ಬೆಂಗಳೂರು: ರಾಜ್ಯದಲ್ಲಿ ಮೊದಲಿಗೆ ನಡೆದ ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮರು ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಾಲಾಗಿದೆ. ಕಾಂಗ್ರೆಸ್‍ನ ಮುನಿರತ್ನ 108064 ಮತ ಪಡೆದು, ತಮ್ಮ ಸಮೀಪ ಸ್ಪರ್ಧಿ ಬಿಜೆಪಿಯ ತುಳಸಿ ಮುನಿರಾಜು ಗೌಡ ಅವರನ್ನು 25492 ಮತಗಳ ಅಂತರದಿಂದ ಪರಾಭವಗೊಳಿಸಿ, ಮರು ಆಯ್ಕೆಗೊಂಡಿದ್ದಾರೆ. ಜೆಡಿಎಸ್‍ನ ರಾಮಚಂದ್ರ 60,360 ಮತ ಪಡೆದು 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೆಲುವಿನಿಂದ ಆ ಪಕ್ಷ ವಿಧಾನಸಭೆಯಲ್ಲಿ 78 ಸಂಖ್ಯಾ ಬಲ ಉಳಿಸಿಕೊಂಡಿದೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್-ಜೆಡಿಎಸ್…