ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕಚೇರಿಯಲ್ಲಿ ಸಾರ್ವಜನಿಕ ರಿಂದ ಅಹವಾಲು ಅರ್ಜಿ ಸ್ವೀಕಾರ ಪ್ರಕ್ರಿಯೆ ಇಂದಿನಿಂದ ಆರಂಭವಾಯಿತು. ನವೆಂಬರ್ 12ರಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಮುಡಾ ಕಚೇರಿ ಸಭಾಂಗಣದಲ್ಲಿ ಕಚೇರಿ ಸೇವೆಗಳ ಸಂಬಂಧ ಸಾರ್ವಜನಿಕರ ಅಹ ವಾಲು ಹಾಗೂ ಕುಂದುಕೊರತೆಗಳನ್ನು ಆಲಿಸಲು ಮುಡಾ ಅದಾಲತ್ ನಡೆಸುವ ಕಾರ್ಯಕ್ರಮ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರವು ಕಚೇರಿಯ ಸ್ಪಂದನ ಕೌಂಟರ್‍ನಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯವನ್ನು ಆರಂಭಿಸಿದೆ. ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ…