ಬೆಂಗಳೂರು, ಜು.26-ಬಿ.ಎಸ್.ಯಡಿಯೂ ರಪ್ಪ ಅವರು ಇಂದು ನಾಲ್ಕನೇ ಬಾರಿಗೆ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರೈತರು ಮತ್ತು ನೇಕಾರರಿಗೆ ಬಂಪರ್ ಕೊಡುಗೆ ನೀಡುವ ಮೂಲಕ ತಮ್ಮದು ರೈತರ ಹಾಗೂ ನೇಕಾರರ ಪರ ಸರ್ಕಾರ ಎಂದು ಘೋಷಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರದ ಬಳಿಕ ವಿಧಾನ ಸೌಧದಲ್ಲಿ ಪ್ರಥಮ ಸಂಪುಟ ಸಭೆ ನಡೆಸಿದ ಮುಖ್ಯ ಮಂತ್ರಿಗಳು, ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ರೂ. ರೈತರಿಗೆ ನೀಡಲಾಗುತ್ತದೆ. ಆ ಯೋಜ ನೆಯ…
ಹೊಸ ಸವಾಲು ಎದುರಿಸಲು ಸಜ್ಜು
July 27, 2019ಬೆಂಗಳೂರು, ಜು. 26- ಛಲ ಎಂದರೆ ಯಡಿ ಯೂರಪ್ಪ, ಯಡಿಯೂರಪ್ಪ ಎಂದರೆ ಛಲ ಎಂಬುದು ರಾಜ್ಯದ ಬಹಳಷ್ಟು ಜನರಿಗೆ ಗೊತ್ತಿದೆ. ರಾಜ್ಯದ ರಾಜಕೀಯ ಚಿತ್ರ ವಿಚಿತ್ರ ತಿರುವುಗಳತ್ತ ಸಾಗಿ ನಿರೀಕ್ಷೆ ಮಾಡಲಾಗದ ಘಟನಾವಳಿಗಳು ಜರುಗುತ್ತಿರುವಾಗ ಅವರು 4ನೇ ಭಾರಿಗೆ ನೂತನ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಿ, ಹೊಸ ಸವಾಲು ಎದುರಿಸಲು ಹೊರಟಿರುವುದು ನಿಜಕ್ಕೂ ಮೆಚ್ಚ ಬೇಕಾದ ವಿಷಯವೇ ಆಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರಲಿಲ್ಲ. ಆದರೆ ನಾನೇ ಮುಂದಿನ ಮುಖ್ಯಮಂತ್ರಿ ಎಂದೂ…
ಆಷಾಢದ ಕೊನೆ ಶುಕ್ರವಾರ ಲಕ್ಷಾಂತರ ಭಕ್ತರಿಂದ ದೇವಿಯ ದರ್ಶನ
July 27, 2019ಮೈಸೂರು,ಜು.26(ಎಂಟಿವೈ)-ತುಂತುರು ಮಳೆ, ಚಳಿ, ಗಾಳಿ ನಡುವೆ ಆಷಾಢ ಮಾಸದ ಕೊನೆ ಶುಕ್ರ ವಾರ ಚಾಮುಂಡಿಬೆಟ್ಟದ ದೇವಾಲಯದಲ್ಲಿ ನಡೆದ ವಿಶೇಷ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರ ದಂಡು ನೆರೆದು, ನಾಡದೇವಿಯ ದರ್ಶನ ಪಡೆದು ಜಯಘೋಷ ಮೊಳಗಿಸಿ ಪುಳಕಗೊಂಡರು. ಶಕ್ತಿ ದೇವತೆಗಳ ಆರಾಧನೆಯ ಮಾಸವಾದ ಆಷಾ ಢದ ಕೊನೆ ಶುಕ್ರವಾರವಾಗಿದ್ದ ಹಿನ್ನೆಲೆಯಲ್ಲಿ ನಾಡಿ ನಾದ್ಯಂತದಿಂದ ಭಕ್ತರ ದಂಡು ತಂಡೋಪತಂಡವಾಗಿ ಮುಂಜಾನೆಯಿಂದಲೇ ಚಾಮುಂಡಿಬೆಟ್ಟಕ್ಕೆ ಆಗಮಿಸಿ ದ್ದರಿಂದ ರಾತ್ರಿವರೆಗೂ ಜನ ಜಂಗುಳಿ ಕಂಡು ಬಂತು. ಕಳೆದ 3 ವಾರಗಳಿಗೆ ಹೋಲಿಸಿದರೆ ಇಂದು…
ಬಸ್ ಬ್ರೇಕ್ ವೈಫಲ್ಯ: ಮತ್ತೊಂದು ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಚಾ.ಬೆಟ್ಟದಲ್ಲಿ ತಪ್ಪಿದ ಭಾರೀ ಅನಾಹುತ
July 27, 2019ಮೈಸೂರು, ಜು.26(ಎಂಟಿವೈ)- ಏರ್‍ಬ್ರೇಕ್‍ನ ಪೈಪ್ ತುಂಡರಿಸಿದ ಪರಿಣಾಮ ಭಕ್ತರಿದ್ದ ಸಾರಿಗೆ ಸಂಸ್ಥೆಯ ಬಸ್ಸೊಂದು ಹಿಮ್ಮುಖವಾಗಿ ಚಲಿಸುತ್ತಿದ್ದನ್ನು ಗಮನಿಸಿದ ಮತ್ತೊಂದು ಬಸ್‍ನ ಚಾಲಕನ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ಕೂದಲೆಳೆ ಅಂತರದಿಂದ ತಪ್ಪಿದ ಘಟನೆ ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ನಡೆದಿದೆ. ಆಷಾಢ ಮಾಸದ ಕೊನೆ ಶುಕ್ರವಾರದ ವಿಶೇಷ ಪೂಜಾ ಮಹೋ ತ್ಸವಕ್ಕೆ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರಿಂದ ನಗರ ಬಸ್ ನಿಲ್ದಾಣದಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ 9.30ಕ್ಕೆ ನಗರ ಬಸ್ ನಿಲ್ದಾಣದಿಂದ 3ನೇ…
ಪಕ್ಷಕ್ಕೆ ಮರಳುವ ಪ್ರಶ್ನೆಯೇ ಇಲ್ಲ, ನಮ್ಮ ಮುಂದಿನ ದಾರಿ ನಿಚ್ಚಳವಾಗಿದೆ
July 27, 2019ಬೆಂಗಳೂರು, ಜು.26-ಯಾವುದೇ ಕಾರಣಕ್ಕೂ ಮರಳಿ ಜೆಡಿಎಸ್‍ಗೆ ವಾಪಸ್ ಆಗುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್‍ನ ಅತೃಪ್ತ ಶಾಸಕ ಎಚ್ ವಿಶ್ವನಾಥ್ ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀ ನಾಮೆ ನೀಡಿ ಅತೃಪ್ತ ಶಾಸಕರೊಂದಿಗೆ ಮುಂಬೈಗೆ ಹಾರಿರುವ ಎ.ಹೆಚ್.ವಿಶ್ವನಾಥ್ ಅವರು, `ನಾವೆಲ್ಲ ಶಾಸಕರು ಬಂಡೆ ಯಂತೆ ಒಗ್ಗಟ್ಟಾಗಿದ್ದೇವೆ. ಹಾಗಾಗಿ, ನಾವು ಪಕ್ಷಕ್ಕೆ ಮರಳುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರನ್ನು ಅನರ್ಹ ಮಾಡುವ ಕುರಿತು ನಿರ್ಧಾರ ತಳೆದ ಬೆನ್ನಲ್ಲೇ ಅತೃಪ್ತ ಶಾಸಕರ…
ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ: ಪ್ರಜ್ವಲ್ ರೇವಣ್ಣ ಖುದ್ದು ಹಾಜರಿಗೆ ಹೈಕೋರ್ಟ್ ನೋಟಿಸ್
July 27, 2019ಬೆಂಗಳೂರು, ಜು. 26-ಆದಾಯ ತೆರಿಗೆಗೆ ಸಂಬಂಧಿಸಿದಂತೆ ಚುನಾ ವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಆರೋಪ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. ಚುನಾ ವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಹಾಸನ ಸಂಸದ ಅವರ ಆಯ್ಕೆಯನ್ನು ಅಸಿಂಧುಗೊಳಿಸ ಬೇಕು ಎಂದು ಕೋರಿ ಬಿಜೆಪಿ ಅಭ್ಯರ್ಥಿ ಎ.ಮಂಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ…
ಐಎಂಎ ಹಗರಣ: ಜಿಲ್ಲಾಧಿಕಾರಿ ಸೇರಿ ಮೂವರಿಗೆ ಜಾಮೀನು
July 27, 2019ಬೆಂಗಳೂರು,ಜು.26: ಐಎಂಎ ಹಗರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಪ್ರಮುಖ ಸರ್ಕಾರಿ ಅಧಿಕಾರಿಗಳಿಗೆ ಇಂದು ಜಾಮೀನು ದೊರೆತಿದೆ. ಇದರಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳೂ ಸೇರಿದ್ದಾರೆ. ಐಎಂಎ ಪ್ರಕರಣದಲ್ಲಿ ಒಂದೂವರೆ ಕೋಟಿ ಲಂಚ ಸ್ವೀಕರಿಸಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಬೆಂಗಳೂರು ನಗರ ಡಿಸಿ ವಿಜಯ್ ಶಂಕರ್, 4 ಕೋಟಿ ಲಂಚ ಸ್ವೀಕರಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಎಸಿ ನಾಗರಾಜು ಮತ್ತು ಮತ್ತೊಬ್ಬ ಅಧಿಕಾರಿಗೆ ಜಾಮೀನು ದೊರೆತಿದೆ. ಆದರೆ ಜಾಮೀನು ನೀಡುವಂತೆ ಅರ್ಜಿ ಹಾಕಿದ್ದ ಐಎಂಎಯ ಕ್ಲರ್ಕ್ ಹನೀಫ್ ಅಫ್ಜರ್ ಅವರಿಗೆ…
ಅತೃಪ್ತರ ಮೇಲೆ ಸ್ಪೀಕರ್ ಮೊದಲ ಬಾಂಬ್: ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ,ಕೆಪಿಜೆಪಿಯ ಆರ್.ಶಂಕರ್
July 26, 2019ಬೆಂಗಳೂರು, ಜು.25(ಎಸಿಪಿ)- ರಾಣೆ ಬೆನ್ನೂರು ಕ್ಷೇತ್ರದಿಂದ ಕರ್ನಾಟಕ ಪ್ರಜ್ಞಾ ವಂತ ಜನತಾ ಪಾರ್ಟಿ (ಕೆಪಿಜೆಪಿ) ಶಾಸಕರಾಗಿ ಆಯ್ಕೆಯಾಗಿದ್ದ ಆರ್. ಶಂಕರ್, ಅಥಣಿ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ ಮತ್ತು ಗೋಕಾಕ್ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ವಿಧಾನಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ವಿಧಾನ ಸಭಾಧ್ಯಕ್ಷ ರಮೇಶ್‍ಕುಮಾರ್ ಇಂದು ತೀರ್ಪು ನೀಡಿದ್ದಾರೆ. ಇಂದು ಸಂಜೆ ತುರ್ತು ಸುದ್ದಿಗೋಷ್ಠಿಯಲ್ಲಿ ತಮ್ಮ ತೀರ್ಪನ್ನು ಪ್ರಕಟಿಸಿದ ಅವರು, ಇನ್ನುಳಿದಂತೆ ಜೆಡಿಎಸ್‍ನ ಮೂವರು ಹಾಗೂ ಕಾಂಗ್ರೆಸ್‍ನ 10 ಶಾಸಕರ ರಾಜೀನಾಮೆ ಹಾಗೂ ಅನರ್ಹತೆ…
ಮಧ್ಯಂತರ ಚುನಾವಣೆಗೆಸಿದ್ಧರಾಗಿ: ಅಮಿತ್ ಷಾ
July 26, 2019ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರ ರಚನೆ ಅನುಮಾನ. ರಾಷ್ಟ್ರಪತಿ ಆಡಳಿತ ಇಲ್ಲವೇ ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ. ಸರ್ಕಾರ ರಚನೆಗೆ ನಿಮ್ಮ ಬಳಿ ಮ್ಯಾಜಿಕ್ ಸಂಖ್ಯೆ ಇಲ್ಲ. ಅಲ್ಲಿನ ವಿಧಾನಸಭಾಧ್ಯಕ್ಷರು ಅತೃಪ್ತ 15 ಶಾಸಕರ ರಾಜೀನಾಮೆ ಇತ್ಯರ್ಥಗೊಳ್ಳುವವರೆಗೂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಸ್ಪಷ್ಟವಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆ ವಿಳಂಬವಾಗುತ್ತಿರುವ ಬಗ್ಗೆ…
ಜು.30ರೊಳಗೆ ಸರ್ಕಾರ ರಚಿಸದಿದ್ದರೆ ಮಧ್ಯಂತರ ಚುನಾವಣೆ ಖಚಿತ
July 26, 2019ಬೆಂಗಳೂರು, ಜು.25- ಜುಲೈ 30 ರೊಳಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡದಿದ್ದರೆ ಮಧ್ಯಂತರ ಚುನಾವಣೆ ನಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕಾಂಗ್ರೆಸ್ ಮುಖಂಡರಿಗೆ ಹೇಳಿದ್ದಾರೆ. ಆಪರೇಷನ್ ಕಮಲ ದಿಂದಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸ ಕಾವೇರಿ ಯಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಇಂದು ಮಧ್ಯಾಹ್ನ ಕಾಂಗ್ರೆಸ್ ಮುಖಂಡರಾದ ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ಬಿ.ಕೆ.ಹರಿಪ್ರಸಾದ್, ವೆಂಕಟರಮಣಯ್ಯ, ಮಾಜಿ ಸಂಸದ ಧ್ರುವನಾರಾಯಣ್, ಕೃಷ್ಣಪ್ಪ,…










