ಮೈಸೂರು: ಎಲ್ಲಾ ಜಾತಿ, ಧರ್ಮದ ಜನರೊಂದಿಗೆ ಬೆರೆತು ಎಲ್ಲರ ನೋವು, ನಲಿವುಗಳಿಗೆ ಸ್ಪಂದಿಸುತ್ತಿರುವ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮಂಡ್ಯದ ಜಫ್ರುಲ್ಲಾ ಖಾನ್ ಅವರನ್ನು ವಿಧಾನ ಪರಿಷತ್‍ಗೆ ಆಯ್ಕೆ ಮಾಡಿ, ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಮುಸ್ಲಿಂ ಸಮುದಾಯಕ್ಕೂ ಪ್ರಾತಿನಿಧ್ಯ ನೀಡುವಂತೆ ಮೈಸೂರಿನ ಗೌಸಿಯಾನಗರದ ತದ್ರೀಬ್ ಎಜುಕೇಷನ್ ಅಂಡ್ ಚಾರಿಟಬಲ್ ಟ್ರಸ್ಟ್‍ನ ಪದಾಧಿಕಾರಿಗಳು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್‍ನ ಇಮ್ರಾನ್ ಷರೀಫ್, ದಲಿತ ಉಪ ಮುಖ್ಯಮಂತ್ರಿಂಯನೇಮಕ…