Tag: Mysore

ಮೈಸೂರು ವಾರಿಯರ್ಸ್‍ಗೆ ದಾಖಲೆಯ ಜಯ
ಮೈಸೂರು

ಮೈಸೂರು ವಾರಿಯರ್ಸ್‍ಗೆ ದಾಖಲೆಯ ಜಯ

August 27, 2019

ಮೈಸೂರು,ಆ.26- ಕೆಪಿಎಲ್ ಇತಿಹಾಸ ದಲ್ಲಿಯೇ ವೇಗದ ಶತಕ ಸಿಡಿಸಿದ ಅನಿರುದ್ಧ ಜೋಷಿ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಮೈಸೂರು ವಾರಿಯರ್ಸ್ 241ರನ್‍ಗಳ ಬೃಹತ್ ಮೊತ್ತ ಬೆನ್ನತ್ತುವ ಮೂಲಕ ದಾಖಲೆಯ ಜಯ ಸಾಧಿಸಿದೆ. ಬಳ್ಳಾರಿ ಟಸ್ಕರ್ಸ್ ನೀಡಿದ 240ರನ್‍ಗಳ ಗುರಿ ಬೆನ್ನ ತ್ತಿದ್ದ ಮೈಸೂರು ವಾರಿಯರ್ಸ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 241ರನ್‍ಗಳಿಸಿ 3 ವಿಕೆಟ್‍ಗಳ ಗೆಲುವಿನ ನಗೆ ಬೀರಿತ್ತು. ಈ ಮೂಲಕ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಮೈಸೂರು ಪರ ಇನ್ನಿಂಗ್ಸ್ ಆರಂಭಿಸಿದ ವಿನಯ್…

ಪ್ರವಾಹ ಸಂತ್ರಸ್ತರಿಗೆ ಐದು ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ: ಪ್ರತಿ ಮಂಗಳವಾರ ಕ್ಯಾಬಿನೆಟ್ ಸಭೆ
ಮೈಸೂರು

ಪ್ರವಾಹ ಸಂತ್ರಸ್ತರಿಗೆ ಐದು ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ: ಪ್ರತಿ ಮಂಗಳವಾರ ಕ್ಯಾಬಿನೆಟ್ ಸಭೆ

August 27, 2019

ಬೆಂಗಳೂರು, ಆ.26- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಪ್ರವಾಹ ದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಹೊಸ ಮನೆ ನಿರ್ಮಾಣ ಮಾಡಿಕೊಡಲು ನಿರ್ಧರಿಸಲಾಗಿದೆ. ಕರ್ನಾ ಟಕದಲ್ಲಿ ಉಂಟಾದ ಪ್ರವಾಹ ಪರಿಹಾರ ಸೇರಿದಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ಮುಟ್ಟಿಸುವ ಹಿನ್ನೆಲೆಯಲ್ಲಿ ಸಂಪುಟ ಸಭೆ ಬಹುಮುಖ್ಯವಾಗಿತ್ತು. ಈ ಸಭೆಯಲ್ಲಿ ಸಚಿವರಾದ ಶ್ರೀರಾಮುಲು, ಜೆಸಿ ಮಾಧುಸ್ವಾಮಿ, ಗೋವಿಂದ ಕಾರಜೋಳ, ಸಿಸಿ ಪಾಟೀಲ್, ವಿ.ಸೋಮಣ್ಣ, ನಾಗೇಶ್, ಈಶ್ವರಪ್ಪ ಸೇರಿದಂತೆ ಹಲವು…

ಪಿ.ಚಿದಂಬರಂ ಮತ್ತೆ  4 ದಿನ ಸಿಬಿಐ ವಶಕ್ಕೆ
ಮೈಸೂರು

ಪಿ.ಚಿದಂಬರಂ ಮತ್ತೆ  4 ದಿನ ಸಿಬಿಐ ವಶಕ್ಕೆ

August 27, 2019

ನವದೆಹಲಿ,ಆ.26-ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಸಚಿವ ಪಿ.ಚಿದಂ ಬರಂ ಅವರ ಸಂಕಷ್ಟ ಮುಂದುವರಿದಿದೆ. ಸುಪ್ರೀಂಕೋರ್ಟ್ ನಿಂದ ಜಾಮೀನು ದೊರೆತು ಬಂಧನದಿಂದ ಹೊರಬರ ಬಹುದು ಎಂಬ ನಿರೀಕ್ಷೆಯಲ್ಲಿದ್ದ ಅವರಿಗೆ ಆಘಾತ ಎದು ರಾಗಿದೆ. ಅತ್ತ ಸಿಬಿಐ ವಿಶೇಷ ನ್ಯಾಯಾಲಯವು ಅವರನ್ನು ಮತ್ತೆ 4 ದಿನ ಸಿಬಿಐ ವಶಕ್ಕೆ ಒಪ್ಪಿಸಿದೆ. ಇದರಿಂದ ಅವರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸಿಬಿಐ ವಿಶೇಷ ನ್ಯಾಯಾಲಯವು ಚಿದಂಬರಂ ಅವರ ಸಿಬಿಐ ವಶದ ಅವಧಿಯನ್ನು ಆ.30ರವರೆಗೂ ವಿಸ್ತರಿಸಿದೆ. ಸುಪ್ರೀಂಕೋರ್ಟ್ ಮುಂದೆ ಚಿದಂಬರಂ ಅವರ ಮೂರು…

ಕನ್ನಡ ಭಾಷಾ ತಂತ್ರಾಂಶ ಅಭಿವೃದ್ಧಿಯಾಗಲಿ
ಮೈಸೂರು

ಕನ್ನಡ ಭಾಷಾ ತಂತ್ರಾಂಶ ಅಭಿವೃದ್ಧಿಯಾಗಲಿ

August 27, 2019

ಮೈಸೂರು, ಆ.26(ಪಿಎಂ)- ಪ್ರಸ್ತುತ ಇಂಗ್ಲಿಷ್ ಭಾಷೆಯೊಂದಿಗೆ ಪೈಪೋಟಿ ನಡೆಸಿ ಕನ್ನಡ ಭಾಷೆ ಉಳಿದು ಬೆಳೆಯಬೇಕಿದ್ದು, ಅದಕ್ಕಾಗಿ ಕನ್ನಡ ಭಾಷಾ ತಂತ್ರಾಂಶದ (ಸಾಫ್ಟ್‍ವೇರ್) ಅಭಿವೃದ್ಧಿಯಾಗಬೇಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನು ಬಳಿಗಾರ್ ಅಭಿಪ್ರಾಯಪಟ್ಟರು. ಹಾವೇರಿಯ ಗಳಗನಾಥ ಮತ್ತು ನಾ. ಶ್ರೀ ರಾಜಪುರೋಹಿತ ಪ್ರತಿಷ್ಠಾನ, ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಜಂಟಿ ಆಶ್ರಯದಲ್ಲಿ ಮೈಸೂರಿನ ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2018ರ ಗಳಗ ನಾಥ ಮತ್ತು ನಾ.ಶ್ರೀ ರಾಜಪುರೋಹಿತ ಪ್ರಶಸ್ತಿ ಪ್ರದಾನ…

ನೆರೆ ಸಂತ್ರಸ್ತ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ
ಮೈಸೂರು

ನೆರೆ ಸಂತ್ರಸ್ತ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

August 27, 2019

ಮೈಸೂರು, ಆ.26(ಪಿಎಂ)-ನೆರೆ ಹಾವಳಿಗೆ ಸಿಲುಕಿ ಮನೆ-ಮಠ ಕಳೆದು ಕೊಂಡು ಬೆಳೆ ನಷ್ಟದಿಂದ ಕಂಗಾಲಾದ ರೈತರಿಗೆ ಸರ್ಕಾರ ನಿಗದಿಪಡಿಸಿರುವ ಪರಿ ಹಾರ ಮೊತ್ತವನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರ ಶೇಖರ್ ಬಣ) ವತಿಯಿಂದ ಸೋಮ ವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಇತ್ತೀ ಚೆಗೆ ಉಂಟಾದ ಮಳೆ ಹಾನಿಯಿಂದ ರೈತರು ತತ್ತರಿಸಿ ಹೋಗಿದ್ದು, ಒಂದು ಹೊತ್ತಿನ ಊಟಕ್ಕೂ ಬೇಡುವ ಪರಿಸ್ಥಿತಿ ಎದುರಾಗಿದೆ….

ಅರಮನೆ ಆವರಣದಲ್ಲಿ ಮಾವುತರು, ಕಾವಾಡಿಗಳಿಗೆ ಆಯುಷ್ ಶಿಬಿರ ಪ್ರತಿನಿತ್ಯ ಆರೋಗ್ಯ ತಪಾಸಣೆ
ಮೈಸೂರು

ಅರಮನೆ ಆವರಣದಲ್ಲಿ ಮಾವುತರು, ಕಾವಾಡಿಗಳಿಗೆ ಆಯುಷ್ ಶಿಬಿರ ಪ್ರತಿನಿತ್ಯ ಆರೋಗ್ಯ ತಪಾಸಣೆ

August 27, 2019

ಮೈಸೂರು, ಆ. 26(ಆರ್‍ಕೆ)- ದಸರಾ ಗಜಪಡೆಯೊಂದಿಗೆ ಆಗಮಿಸಿರುವ ಮಾವುತರು ಮತ್ತು ಕಾವಾಡಿಗಳಿಗಾಗಿ ಮೈಸೂರು ಅರಮನೆ ಆವರಣದಲ್ಲಿ ತಾತ್ಕಾಲಿಕ ಆಯುಷ್ ಶಿಬಿರ ಆರಂಭಿಸಲಾಗಿದೆ. ಆಯುಷ್ ಇಲಾಖೆಯಿಂದ ತೆರೆದಿರುವ ಆರೋಗ್ಯ ಶಿಬಿರವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಇಂದು ಉದ್ಘಾಟಿಸಿದರು. ಪ್ರತೀ ದಿನ ಬೆಳಿಗ್ಗೆ 9ಗಂಟೆಯಿಂದ ಸಂಜೆ 4.30 ರವರೆಗೆ. ಸರ್ಕಾರಿ ರಜಾ ದಿನಗಳಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆವರೆಗೆ ಆಯುರ್ವೇದÀ ವೈದ್ಯರು ಹಾಜರಿದ್ದು ಕಾವಾಡಿಗಳು, ಮಾವುತರು ಹಾಗೂ ಕುಟುಂಬದವರ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡುವರು….

ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧುಗೆ ವಿಶ್ವ ಚಾಂಪಿಯನ್ ಕಿರೀಟ
ಮೈಸೂರು

ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧುಗೆ ವಿಶ್ವ ಚಾಂಪಿಯನ್ ಕಿರೀಟ

August 26, 2019

ಸ್ವಿಜರ್ಲೆಂಡ್, ಆ.25- ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‍ಶಿಪ್ ಮುಡಿಗೇರಿಸಿಕೊಳ್ಳುವ ಮೂಲಕ ಇತಿಹಾಸ ನಿರ್ಮಿಸಿದ್ದು, ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ. ಸ್ವಿಜರ್ಲೆಂಡ್‍ನ ಬಾಸೆಲ್‍ನಲ್ಲಿ ಭಾನು ವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ತಮ್ಮ ಬದ್ಧ ವೈರಿ ಜಪಾನ್‍ನ ನೋಜೊಮಿ ಓಕು ಹರಾ ವಿರುದ್ಧ 21-7, 21-7ರ ಅಂತರದ ಗೆಲುವು ದಾಖಲಿಸುವ ಮೂಲಕ ದಾಖಲೆ ಬರೆದು ಚೊಚ್ಚಲ ಬಂಗಾರದ ಕನಸು ನನಸು ಮಾಡಿಕೊಂಡಿದ್ದಾರೆ. 24ರ…

ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್‍ನಂತೆ ಕೆಲಸ ಮಾಡಿದೆ…
ಮೈಸೂರು

ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್‍ನಂತೆ ಕೆಲಸ ಮಾಡಿದೆ…

August 26, 2019

ಮಾಜಿ ಸಿಎಂ ಸಿದ್ದರಾಮಯ್ಯನವರೇ ನನ್ನ ಮೊದಲ ಶತ್ರು ಶಾಸಕರ ರಾಜೀನಾಮೆಗೂ ಸಿದ್ದರಾಮಯ್ಯ ನೇರ ಕಾರಣ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶದ ಕಿಡಿ ಬೆಂಗಳೂರು, ಆ.25-ಮೈತ್ರಿ ಸರ್ಕಾರ ಪತನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆರೋಪಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೂಡ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮೈತ್ರಿ ಸರ್ಕಾರ ದಲ್ಲಿ ನಾನು ಮುಖ್ಯಮಂತ್ರಿಯಾಗಿರಲಿಲ್ಲ. ಕ್ಲರ್ಕ್ ರೀತಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ. ಖಾಸಗಿ ವೆಬ್‍ಸೈಟ್‍ವೊಂದಕ್ಕೆ…

ನನ್ನನ್ನು ಕುಮಾರಸ್ವಾಮಿ ಶತ್ರುವಿನಂತೆ ನೋಡಿದ್ದರಿಂದಲೇ ಮೈತ್ರಿ ಸರ್ಕಾರ ಪತನವಾಯಿತು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು
ಮೈಸೂರು

ನನ್ನನ್ನು ಕುಮಾರಸ್ವಾಮಿ ಶತ್ರುವಿನಂತೆ ನೋಡಿದ್ದರಿಂದಲೇ ಮೈತ್ರಿ ಸರ್ಕಾರ ಪತನವಾಯಿತು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

August 26, 2019

ಮೈಸೂರು, ಆ.25(ಎಂಟಿವೈ)- ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದಾಗ ನನ್ನನ್ನು ಮಿತ್ರನಂತೆ ನೋಡದೆ ಶತ್ರುವಿನಂತೆ ನೋಡಿದ್ದರಿಂದಲೇ ಸರ್ಕಾರ ಪತನವಾಯಿತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾನುವಾರ ವಿಶೇಷ ವಿಮಾನದಲ್ಲಿ ಬೆಂಗಳೂರಿ ನಿಂದ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾ ಣಕ್ಕೆ ಆಗಮಿಸಿದ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಇತ್ತೀಚೆಗಷ್ಟೆ ಬಿಜೆಪಿಗಿಂತ ಸಿದ್ದ ರಾಮಯ್ಯ ಅವರೇ ನನ್ನ ಮೊದಲ ಶತ್ರು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿದ್ದವರು ಎಲ್ಲರನ್ನು ವಿಶ್ವಾಸದಿಂದ…

ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ
ಮೈಸೂರು

ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ

August 26, 2019

ನವದೆಹಲಿ, ಆ.25- ಕೊನೆಗೂ ಖಾತೆ ಹಂಚಿಕೆಗೆ ಕಾಲ ಕೂಡಿ ಬಂದಿದ್ದು, ನಾಳೆ ಬೆಳಿಗ್ಗೆ 9 ಗಂಟೆಗೆ ಖಾತೆಗಳ ಪಟ್ಟಿ ರವಾನೆಯಾಗಲಿದೆ. ನಾಳೆಯೇ ಖಾತೆ ಹಂಚಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾತೆ ಹಂಚಿಕೆ ಬಳಿಕ ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ. ನೆರೆ ಪರಿಸ್ಥಿತಿ ಬಗ್ಗೆ ವರದಿ ಕೇಳಿದ್ದೆ, ನಾಳೆ ವರದಿ ಪಡೆದು ಮುಂದಿನ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು….

1 189 190 191 192 193 330
Translate »