ಮೈಸೂರು: ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ (ಬಿಎಐ) ಮೈಸೂರು ಕೇಂದ್ರ, ಮೈಸೂರು ಬಿಲ್ಡರ್ ಚಾರಿಟಬಲ್ ಟ್ರಸ್ಟ್ (ಎಂಬಿಸಿಟಿ) ವತಿಯಿಂದ ಪರಿಸರ ಸ್ನೇಹಿ ಕಟ್ಟಡ ನಿರ್ಮಾಣ ಹಾಗೂ ಜೀವನಶೈಲಿ ಸಾಮಾಗ್ರಿಗಳ ವಸ್ತು ಪ್ರದರ್ಶನ `ಮೈ ಗ್ರೀನ್-2018’ ಜೂ.23ರಿಂದ 24ರವರೆಗೆ ನಡೆಯಲಿದೆ ಎಂದು ಬಿಎಐ ಮೈಸೂರು ಕೇಂದ್ರದ ಅಧ್ಯಕ್ಷ ಕೆ.ಸುಬ್ರಹ್ಮಣ್ಯರಾವ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್‍ನಲ್ಲಿ ಪರಿಸರ ಪೂರಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿಶ್ವ ಪರಿಸರ…