Tag: Mysore

ಕಾಂಗ್ರೆಸ್ ಶಾಸಕಾಂಗ ಸಭೆಗೆ 16 ಶಾಸಕರು ಗೈರು
ಮೈಸೂರು

ಕಾಂಗ್ರೆಸ್ ಶಾಸಕಾಂಗ ಸಭೆಗೆ 16 ಶಾಸಕರು ಗೈರು

July 10, 2019

ಬೆಂಗಳೂರು, ಜು.9- ವಿಧಾನಸಭಾ ಸದಸ್ಯತ್ವಕ್ಕೆ 12 ಮಂದಿ ರಾಜೀನಾಮೆ ನೀಡಿರುವ ಸದಸ್ಯರೂ ಸೇರಿದಂತೆ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ 16 ಶಾಸಕರು ಗೈರು ಹಾಜರಾಗಿದ್ದರು. ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ತೀವ್ರಗೊಂಡ ಬೆನ್ನಲ್ಲೇ ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್ ಇಂದು ತುರ್ತು ಶಾಸಕಾಂಗ ಸಭೆಯನ್ನು ಕರೆದಿತ್ತು. ಅದರಲ್ಲಿ ಶೃಂಗೇರಿಯ ರಾಜೇಗೌಡ ಅವರು ತಾವು ನ್ಯಾಚೂರೋಪತಿ ಚಿಕಿತ್ಸೆ ಪಡೆಯುತ್ತಿದ್ದು ಸಭೆಯಲ್ಲಿ ಪಾಲ್ಗೊಳ್ಳಲು ಆಗುತ್ತಿಲ್ಲ ಎಂದು ಅನುಮತಿ ಪಡೆದರೆ, ಗುಲ್ಬರ್ಗಾ ಉತ್ತರ ಕ್ಷೇತ್ರದ ಕಲ್ಹಜಾ ಫಾತೀಮಾ ಅವರು…

ಸಿಎಂ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿಯಿಂದ ಪ್ರತಿಭಟನೆ
ಮೈಸೂರು

ಸಿಎಂ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿಯಿಂದ ಪ್ರತಿಭಟನೆ

July 10, 2019

ಬೆಂಗಳೂರು, ಜು.9- ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಬುಧ ವಾರ ವಿಧಾನಸೌಧದ ಎದುರು ಪ್ರತಿ ಭಟನೆ ನಡೆಸಲು ತೀರ್ಮಾನ ಮಾಡ ಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಬಿಎಸ್‍ವೈ, ಸಮ್ಮಿಶ್ರ ಸರ್ಕಾರ ಬಹುಮತವನ್ನು ಕಳೆದುಕೊಂಡಿದೆ. ಸರ್ಕಾರ ಉಳಿಸಿಕೊಳ್ಳಲು ನಾಯಕರು ನಾನಾ ರೀತಿಯ ನಾಟಕಗಳನ್ನು ಮಾಡುತ್ತಿದ್ದಾರೆ. ಅದು ಯಾವುದೂ ನಡೆಯುವುದಿಲ್ಲ. ನಾಳೆ ಬೆಳಿಗ್ಗೆ 11 ಗಂಟೆಗೆ ಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ವಿಧಾನಸೌಧದ ಗಾಂಧಿ…

ಜುಲೈ 19ರಿಂದ ಮೈಸೂರಿನಿಂದ ಕೊಚ್ಚಿನ್, ಗೋವಾ, ಹೈದರಾಬಾದ್‍ಗೆ ವಿಮಾನ ಹಾರಾಟ
ಮೈಸೂರು

ಜುಲೈ 19ರಿಂದ ಮೈಸೂರಿನಿಂದ ಕೊಚ್ಚಿನ್, ಗೋವಾ, ಹೈದರಾಬಾದ್‍ಗೆ ವಿಮಾನ ಹಾರಾಟ

July 10, 2019

ಮೈಸೂರು, ಜು.9(ಎಸ್‍ಬಿಡಿ)- ಮೈಸೂರಿನಿಂದ ಕೊಚ್ಚಿನ್, ಗೋವಾ ಹಾಗೂ ಹೈದರಾಬಾದ್ ನಡುವೆ ಜು. 19ರಿಂದ ವಿಮಾನ ಸಂಚಾರ ಆರಂಭವಾಗಲಿದೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 8.15ಕ್ಕೆ ಹೊರಡುವ ವಿಮಾನ 9.45ಕ್ಕೆ ಕೊಚ್ಚಿನ್‍ಗೆ ತಲುಪಲಿದೆ. ಹಾಗೆಯೇ ಕೊಚ್ಚಿನ್‍ನಿಂದ 10.10ಕ್ಕೆ ಹೊರಟು 11.40ಕ್ಕೆ ಮೈಸೂರಿಗೆ ವಾಪಸ್ಸಾಗಲಿದೆ. ಮೈಸೂರಿನಿಂದ ಮಧ್ಯಾಹ್ನ 3.20ಕ್ಕೆ ಹೊರಟು ಸಂಜೆ 4.50ಕ್ಕೆ ಗೋವಾ ತಲುಪುವ ವಿಮಾನ, 5.20ಕ್ಕೆ ಅಲ್ಲಿಂದ ಹೊರಟು 6.50ಕ್ಕೆ ಮೈಸೂರಿಗೆ ಬರಲಿದೆ. ಇನ್ನು ಮೈಸೂರಿನಿಂದ ರಾತ್ರಿ 7.20ಕ್ಕೆ ಹೊರಟು 09.05ಕ್ಕೆ ಹೈದರಾಬಾದ್‍ಗೆ ತಲುಪುವ ವಿಮಾನ…

ಲೋಕೋಪಯೋಗಿ ಇಲಾಖೆಯಲ್ಲಿ ಒಂದೇ ದಿನ 800 ಅಧಿಕಾರಿಗಳಿಗೆ ಬಡ್ತಿ
ಮೈಸೂರು

ಲೋಕೋಪಯೋಗಿ ಇಲಾಖೆಯಲ್ಲಿ ಒಂದೇ ದಿನ 800 ಅಧಿಕಾರಿಗಳಿಗೆ ಬಡ್ತಿ

July 10, 2019

ಬೆಂಗಳೂರು, ಜು.9-ಸಮ್ಮಿಶ್ರ ಸರ್ಕಾ ರಕ್ಕೆ ಕೌಂಟ್‍ಡೌನ್ ಆರಂಭವಾಗಿದ್ದರೆ, ಇತ್ತ ಮೈತ್ರಿಯ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಸಚಿವ ಹೆಚ್.ಡಿ. ರೇವಣ್ಣರ ಇಲಾಖೆಯಲ್ಲಿ ಒಂದೇ ದಿನದಲ್ಲಿ 800 ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಒಂದೇ ದಿನದಲ್ಲಿ ನೂರಕ್ಕೂ ಹೆಚ್ಚು ಎಂಜಿನಿಯರ್‍ಗಳ ವರ್ಗಾವಣೆ ಆದೇಶಕ್ಕೆ ರೇವಣ್ಣ ಸಹಿ ಹಾಕಿದ್ದಾರೆ. ಸೋಮವಾರ ಸಚಿವರೆಲ್ಲಾ ರಾಜೀ ನಾಮೆ ನೀಡಿದ್ದರೂ, ರೇವಣ್ಣ ಅವರು ತಮ್ಮ ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಸಕ್ರೀಯವಾಗಿದ್ದು, ಅಧಿಕಾರಿಗಳ ವರ್ಗಾವಣೆ ಮತ್ತು ಬಡ್ತಿ ಸಂಬಂಧ ತರಾತುರಿಯಲ್ಲಿ ಇಲಾಖಾ ಪದೋನ್ನತಿ ಸಮಿತಿ…

ವಿಧಾನಸಭೆ ವಿಸರ್ಜಿಸಿ, ಮಧ್ಯಂತರ ಚುನಾವಣೆಯೇ ಸೂಕ್ತ
ಮೈಸೂರು

ವಿಧಾನಸಭೆ ವಿಸರ್ಜಿಸಿ, ಮಧ್ಯಂತರ ಚುನಾವಣೆಯೇ ಸೂಕ್ತ

July 10, 2019

ಮೈಸೂರು, ಜು.9(ಎಸ್‍ಬಿಡಿ)- ರಾಜ್ಯ ರಾಜಕೀಯ ಪರಿಸ್ಥಿತಿ ಅವಲೋಕಿಸಿದರೆ ವಿಧಾನಸಭೆಯನ್ನು ವಿಸರ್ಜಿಸಿ, ಮಧ್ಯಂತರ ಚುನಾವಣೆ ಮೂಲಕ ಹೊಸದಾಗಿ ಜನಾದೇಶ ಪಡೆಯುವುದೇ ಸೂಕ್ತ ಎಂದು ಮಾಜಿ ಸ್ಪೀಕರ್ ಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜಕೀಯ ಬೆಳವಣಿಗೆ ಬಗ್ಗೆ `ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯಿಸಿದ ಅವರು, ರಾಜೀ ನಾಮೆ ನೀಡುವ ಸ್ವಾತಂತ್ರ್ಯ ಶಾಸಕರಿಗಿದೆ. ಅವರು ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೋ? ಇಲ್ಲವೇ ಯಾವುದಾ ದರೂ ಒತ್ತಡ, ಆಮಿಷಗಳಿಗೆ ಒಳಗಾಗಿ ಈ ಕ್ರಮಕ್ಕೆ ಮುಂದಾಗಿದ್ದಾರೋ? ಎಂಬುದನ್ನು ಸ್ಪೀಕರ್ ಅವರು ಮನವರಿಕೆ ಮಾಡಿಕೊಂಡು ಅಂಗೀಕರಿಸಬೇಕು. ಇದು ವಿಶೇಷ ಸಂದರ್ಭ…

ಸಮರ್ಪಕ ಕಸ ವಿಲೇವಾರಿಗೆ ನಿವಾಸಿಗಳ ಆಗ್ರಹ
ಮೈಸೂರು

ಸಮರ್ಪಕ ಕಸ ವಿಲೇವಾರಿಗೆ ನಿವಾಸಿಗಳ ಆಗ್ರಹ

July 10, 2019

ಮೈಸೂರು,ಜು.9(ಎಂಕೆ)-ಕಸ ವಿಲೇ ವಾರಿ ಮಾಡುವ ನಗರಪಾಲಿಕೆ ವಾಹನ ಗಳು ರಸ್ತೆಯಲ್ಲೆಲ್ಲಾ ಕಸ ಚೆಲ್ಲಾಡು ವುದರಿಂದ ಪಾದಚಾರಿಗಳಿಗೆ ತೊಂದರೆ ಯಾಗುತ್ತಿದ್ದು, ಪರ್ಯಾಯ ಮಾರ್ಗ ಕಂಡುಕೊಳ್ಳಬೇಕು ಎಂದು ವಿದ್ಯಾರಣ್ಯ ಪುರಂ ನಿವಾಸಿಗಳು ಆಗ್ರಹಿಸಿದ್ದಾರೆ. ನಗರದ ಎಲ್ಲಾ ವಾರ್ಡಿನ ಕಸವನ್ನು ವಿದ್ಯಾರಣ್ಯಪುರಂ 2ನೇ ಮುಖ್ಯ ರಸ್ತೆ ಹಾಗೂ ಸುಯೇಜ್ ಫಾರಂ ರಸ್ತೆ ಮೂಲ ಕವೇ ಎಕ್ಸೆಲ್ ಪ್ಲಾಂಟ್‍ಗೆ ಸಾಗಿಸಲಾಗು ತ್ತದೆ. ದಿನದಲ್ಲಿ ನೂರಾರು ವಾಹನಗಳು ಕಸ ಸಾಗಿಸುವುದರಿಂದ ರಸ್ತೆಯ ಇಕ್ಕೆಲ ಗಳಲ್ಲಿ ಕಸ ಬೀಳುತ್ತಿದೆ. ಅಲ್ಲದೆ ಸುಯೇಜ್ ಫಾರಂ ರಸ್ತೆಯಲ್ಲಿ 5…

ಜನಾಂಗದ ವಿವಿಧ ಸಂಘಟನೆಗಳ ಪ್ರತಿಭಟನೆ
ಮೈಸೂರು

ಜನಾಂಗದ ವಿವಿಧ ಸಂಘಟನೆಗಳ ಪ್ರತಿಭಟನೆ

July 10, 2019

ಮೈಸೂರು,ಜು.9(ವೈಡಿಎಸ್)-ಒಕ್ಕಲಿಗ ಸಮುದಾಯದ ರಾಜಕೀಯ ನಾಯಕರಿಗೆ ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಒಕ್ಕಲಿಗರ ಸಂಘಟನೆಗಳ ಮುಖಂಡರು ನ್ಯಾಯಾಲಯ ಮುಂಭಾಗದ ಗಾಂಧಿ ಪುತ್ಥಳಿ ಮುಂದೆ ಪ್ರತಿಭಟನೆ ನಡೆಸಿದರು. ಮಂಗಳವಾರ ಸಂಜೆ ನ್ಯಾಯಾಲಯ ಮುಂಭಾಗದ ಗಾಂಧಿ ಪುತ್ಥಳಿ ಬಳಿ ಜಮಾವಣೆಗೊಂಡ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ, ತಾಲೂಕು ಒಕ್ಕಲಿಗರ ಸಂಘ, ಒಕ್ಕಲಿಗರ ಹಿತ ರಕ್ಷಣಾ ಸಮಿತಿ, ಕೆಂಪೇಗೌಡ ಸ್ಮರಣೋತ್ಸವ ಸಮಿತಿ, ರಾಜ್ಯ ಒಕ್ಕಲಿಗರ ವೇದಿಕೆ ಮುಖಂಡರು ಕಪ್ಪುಪಟ್ಟಿ ಧರಿಸಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರೂ ಒಕ್ಕಲಿಗ ಸಮುದಾಯದ…

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಮೈಸೂರು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

July 10, 2019

ಮೈಸೂರು,ಜು.9(ಪಿಎಂ)-ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಮಹಾರಾಜ ಸರ್ಕಾರಿ ಪದವಿಪೂರ್ವ ಕಾಲೇಜಿನ 20 ವಿದ್ಯಾರ್ಥಿಗಳಿಗೆ ಕಾಲೇಜು ವತಿಯಿಂದ ಮಂಗಳವಾರ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಕಾಲೇಜಿನ ಕೃಷ್ಣರಾಜ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟಿಸಿದ ಶಾಸಕ ಎಲ್. ನಾಗೇಂದ್ರ, ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳು ಗುರು-ಹಿರಿಯರ ಮಾರ್ಗದರ್ಶನದಲ್ಲಿ ಸಾಧನೆಯ ಗುರಿ ಮುಟ್ಟಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಶಿಸ್ತು,…

ಶಾಸಕರ ರಾಜೀನಾಮೆ ತಿರಸ್ಕರಿಸಲು ರೈತ ಸಂಘ ಆಗ್ರಹ
ಮೈಸೂರು

ಶಾಸಕರ ರಾಜೀನಾಮೆ ತಿರಸ್ಕರಿಸಲು ರೈತ ಸಂಘ ಆಗ್ರಹ

July 10, 2019

ಮೈಸೂರು,ಜು.9(ವೈಡಿಎಸ್)-ಕಾರಣವಿಲ್ಲದೆ ಕೆಲವು ಶಾಸಕರು ತಮ್ಮ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷರು ತಿರಸ್ಕರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ. ಜಲದರ್ಶಿನಿ ಅತಿಥಿಗೃಹದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನತಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಶಾಸಕರು ರಾಜೀನಾಮೆ ನೀಡಬೇಕಾದರೆ ಮತದಾರರ ಒಪ್ಪಿಗೆ ಮತ್ತು ಸಕಾರಣ ನೀಡಬೇಕು. ಆದರೆ, ರಾಜೀನಾಮೆ ಸಲ್ಲಿಸಿರುವ ಶಾಸಕರು ಸಕಾರಣ ನೀಡಿಲ್ಲ. ಅಧಿಕಾರದ ಆಸೆಯಿಂದ ಮಾರಾಟದ ಸರಕಾಗಿ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು. ಹಾಗಾಗಿ ಮತದಾರರು,…

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ 10 ದಿನ ಮುಂದೂಡಿಕೆ
ಮೈಸೂರು

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ 10 ದಿನ ಮುಂದೂಡಿಕೆ

July 10, 2019

ಮೈಸೂರು,ಜು.9(ಎಸ್‍ಪಿಎನ್)-ಗೊಂದಲ ಗೂಡಾಗಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳು 10 ದಿನ ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು `ಮೈಸೂರು ಮಿತ್ರ’ನಿಗೆ ತಿಳಿಸಿದ್ದಾರೆ. ಸೋಮವಾರ ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಆಯುಕ್ತರ ನೇತೃತ್ವದಲ್ಲಿ ನಡೆದ ರಾಜ್ಯದ ಎಲ್ಲಾ ಡಿಡಿಪಿಐ ಸಭೆಯಲ್ಲಿ ಈ ತೀರ್ಮಾನವಾಗಿದ್ದು, ಈ ಬಾರಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಿ ಕೊಂಡು, 10 ದಿನಗಳ ನಂತರ ಎಲ್ಲಾ ವರ್ಗಾವಣೆ ಪ್ರಕ್ರಿಯೆಗಳನ್ನು ಆರಂಭಿಸುವಂತೆ ಆಯುಕ್ತರು ಸೂಚಿಸಿದ್ದಾರೆ. ಎನ್ನಲಾಗಿದೆ. ಶಿಕ್ಷಕರ ಸೇವಾ ದತ್ತಾಂಶ…

1 240 241 242 243 244 330
Translate »