ಮೈಸೂರು: ಮೈಸೂರು ಸಿಲ್ಕ್ ಸೀರೆಗೆ ಹೆಚ್ಚಿನ ಬೇಡಿಕೆ ಇದ್ದು, ನೂತನ ನೇಯ್ಗೆ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮೈಸೂರು-ಮಾನಂದವಾಡಿ ರಸ್ತೆಯಲ್ಲಿರುವ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತಕ್ಕೆ ಇಂದು ಭೇಟಿ ನೀಡಿ, ರೇಷ್ಮೆ ನೇಯ್ಗೆ ಘಟಕವನ್ನು ಪರಿಶೀಲಿಸಿದ ಬಳಿಕ ನಿಗಮದ ಶತಮಾನೋತ್ಸವ ಭವನದಲ್ಲಿ ಬುಧವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ರೇಷ್ಮೆಗೆ ದೇಶ ಹಾಗೂ ವಿದೇಶದಲ್ಲಿ ಭಾರೀ ಬೇಡಿಕೆ ಇದೆ. ಮೈಸೂರಿನಲ್ಲಿರುವ ಕರ್ನಾಟಕ ರೇಷ್ಮೆ ಉದ್ಯಮಗಳ…