಸೂರು

ಜೀವನದಲ್ಲಿ ಆಯುರ್ವೇದವನ್ನು ಒಂದು ಭಾಗವಾಗಿ ಅಳವಡಿಸಿಕೊಳ್ಳಿ

November 21, 2018

ಮೈಸೂರು: ಇಂದಿನ ಜೀವನಶೈಲಿಯ ನಡುವೆ ಜನರು ತಮ್ಮ ಜೀವನದಲ್ಲಿ ಆಯುರ್ವೇದವನ್ನು ಒಂದು ಭಾಗವಾಗಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ರಕ್ಷಣೆ ಮಾಡಿಕೊಳ್ಳುವಂತೆ ಚಾಮರಾಜ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ ಇಂದಿಲ್ಲಿ ಸಲಹೆ ನೀಡಿದರು. ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ರಾಷ್ಟ್ರೀಯ ಆಯುಷ್ ಮಿಷನ್ ಜಂಟಿ ಆಶ್ರಯದಲ್ಲಿ ಮೈಸೂರಿನ ಜೆ.ಕೆ.ಮೈದಾನ ದಲ್ಲಿರುವ ಅಮೃತ ಮಹೋತ್ಸವ ಭವನದಲ್ಲಿ ಮಂಗಳವಾರ 3ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಶ್ವಕ್ಕೆ ಆಯುರ್ವೇದದ ಕೊಡುಗೆಯನ್ನು ನೀಡಿದ ದೇಶ…

ಚಾಮರಾಜ ಕ್ಷೇತ್ರದಲ್ಲಿ ವಿವಿಧ  ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಮೈಸೂರು

ಚಾಮರಾಜ ಕ್ಷೇತ್ರದಲ್ಲಿ ವಿವಿಧ  ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

September 29, 2018

ಮೈಸೂರು:  ಶಾಸಕ ಎಲ್.ನಾಗೇಂದ್ರ ಅವರು ಚಾಮರಾಜ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಇಂದು ಗುದ್ದಲಿ ಪೂಜೆ ನೆರವೇರಿ ಸಿದರು. ಹೆಬ್ಬಾಳು ಮುಖ್ಯ ರಸ್ತೆಯಿಂದ ಭೈರವೇಶ್ವರನಗರದಲ್ಲಿನ ರಸ್ತೆ ನಿರ್ಮಾಣ ಕಾಮಗಾರಿಯನ್ನು 49 ಲಕ್ಷ ರೂ. ವೆಚ್ಚ ದಲ್ಲಿ ಕೈಗೊಂಡಿದ್ದು, ಮೈಸೂರು ನಗರ ಪಾಲಿಕೆ ಅಧಿಕಾರಿಗಳೊಂದಿಗೆ ಶಾಸಕರು ಕಾಮಗಾರಿಗೆ ಚಾಲನೆ ನೀಡಿದರು. ಅದೇ ರೀತಿ 15 ಲಕ್ಷ ರೂ.ಗಳಲ್ಲಿ ಜಯ ದೇವನಗರ, ಬಿಎಂಶ್ರೀನಗರ ಹಾಗೂ ಮೇಟಗಳ್ಳಿಯ ವಿವಿಧ ಭಾಗಗಳಲ್ಲಿ ಒಳ ಚರಂಡಿ ಕಾಮಗಾರಿಯನ್ನೂ ಆರಂಭಿಸ ಲಾಯಿತು. ಮಹಾನಗರ ಪಾಲಿಕೆ…

ಕೇಂದ್ರ, ರಾಜ್ಯ ಸರ್ಕಾರದ ಉದ್ಯೋಗ ಯೋಜನೆಗಳ  ಬಳಸಿಕೊಳ್ಳಲು ಶಾಸಕ ಎಲ್.ನಾಗೇಂದ್ರ ಕರೆ
ಮೈಸೂರು

ಕೇಂದ್ರ, ರಾಜ್ಯ ಸರ್ಕಾರದ ಉದ್ಯೋಗ ಯೋಜನೆಗಳ  ಬಳಸಿಕೊಳ್ಳಲು ಶಾಸಕ ಎಲ್.ನಾಗೇಂದ್ರ ಕರೆ

September 28, 2018

ಮೈಸೂರು: ನಿರು ದ್ಯೋಗ ನಿವಾರಣೆಗಾಗಿ ಅನೇಕ ಯೋಜನೆ ಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿವೆ. ಎಲ್ಲಾ ವರ್ಗದಲ್ಲೂ ಈ ಯೋಜನೆಗಳನ್ನು ಸದ್ಬಳÀಕೆ ಮಾಡಿಕೊಳ್ಳು ವವರ ಸಂಖ್ಯೆ ಹೆಚ್ಚಾಗಬೇಕು ಎಂದು ಶಾಸಕ ಎಲ್.ನಾಗೇಂದ್ರ ಅಭಿಪ್ರಾಯಪಟ್ಟರು. ಜೆಎಲ್‍ಬಿ ರಸ್ತೆಯಲ್ಲಿರುವ ರೋಟರಿ ಸಭಾಂ ಗಣದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ಪರಿಶಿಷ್ಟಜಾತಿ ಮತ್ತು ಪಂಗಡದ ಉದ್ಯಮಿದಾರರ ಸಂಘದ ಆಶ್ರಯದಲ್ಲಿ ನಡೆದ 2013-18ನೇ ಹಣಕಾಸು ಯೋಜನೆ ಅಡಿ `ನೂತನ ಜವಳಿ ವಿಶೇಷ ಘಟಕ ಹಾಗೂ ಗಿರಿಜನ ಉಪ…

ಹೆಬ್ಬಾಳದ ಜ್ಞಾನೇಶ್ವರಿ ವಿದ್ಯಾಲಯಕ್ಕೆ 10 ಲಕ್ಷ ರೂ. ಅನುದಾನ: ಚಾಮರಾಜ ಶಾಸಕ ಎಲ್.ನಾಗೇಂದ್ರ ಭರವಸೆ
ಮೈಸೂರು

ಹೆಬ್ಬಾಳದ ಜ್ಞಾನೇಶ್ವರಿ ವಿದ್ಯಾಲಯಕ್ಕೆ 10 ಲಕ್ಷ ರೂ. ಅನುದಾನ: ಚಾಮರಾಜ ಶಾಸಕ ಎಲ್.ನಾಗೇಂದ್ರ ಭರವಸೆ

September 10, 2018

ಭಾವಸಾರ ಕ್ಷತ್ರಿಯ ನವ ಪದವೀಧರರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಮೈಸೂರು: ಹೆಬ್ಬಾಳದ ಜ್ಞಾನೇಶ್ವರಿ ವಿದ್ಯಾಸಂಸ್ಥೆಯ ಅಭಿವೃದ್ಧಿಗಾಗಿ ತಮ್ಮ ಶಾಸಕರ ನಿಧಿಯಿಂದ 10 ಲಕ್ಷಕ್ಕೂ ಹೆಚ್ಚಿನ ಅನುದಾನ ನೀಡುವುದಾಗಿ ಶಾಸಕ ಎಲ್.ನಾಗೇಂದ್ರ ಭರವಸೆ ನೀಡಿದರು. ಮೈಸೂರು ಜಿಲ್ಲಾ ಭಾವಸಾರ ಕ್ಷತ್ರಿಯ ಪದವೀಧರ ಸಂಘ ಮತ್ತು ವಿಠಲ ರುಕ್ಮಿಣಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೈಸೂರಿನ ವಿಜಯನಗರ 3ನೆ ಹಂತದ ವಿಠಲ ರುಕ್ಮಿಣಿ ಕನ್ವೆನ್ಷನ್ ಹಾಲ್‍ನಲ್ಲಿ ಭಾನುವಾರ ಆಯೋಜಿಸಿದ್ದ ವಾರ್ಷಿಕ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಶಾಲೆಯ ಎದುರಿನಲ್ಲಿರುವ ಮೈದಾನವನ್ನು ವಿದ್ಯಾರ್ಥಿಗಳ…

ಕೆ.ಆರ್ ಆಸ್ಪತ್ರೆ ನರ್ಸಿಂಗ್ ಹಾಸ್ಟೆಲ್ ಭದ್ರತೆ ಹೆಚ್ಚಿಸಲು ಶಾಸಕ ನಾಗೇಂದ್ರ ಸೂಚನೆ
ಮೈಸೂರು

ಕೆ.ಆರ್ ಆಸ್ಪತ್ರೆ ನರ್ಸಿಂಗ್ ಹಾಸ್ಟೆಲ್ ಭದ್ರತೆ ಹೆಚ್ಚಿಸಲು ಶಾಸಕ ನಾಗೇಂದ್ರ ಸೂಚನೆ

July 24, 2018

ಮೈಸೂರು: ಅನಾಮಿಕ ವಿಕೃತ ಕಾಮಿಯೋರ್ವ ಅತಿಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿನಿಯರಿಗೆ ಆತಂಕ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಕೆ.ಆರ್.ಆಸ್ಪತ್ರೆ ಆವರಣದಲ್ಲಿರುವ ನರ್ಸಿಂಗ್ ಹಾಸ್ಟೆಲ್ ಭದ್ರತೆ ಹೆಚ್ಚಿಸುವಂತೆ ಶಾಸಕ ಎಲ್.ನಾಗೇಂದ್ರ ಅವರು ಇಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಇಂದು ನರ್ಸಿಂಗ್ ಕಾಲೇಜಿಗೆ ದಿಢೀರ್ ಭೇಟಿ ನೀಡಿದ ಶಾಸಕರು, ಹಾಸ್ಟೆಲ್ ವಿದ್ಯಾರ್ಥಿನಿಗಳಿಂದ ಮಾಹಿತಿ ಪಡೆದು ಸಮಸ್ಯೆಗಳನ್ನು ಆಲಿಸಿದರು. ಸರಿಯಾಗಿ ನಿರ್ವಹಣೆ ಮಾಡದ ಕಾರಣ ಶೌಚಾಲಯ, ಸ್ನಾನಗೃಹ, ಅಡುಗೆ ಮನೆಗಳು ಶಿಥಿಲಗೊಂಡಿರುವುದು ಪರಿಶೀಲನೆ ವೇಳೆ ಕಂಡು ಬಂದಿತು. ಹಾಸ್ಟೆಲ್‍ಗೆ…

ಮೈಸೂರು ಮಹಾರಾಣಿ ಕಾಲೇಜಲ್ಲಿ ಶಾಸಕ  ನಾಗೇಂದ್ರ ನೇತೃತ್ವದಲ್ಲಿ ಸ್ವಚ್ಛತೆ
ಮೈಸೂರು

ಮೈಸೂರು ಮಹಾರಾಣಿ ಕಾಲೇಜಲ್ಲಿ ಶಾಸಕ  ನಾಗೇಂದ್ರ ನೇತೃತ್ವದಲ್ಲಿ ಸ್ವಚ್ಛತೆ

July 22, 2018

ಮೈಸೂರು: ಮೈಸೂರಿನ ಮಹಾರಾಣಿ ವಿಜ್ಞಾನ-ಕಲಾ ಕಾಲೇಜಿನಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಮೈಸೂರು ಮಹಾನಗರ ಪಾಲಿಕೆ, ಕಾಲೇಜಿನ ಅಧ್ಯಾಪಕ ವೃಂದ, ವಿದ್ಯಾರ್ಥಿಗಳೊಂದಿಗೆ ಶ್ರಮದಾನ ಮಾಡುವುದರ ಮೂಲಕ ಮಹಾರಾಣಿ ಕಾಲೇಜಿನ ಕಸ ಮುಕ್ತಗೊಳಿಸುವ ಅಭಿಯಾನಕ್ಕೆ ನಾಂದಿ ಹಾಡಿದರು. ಶಾಸಕ ಎಲ್.ನಾಗೇಂದ್ರ, ಮೇಯರ್ ಭಾಗ್ಯವತಿ, ನಗರ ಪಾಲಿಕೆ ಆಯುಕ್ತ ಜಗದೀಶ್, ಆರೋಗ್ಯಾಧಿಕಾರಿ ನಾಗರಾಜ್, ಕಾಲೇಜಿನ ಜಂಟಿ ನಿರ್ದೇಶಕ ಉದಯಶಂಕರ್ ಹಾಗೂ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಕಸ ಗುಡಿಸಿ, ಅಲ್ಲಲ್ಲಿ ಬಿದ್ದಿದ್ದ ಕಸ-ಕಡ್ಡಿಗಳನ್ನು ತೆಗೆಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು….

ಇಂದಿನಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವ
ಮೈಸೂರು

ಇಂದಿನಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವ

July 17, 2018

ಮೈಸೂರು:  ಮೈಸೂರಿನ ಲಷ್ಕರ್ ಮೊಹಲ್ಲಾ (ಬೆಂಗಳೂರು ಪೇಟೆ)ದಲ್ಲಿ ಭಾವಸಾರ ಕ್ಷತ್ರಿಯ ಚಾಮುಂಡೇಶ್ವರಿ ಯುವಕರ ಭಕ್ತ ಮಂಡಳಿ ಆಶ್ರಯದಲ್ಲಿ ಜು.17ರಿಂದ 21ರವರೆಗೆ 78ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವ ಆಯೋಜಿಸಲಾಗಿದೆ. ಜು.17ರಂದು ಮಧ್ಯಾಹ್ನ 12 ಗಂಟೆಗೆ ಚಾಮುಂಡೇಶ್ವರಿ ಅಮ್ಮನವರ ಮೂರ್ತಿಯನ್ನು ಮರಾಠ ರಾಮಮಂದಿರದಿಂದ ಕಬೀರ್ ರಸ್ತೆ ಮೂಲಕ ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪಿಸಿ ವಿಶೇಷ ಪೂಜೆ ನೆರವೇರಿಸಲಾಗುವುದು. 18ರಂದು ಸಂಜೆ 6 ಗಂಟೆಗೆ ಭಾವಸಾರ ಕ್ಷತ್ರಿಯ ಮಹಿಳಾ ಮಂಡಳಿಯಿಂದ ಭಜನೆ, 7 ಗಂಟೆಗೆ ಮಕ್ಕಳಿಂದ ವೇಷಭೂಷಣ ಸ್ಪರ್ಧೆ…

ಲಯನ್ಸ್ ಪದಗ್ರಹಣ ಸಮಾರಂಭದಲ್ಲಿ ಶಾಸಕ ಎಲ್.ನಾಗೇಂದ್ರ
ಮೈಸೂರು

ಲಯನ್ಸ್ ಪದಗ್ರಹಣ ಸಮಾರಂಭದಲ್ಲಿ ಶಾಸಕ ಎಲ್.ನಾಗೇಂದ್ರ

July 6, 2018

ಮೈಸೂರು: ಪ್ರಪಂಚದ ಮೂಲೆ ಮೂಲೆಯಲ್ಲೂ ಲಯನ್ಸ್ ಅಂತರರಾಷ್ಟ್ರೀಯ ಸಂಸ್ಥೆ ಕೆಲಸ ನಿರ್ವಹಿಸುತ್ತಿದ್ದು, ಅಪಾರವಾದ ಸದಸ್ಯರನ್ನು ಒಳಗೊಂಡು ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ಸಾರ್ವಜನಿಕ ಬೆಂಬಲಕ್ಕೆ ನಿಂತಿದೆ ಎಂದು ಚಾಮರಾಜ ಕ್ಷೇತ್ರದ ನೂತನ ಶಾಸಕ ಲಯನ್‍ಎಲ್.ನಾಗೇಂದ್ರ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಖಾಸಗಿ ಹೊಟೇಲೊಂದರಲ್ಲಿ ಲಯನ್ಸ್ ಕ್ಲಬ್ ಆಫ್ ಮೈಸೂರು ಜಯಲಕ್ಷ್ಮೀಪುರಂ ವಲಯ-10, ಕ್ಷೇತ್ರ-1, ಜಿಲ್ಲೆ 317-ಎ ಸಂಸ್ಥೆಯ ನೂತನ ಅಧ್ಯಕ್ಷ ಲಯನ್ ಎಸ್.ಚಂದ್ರಶೇಖರ್, ಕಾರ್ಯದರ್ಶಿ ಲಯನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ), ಖಚಾಂಚಿ ಲಯನ್ ಎ.ಪಿ.ಭರತೇಶ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ…

ಭದ್ರತಾ ಸಿಬ್ಬಂದಿ ನೇಮಕಕ್ಕೆ ಹೊಸ ಟೆಂಡರ್‍ಗೆ ಸೂಚನೆ
ಮೈಸೂರು

ಭದ್ರತಾ ಸಿಬ್ಬಂದಿ ನೇಮಕಕ್ಕೆ ಹೊಸ ಟೆಂಡರ್‍ಗೆ ಸೂಚನೆ

June 29, 2018

ಮೈಸೂರು:  ಪಾಲಿಕೆಗೆ ಸೇರಿದ ಕಟ್ಟಡಗಳು, ಉದ್ಯಾನಗಳು, ವಾಣಿವಿಲಾಸ ವಾಟರ್ ವಕ್ರ್ಸ್, ವಾಹನ ನಿಲುಗಡೆ ಸ್ಥಳಗಳ ಭದ್ರತೆಗೆ ಕಾವಲುಗಾರರನ್ನು ಗುತ್ತಿಗೆ ಆಧಾರದಲ್ಲಿ ನಿಯೋಜಿಸಲು ಹೊಸದಾಗಿ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ನಗರ ಪಾಲಿಕೆ ಆಯುಕ್ತ ಕೆ.ಎಚ್.ಜಗದೀಶ್, ಕೌನ್ಸಿಲ್‍ಗೆ ಸ್ಪಷ್ಟಪಡಿಸಿದರು. ಸಭೆಯಲ್ಲಿ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಮಾತಿಗಿಳಿದ ಮಾಜಿ ಮೇಯರ್ ಪುರುಷೋತ್ತಮ್ ಅವರು, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಸಮರ್ಪಕವಾಗಿ ವೇತನ ನೀಡದೆ ವಂಚಿಸಲಾಗುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಬೇಕು. ಯಾವುದೇ ಕಾರಣಕ್ಕೂ ಗುತ್ತಿಗೆ ಅವಧಿಯನ್ನು ವಿಸ್ತರಿಸಬಾರದು….

1 2
Translate »