ಮೈಸೂರು,ಡಿ.2(ಎಂಟಿವೈ)- ಮೈಸೂರು ತಾಲೂಕಿನ ಸಿದ್ದಲಿಂಗಪುರದ ಶ್ರೀ ಷಷ್ಠಿ ಸುಬ್ರಹ್ಮಣ್ಯೇಶ್ವರಸ್ವಾಮಿ ದೇವಾ ಲಯದಲ್ಲಿ ಸೋಮವಾರ ವಿಜೃಂಭಣೆಯಿಂದ ನಡೆದ ಸ್ಕಂದ ಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಅಪಾರ ಸಂಖ್ಯೆ ಭಕ್ತರು ಪಾಲ್ಗೊಂಡು, ಹುತ್ತಕ್ಕೆ ಹಾಲೆರೆದು (ತನಿ) ಭಕ್ತಿಯಿಂದ ಪೂಜೆ ಸಲ್ಲಿಸಿದರು. ಮಾರ್ಗಶಿರ ಮಾಸದ ಶುದ್ಧ ಷಷ್ಠಿ ದಿನವಾದ ಇಂದು ಮುಂಜಾನೆಯಿಂದಲೇ ತುಂತುರು ಮಳೆಯ ನಡುವೆಯೂ ಸಿದ್ದಲಿಂಗಪುರದ ಶ್ರೀ ಷಷ್ಠಿ ಸುಬ್ರಹ್ಮಣ್ಯೇಶ್ವರಸ್ವಾಮಿ ದೇವಾಲ ಯದಲ್ಲಿ ಭಕ್ತಸಾಗರವೇ ನೆರೆದು, ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದರು. ದೇವಾಲಯದ ಮುಖ್ಯ ಅರ್ಚಕ ಎಂ.ವಿ. ಸುಬ್ರಹ್ಮಣ್ಯ ನೇತೃತ್ವದಲ್ಲಿ ಮುಂಜಾನೆ…
ಮಹಾ ರಾಜಕೀಯ ಹೈಡ್ರಾಮ ಕುರಿತು ಹೇಳಿಕೆ: ಅನಂತ್‍ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ನಾಯಕತ್ವ ಗರಂ
December 3, 2019ನವದೆಹಲಿ, ಡಿ.2- ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕುರಿತಂತೆ ಮಾಜಿ ಕೇಂದ್ರ ಸಚಿವ, ಸಂಸದ ಅನಂತ್‍ಕುಮಾರ್ ಹೆಗಡೆ ಹೇಳಿಕೆ ಬಿಜೆಪಿಯ ಹಿರಿಯ ನಾಯಕರ ಅಸಮಾ ಧಾನಕ್ಕೆ ಕಾರಣವಾಗಿದೆ.ಬಹುಮತದ ಕೊರತೆಯ ಹೊರತಾ ಗಿಯೂ 40,000 ಕೋಟಿ ರೂ.ಗಳ ಕೇಂದ್ರ ನಿಧಿಯನ್ನು ‘ದುರುಪಯೋಗಪಡಿಸಿಕೊಳ್ಳದಂತೆ’ ರಕ್ಷಿಸಲು ಕಳೆದ ತಿಂಗಳು ದೇವೇಂದ್ರ ಫಡ್ನವೀಸ್ ಅವರನ್ನು ಮಹಾರಾಷ್ಟ್ರದ ಮುಖ್ಯ ಮಂತ್ರಿಯನ್ನಾಗಿ ಮಾಡಲಾಗಿತ್ತು ಎಂಬ ಹೆಗಡೆ ಹೇಳಿಕೆಯ ಕುರಿತು ಬಿಜೆಪಿ ನಾಯಕತ್ವವು ಅಸಮಾಧಾನ ವ್ಯಕ್ತಪಡಿಸಿದೆ. ಸಂಸದರ ಹೇಳಿಕೆಯ ಬಗೆಗೆ ಅಸಮಾಧಾನವಿದ್ದು ಪಕ್ಷದ ಅಸಮಾಧಾನವನ್ನು ಅವರಿಗೆ…
ಮಹಿಳೆಯರು ಸಂಕಷ್ಟದಲ್ಲಿದ್ದರೆ 7 ಸೆಕೆಂಡ್‍ಗಳಲ್ಲಿ ‘ಸುರಕ್ಷಾ’ ಸಹಾಯ
December 3, 2019ಬೆಂಗಳೂರು, ಡಿ.2: ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ವರದಿಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ‘ಸುರಕ್ಷಾ ಆ್ಯಪ್’ ಅನ್ನು ಬೆಂಗಳೂರು ವ್ಯಾಪ್ತಿಯಲ್ಲಿರುವ ಮಹಿಳೆಯರು ಹೆಚ್ಚಾಗಿ ಬಳಕೆ ಮಾಡಿಕೊಳ್ಳಬೇಕು ಎನ್ನುವ ಅಭಿಯಾನ ಮತ್ತೆ ಮುನ್ನೆಲೆಗೆ ಬಂದಿದೆ. 2017ನೇ ಸಾಲಿನ ಏಪ್ರಿಲ್ 10ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರ ಪೆÇಲೀಸ್ ಆಯುಕ್ತ ಪ್ರವೀಣ್‍ಸೂದ್ ಅವರು ಸುರಕ್ಷಾ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದರು. ಇದೀಗ ಗೂಗಲ್ ಫ್ಲೇನಲ್ಲಿ 1 ಲಕ್ಷಕ್ಕೂ ಅಧಿಕ ಮಂದಿ ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಆ್ಯಪ್ ಕಾರ್ಯವೇನು?: ಮಕ್ಕಳು, ಯುವತಿಯರು, ಮಹಿಳೆಯರು…
ತಮಿಳುನಾಡಿನಲ್ಲಿ ಭಾರೀ ಮಳೆ: ಕುಸಿದು ಬಿದ್ದ ಮನೆಗಳು, 2 ಮಕ್ಕಳು ಸೇರಿ 15 ಸಾವು
December 3, 2019ಚೆನ್ನೈ,ಡಿ.2-ತಮಿಳುನಾಡು ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಗಳು ಕುಸಿದು ಬಿದ್ದ ಪರಿ ಣಾಮ 10 ಮಹಿಳೆಯರು, 2 ಮಕ್ಕಳು ಸೇರಿ ಒಟ್ಟು 15 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಭವಿಸಿದೆ. ಇನ್ನೆರಡು ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಿರುವಳ್ಳೂರ್, ವೆಲ್ಲೂರ್, ತಿರುವಣ್ಣಾಮಲೈ, ತೂತ್ತುಕುಡಿ, ರಾಮನಾಥಪುರಂ ಮತ್ತು ತಿರುನ ಲ್ವೇಲಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಗಳು ಮುನ್ಸೂಚನೆ ನೀಡಿದ್ದು, ಈಗಾಗಲೇ ಈ ಪ್ರದೇಶ ಗಳಲ್ಲಿ…
2023ಕ್ಕೆ ಏಡ್ಸ್ ಮುಕ್ತ ಮೈಸೂರು ಜಿಲ್ಲೆ ಗುರಿ
December 3, 2019ಮೈಸೂರು,ಡಿ.2(ಆರ್‍ಕೆಬಿ)- ಮೈಸೂರು ಜಿಲ್ಲೆಯಲ್ಲಿ 2019-20ರಲ್ಲಿ 548 ಹೆಚ್‍ಐವಿ /ಏಡ್ಸ್ ಪ್ರಕರಣಗಳು ಪತ್ತೆಯಾಗಿದ್ದು, 2023ರ ವೇಳೆಗೆ ಏಡ್ಸ್ ಮುಕ್ತ ಮೈಸೂರು ಜಿಲ್ಲೆ ಯಾಗಿಸಲು ಪಣ ತೊಟ್ಟಿರುವುದಾಗಿ ಮೈಸೂರು ಜಿಲ್ಲಾ ಏಡ್ಸ್ ನಿಯಂತ್ರಣಾ ಧಿಕಾರಿ ಡಾ.ಬಿ.ರವಿ ಇಂದಿಲ್ಲಿ ತಿಳಿಸಿದರು. ಮೈಸೂರಿನಲ್ಲಿ ಫಾರೂಖಿಯಾ ಫಾರ್ಮಸಿ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ, ಐಎಂಎ ಮೈಸೂರು ಇನ್ನಿತರ…
ಡಿ.14, 15ರಂದು ಮೈಸೂರಿನಲ್ಲಿ ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಸಮ್ಮೇಳನ
December 3, 2019ಮೈಸೂರು, ಡಿ.2(ಪಿಎಂ)- ಅಖಿಲ ಭಾರತ ವಕೀಲರ ಒಕ್ಕೂಟದ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಮೈಸೂರಿನಲ್ಲಿ ಡಿ.14 ಹಾಗೂ 15ರಂದು 8ನೇ ರಾಜ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಹಿರಿಯ ವಕೀಲ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಸಿ.ಎಂ.ಜಗದೀಶ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆಯುತ್ತಿರುವ ಪ್ರಥಮ ಸಮ್ಮೇಳನ ಇದಾಗಿದ್ದು, ಕರ್ನಾಟಕ ರಾಜ್ಯ ಮುಕ್ತ ವಿವಿ ಕಾವೇರಿ ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದೆ. ಡಿ.14ರಂದು ಬೆಳಿಗ್ಗೆ 10.30ಕ್ಕೆ ಸಮ್ಮೇಳನದ ಉದ್ಘಾಟನೆಯನ್ನು ಒಕ್ಕೂಟದ…
ಲೋಕಸಭೆ, ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಹೈದರಾಬಾದ್ ಅತ್ಯಾಚಾರ ಪ್ರಕರಣ: ಕಠಿಣ ಕಾನೂನಿಗೆ ಸಿದ್ಧ ಎಂದ ಸರ್ಕಾರ
December 3, 2019ನವದೆಹಲಿ, ಡಿ.2-ಹೈದರಾಬಾದ್‍ನಲ್ಲಿ ಪಶುವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಅತ್ಯಾಚಾರ ಪ್ರಕರಣವನ್ನು ಹಿಡಿದು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಸದಸ್ಯರು ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸ್ಪೀಕರ್ ಓಂ ಬಿರ್ಲಾ ಅವರು ಶೂನ್ಯ ಅವಧಿಯಲ್ಲಿ ಪ್ರಕರಣವನ್ನು ಚರ್ಚೆಗೆ ತೆಗೆದುಕೊಳ್ಳುವಂತೆ ಸಲಹೆ ನೀಡಿದರು. ಈ ನಡುವೆ ಮಾತನಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಪಶುವೈದ್ಯೆ ಮೇಲೆ ನಡೆದ…
‘ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು’
December 3, 2019ನವದೆಹಲಿ, ಡಿ.2- ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಪ್ರತಿಧ್ವನಿಸಿದ್ದು, ಈ ಕುರಿತಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೀ ಡಾಗಿದೆ. ಮಹಿಳೆಯರ ಮೇಲಿನ ಅಪರಾಧ ಘಟನೆಗಳು ಹೆಚ್ಚಾಗುತ್ತಿ ರುವ ವಿಚಾರದ ಬಗ್ಗೆ ನಡೆದ ಚರ್ಚೆಯೊಂದರಲ್ಲಿ ಮಾತನಾಡುತ್ತಿದ್ದ ಜಯಾ ಬಚ್ಚನ್, ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ತಂದು ನಿಲ್ಲಿಸಿ ಥಳಿಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅವರ ಈ ಹೇಳಿಕೆ ಇದೀಗ ವ್ಯಾಪಕ ವಿವಾದಕ್ಕೆ ಕಾರಣವಾಗಿದ್ದು, ಒಬ್ಬ ಜವಾಬ್ದಾರಿಯುತ ಸಂಸದೆಯಾಗಿ ಜಯಾ…
ಛತ್ತೀಸ್‍ಗಡದಲ್ಲಿ ಅರ್ಧ ಸುಟ್ಟ ಮಹಿಳಾ ಶವ ಪತ್ತೆ
December 3, 2019ರಾಯ್‍ಪುರ್: ತೆಲಂಗಾಣದ ಪಶುವೈದ್ಯೆ ಪ್ರಕರಣದ ಕಿಚ್ಚು ಹಾರುವ ಮುನ್ನವೇ ಛತ್ತೀಸ್‍ಗಡದ ರಾಜ್‍ಪುರ್ ಜಿಲ್ಲೆಯಾ ಮುರ್ಕಾ ಗ್ರಾಮದಲ್ಲಿ ಅರ್ಧ ಸುಟ್ಟ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೆÇಲೀಸರು ಹೇಳಿದ್ದಾರೆ. ತೆಲಂಗಾಣದ ಪಶುವೈದ್ಯೆ ಅವರ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ, ಪೆಟ್ರೋಲ್ ಹಾಕಿ ಸುಡಲಾಗಿತ್ತು. ಈ ಪ್ರಕರಣ ಇಡೀ ಭಾರತವನ್ನೆ ನಡುಗಿಸಿತ್ತು. ಹೀಗಿರುವಾಗ ಛತ್ತೀಸ್‍ಗಡದಲ್ಲಿ ಇನ್ನೊಂದು ಅರ್ಧ ಸುಟ್ಟ ಮಹಿಳೆಯ ದೇಹ ಪತ್ತೆಯಾಗಿದೆ. ಈ ವಿಚಾರದ ಬಗ್ಗೆ ಮಾತನಾಡಿರುವ ಬಲರಾಂಪುರ ಎಸ್ಪಿ ಟಿ.ಆರ್.ಕೋಶಿಮಾ ಅವರು, ಅರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳಾ…
ಮೈಸೂರು ವಿಮಾನ ನಿಲ್ದಾಣಕ್ಕೆ ಜಯಚಾಮರಾಜೇಂದ್ರ ಹೆಸರಿಡಲು ಆಗ್ರಹ
December 3, 2019ಮೈಸೂರು,ಡಿ.2-ಮೈಸೂರಿನ ವಿಮಾನ ನಿಲ್ದಾಣಕ್ಕೆ ಶ್ರೀಜಯ ಚಾಮ ರಾಜೇಂದ್ರ ಒಡೆಯರ್‍ರವರ ಹೆಸ ರಿಡಬೇಕೆಂದು ಎಫ್‍ಕೆಸಿಸಿಐ ಮಾಜಿ ಅಧ್ಯಕ್ಷ ಸುಧಾಕರ ಎಸ್.ಶೆಟ್ಟಿ ಒತ್ತಾಯಿಸಿ ದ್ದಾರೆ. ಮೈಸೂರು ಮಹಾರಾಜರು ದಕ್ಷ, ನಿಷ್ಠಾವಂತ, ಜನಾನುರಾಗಿ ಮಹಾರಾಜ ರಾಗಿ ಆಡಳಿತ ನಡೆಸಿದ್ದಾರೆ. 1956ರ ನಂತರ ಭಾಷಾವಾರು ವಿಂಗಡಣೆಯಾದಾಗ ನಮ್ಮ ರಾಜ್ಯಕ್ಕೆ ಜಯಚಾಮರಾಜೇಂದ್ರ ಒಡೆಯರ್ ರವರು ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ವಾದ ಕಾಣಿಕೆ ನೀಡಿದ್ದಾರೆ. ಆದ್ದರಿಂದ ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾ ರಾಜರ ಹೆಸರಿಡುವುದು ಸೂಕ್ತವಾಗಿದೆ ಎಂದು ಹೇಳಿದ್ದಾರೆ. ತಮ್ಮ ಆಡಳಿತದ ಅವಧಿಯಲ್ಲಿ ಕಲೆ ಮತ್ತು…










