ಮೈಸೂರು, ಜೂ.26(ಪಿಎಂ)- ಇಟಲಿಯಲ್ಲಿ ಜು.3ರಿಂದ 14ರವರೆಗೆ ನಡೆಯುವ ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯಗಳ ಅಥ್ಲೆಟಿಕ್ಸ್ ಕ್ರೀಡಾ ಕೂಟದಲ್ಲಿ ಭಾಗವಹಿ ಸಲು ಮೈಸೂರು ವಿವಿಯ ಎಂ.ಆರ್.ಧನುಷಾ ಆಯ್ಕೆಯಾಗಿದ್ದಾರೆ. ಈ ಕ್ರೀಡಾಕೂಟಕ್ಕೆ ಮೈಸೂರು ವಿವಿಯಿಂದ ಆಯ್ಕೆ ಯಾದ ಮೊದಲಿಗರು ಎಂಬ ಹಿರಿಮೆಗೂ ಎಂ. ಆರ್.ಧನುಷಾ ಭಾಜನ ರಾಗಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾನಿಲ ಯದ ಕ್ರೀಡಾಪಟುವಾದ ಎಂ.ಆರ್.ಧನುಷಾ ದ್ವಿತೀಯ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಮೈಸೂರು ಜಿಲ್ಲೆಯ ಕೆಆರ್ ನಗರದ ನಿವಾಸಿ ಆಟೋರಿಕ್ಷಾ ಚಾಲಕ ಮಂಜು ಹಾಗೂ ರುಕ್ಮಿಣಿ ದಂಪತಿ…
ಮಾದಕ ವಸ್ತುಗಳು ಬದುಕಿಗೆ ಮಾರಕ
June 27, 2019ಮೈಸೂರು, ಜೂ.26(ಪಿಎಂ)- ಮಾದಕ ವ್ಯಸನದ ಹಾದಿ ಕಟ್ಟುವುದು ಬೇಗ ಸಮಾಧಿ… ಎಂಬಿತ್ಯಾದಿ ಘೋಷ ವಾಕ್ಯಗಳ ಫಲಕಗಳನ್ನಿಡಿದು ಹೆಜ್ಜೆ ಹಾಕಿದ ವಿದ್ಯಾರ್ಥಿ ಸಮೂಹ ಮಾದಕ ಪದಾರ್ಥಗಳು ವ್ಯಕ್ತಿಯ ಬದುಕಿಗೆ ಮಾರಕ ಎಂಬುದನ್ನು ಅನಾವರಣ ಗೊಳಿಸಿತು. ಮಾದಕ ಪದಾರ್ಥ ಬಳಕೆ ಮತ್ತು ಅಕ್ರಮ ಸಾಗಣೆ ವಿರೋಧಿ ಅಂತಾ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಮೈಸೂರಿನಲ್ಲಿ ಮಂಡಿ ಪೊಲೀಸ್ ಠಾಣೆ ಆಶ್ರಯದಲ್ಲಿ ಬುಧವಾರ ನಡೆದ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿ ಸಮೂಹ ಮಾದಕ ವಸ್ತು ಬಳಕೆಯ ಅನಾಹುತದ ಬಗ್ಗೆ ಸಂದೇಶ ಸಾರಿತು. ವಿದ್ಯಾವರ್ಧಕ…
ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಜು.2ರಂದು ಪ್ರತಿಭಟನೆ
June 27, 2019ಮೈಸೂರು, ಜೂ.26(ಪಿಎಂ)- ರೈತರು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಜು.2ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಳೇ ಮಿರ್ಲೆ ಸುನಯ್‍ಗೌಡ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಅಂದು ಬೆಳಿಗ್ಗೆ 11ಕ್ಕೆ ಮೈಸೂರು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗು ವುದು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು…
ಇವಿಎಂ ವಜಾಗೊಳಿಸಲು ಆಗ್ರಹಿಸಿ ಡಿಸಿಗೆ 5 ಸಾವಿರ ಪತ್ರ ಸಲ್ಲಿಕೆ
June 27, 2019ಮೈಸೂರು, ಜೂ.26(ಪಿಎಂ)- ಇವಿಎಂ (ಮತ ಯಂತ್ರ) ನಿಷೇಧ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಂಡಿರುವ `ಇವಿಎಂ ವಜಾಗೊಳಿಸಿ’ ಪತ್ರ ಚಳುವಳಿಯಲ್ಲಿ ಸಮಿತಿಯ ಮೈಸೂರು ವಿಭಾಗ ದಿಂದ ಸಂಗ್ರಹಿಸಿರುವ 5 ಸಾವಿರ ಪತ್ರಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುತ್ತಿರುವುದಾಗಿ ಸಮಿ ತಿಯ ಮೈಸೂರು ವಿಭಾಗ ಸಂಚಾಲಕ ಹಾಗೂ ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತ ಯಂತ್ರಗಳು ದೋಷಪೂರಿತ ಎಂಬ ಆರೋಪ ಪ್ರಬಲವಾಗಿ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ `ಇವಿಎಂ ವಜಾಗೊಳಿಸಿ,…
ICSE, CBSE ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ
June 26, 2019ಬೆಂಗಳೂರು, ಜೂನ್ 25 (ಕೆಎಂಶಿ)-ರಾಜ್ಯದಲ್ಲಿ ರುವ ಐಸಿಎಸ್‍ಇ ಹಾಗೂ ಸಿಬಿಎಸ್‍ಇ ಶಾಲೆಗಳಲ್ಲಿ ಕನ್ನಡವನ್ನು ಒಂದು ವಿಷಯವಾಗಿ ಕಲಿಸುವುದು ಕಡ್ಡಾಯ ಎಂದಿರುವ ನೂತನ ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಆರ್. ಶ್ರೀನಿವಾಸ್, ನಿಯಮವನ್ನು ಪಾಲನೆ ಮಾಡದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾ ಗುತ್ತದೆ ಎಂದು ಇಂದಿಲ್ಲಿ ಎಚ್ಚರಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಶಾಲೆಗಳಲ್ಲಿ ಕನ್ನಡ ಕಲಿಸದಿದ್ದರೂ ಕ್ರಮ ತೆಗೆದುಕೊಳ್ಳದ ಶಿಕ್ಷಣಾಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮ ತೆಗೆದು ಕೊಳ್ಳುವುದಾಗಿ ತಿಳಿಸಿದರು. ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಆರಂಭವಾಗಿರುವ ಸಿಬಿಎಸ್‍ಇ…
ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೆಂಗಳೂರಲ್ಲಿ ಭಾರೀ ಪ್ರತಿಭಟನೆ
June 26, 2019ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದವರು ಹರಿಹರದ ರಾಜನಹಳ್ಳಿಯಿಂದ ರಾಜಧಾನಿ ಬೆಂಗಳೂರುವರೆಗೆ ಕಳೆದ 12 ದಿನಗಳಿಂದ ಪಾದಯಾತ್ರೆ ನಡೆಸಿ ನಗರದಲ್ಲಿಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನ ನಡೆಸಿದರು. ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಜೂ. 9ರಂದು ಕೈಗೊಂಡಿದ್ದ ಪಾದಯಾತ್ರೆ ಇಂದು ಬೆಂಗಳೂರು ತಲುಪಿ, ಅಪಾರ ಸಂಖ್ಯೆಯಲ್ಲಿ ಜನ ಸೇರಿ ಮೀಸ ಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿದರು. ಫ್ರೀಡಂ ಪಾರ್ಕ್‍ನಲ್ಲಿ ಸಮಾ ವೇಶಗೊಂಡ ಪ್ರತಿಭಟನಾಕಾರರು ಮೀಸಲಾತಿ…
ಮೃಗಾಲಯದ ಬೃಹತ್ ಅಕ್ವೇರಿಯಂಗೆ ಕಾಯಕಲ್ಪ ನೀಡಲು ನ್ಯೂಜಿಲೆಂಡ್ ಮೂಲದ ಕಂಪನಿ ಆಸಕ್ತಿ
June 26, 2019ಮೈಸೂರು, ಜೂ.25- ಮೈಸೂರಿನ ಮೃಗಾಲಯದ ಆವರಣದಲ್ಲಿ 6 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬೃಹತ್ ಅಕ್ವೇರಿಯಂಗೆ ಕಾಯಕಲ್ಪ ನೀಡಲು ನ್ಯೂಜಿಲೆಂಡ್ ಮೂಲದ ಕಂಪನಿಯೊಂದು ಮುಂದೆ ಬಂದಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ಮತ್ಸ್ಯಾಲಯ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದ ಅನುಮೋದನೆಗಾಗಿ ಮೃಗಾಲಯ ಪ್ರಾಧಿಕಾರ ಪ್ರಸ್ತಾವನೆ ಕಳುಹಿಸಿದೆ. ಮೈಸೂರಿಗೆ ಬರುವ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ನಿಟ್ಟಿನಲ್ಲಿ ಮೈಸೂರು ನಗರ ಪಾಲಿಕೆ 2010-11ನೇ ಸಾಲಿನಲ್ಲಿ ಮೃಗಾಲಯ ಹಾಗೂ ಕಾರಂಜಿಕೆರೆ ನಡುವೆ ಬೃಹತ್ ಮತ್ಸ್ಯಾಗಾರದ ಕಾಮಗಾರಿ ಆರಂಭಿಸಿತ್ತು. 4.26 ಕೋಟಿ ರೂ. ವೆಚ್ಚದಲ್ಲಿ ಆರು ಸಾವಿರ…
ಮಳೆ ಬಂದರೆ ಮಾತ್ರ ತಮಿಳುನಾಡಿಗೆ ನೀರು ಬಿಡಿ
June 26, 2019ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ಸದ್ಯ, ಕರ್ನಾಟಕಕ್ಕೆ ನಿರಾಳ ನವದೆಹಲಿ: ಕಾವೇರಿ ನೀರಿನ ವಿವಾದದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ವಾದವನ್ನು ಪುರಸ್ಕರಿಸದೇ ಮಳೆ ಬಂದರೆ ತಮಿಳುನಾಡಿಗೆ ನೀರು ಹರಿಸಿ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚನೆ ನೀಡಿದ್ದು, ಇದರಿಂದ ರಾಜ್ಯ ಸರ್ಕಾರ ತುಸು ನಿರಾಳವಾಗಿದೆ. ಸೋಮವಾರ ನವದೆಹಲಿಯಲ್ಲಿ ನಡೆದಿದ್ದ ಕಾವೇರಿ ನೀರು ನಿರ್ವಹಣಾ ಸಭೆಯಲ್ಲಿ, ಕರ್ನಾಟಕ ಜೂನ್ ತಿಂಗಳಲ್ಲಿ ತಮಿಳುನಾಡಿಗೆ ಬಿಡಬೇಕಾಗಿದ್ದ ನೀರನ್ನು ಯಾಕೆ ಬಿಟ್ಟಿಲ್ಲ ಎಂದು ನೀರು ನಿರ್ವಹಣಾ ಮಂಡಳಿ ಪ್ರಶ್ನಿಸಿತ್ತು….
ನಾಲ್ವರ ಸಜೀವ ದಹನ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ
June 26, 2019ತಲಾ 2 ಲಕ್ಷ ದಂಡ ತಪ್ಪಿದಲ್ಲಿ 6 ತಿಂಗಳ ಸಜೆ ಮೈಸೂರು, ಜೂ.25(ಎಸ್‍ಪಿಎನ್)-ಒಂದೇ ಕುಟುಂಬದ ನಾಲ್ವರ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಕೊಲೆ ಮಾಡಿ, ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಐವರು ಆರೋಪಿಗಳಿಗೆ ಮೈಸೂರಿನ 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ಹಾಗೂ ತಲಾ 2 ಲಕ್ಷ ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿದೆ. ಮೈಸೂರು ಕೆ.ಎನ್.ಪುರದ ನಿವಾಸಿಗಳಾದ ಹಸೀನಾ, ಆದಿಲ್, ಜಬೀನಾ, ಸಯೀದಾ ಹಾಗೂ ಜರೀನ್ ತಾಜ್…
ಆಷಾಢ ಶುಕ್ರವಾರ: ಚಾ.ಬೆಟ್ಟದಲ್ಲಿ ಸುಗಮ ಧಾರ್ಮಿಕ ಕಾರ್ಯಗಳಿಗೆ ಜಿಲ್ಲಾಡಳಿತ ಸರ್ವ ವ್ಯವಸ್ಥೆ
June 26, 2019ಮೈಸೂರು,ಜೂ.25(ಆರ್‍ಕೆ)- ಆಷಾಢ ಶುಕ್ರವಾರಗಳಂದು ಚಾಮುಂಡಿಬೆಟ್ಟದಲ್ಲಿ ನೂಕು-ನುಗ್ಗಲು, ಸಂಚಾರ ಸಮಸ್ಯೆ ಯನ್ನು ತಪ್ಪಿಸುವ ಸಲುವಾಗಿ ಕೆಲ ನಿಯಮಗಳನ್ನು ಶಿಸ್ತುಬದ್ಧವಾಗಿ ಪಾಲಿಸಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲ ಕೃಷ್ಣ, ಡಿಸಿಪಿ ಎಂ.ಮುತ್ತುರಾಜ್ ಅವರು ಇಂದು ಚಾಮುಂಡಿಬೆಟ್ಟಕ್ಕೆ ತೆರಳಿ ಸ್ಥಳ ಪರಿಶೀಲಿಸಿದರು. ಚಾಮುಂಡೇಶ್ವರಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ಸಾಲುಗಟ್ಟಿ ನಿಲ್ಲಲು, ಪ್ರವೇಶ ಮತ್ತು ನಿರ್ಗಮನ ಸರಳ ಗೊಳಿಸುವ ಹಾಗೂ ಸರಾಗವಾಗಿ ಯಾವುದೇ ಅಡಚಣೆ ಇಲ್ಲದೆ ದರ್ಶನ ಮಾಡಲು ಅವಕಾಶ…










