ಬೆಂಗಳೂರು: 2019ರ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕೇಂದ್ರದ ಎನ್‍ಡಿಎ ಸರ್ಕಾರ ಮುಂಗಾರಿನ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಘೋಷಿಸಿದೆ. ಈ ಮೂಲಕ ಅತಿವೃಷ್ಟಿ, ಅನಾವೃಷ್ಟಿಯಿಂದ ಕಂಗೆಟ್ಟಿದ್ದ, ಸೂಕ್ತ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ನೆರವಿಗೆ ಧಾವಿಸಿದೆ. ಪ್ರತಿ ಕ್ವಿಂಟಾಲ್ ಭತ್ತಕ್ಕೆ ಕನಿಷ್ಠ 200 ರೂ. ಬೆಂಬಲ ಬೆಲೆ ಘೋಷಿಸಲಾಗಿದ್ದು, ಕಳೆದ ವರ್ಷ 1,550 ರೂಪಾಯಿ ಇತ್ತು. ಈಗ 1,750 ರೂಪಾಯಿ ಆಗಿದೆ. 12.9% ಹೆಚ್ಚಳ ಮಾಡಲಾಗಿದೆ. ಗರಿಷ್ಠ ಬೆಂಬಲ ಬೆಲೆಯನ್ನು ರಾಗಿಗೆ…