ಜಮ್ಮು-ಕಾಶ್ಮೀರ: ಭಾರತದ ರಕ್ಷಣಾ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ನಲವತ್ತೆಂಟು ಗಂಟೆಯೊಳಗಾಗಿ ರಾಜ್ ನಾಥ್ ಸಿಂಗ್ ಅವರು ಸೋಮವಾರ ಸಿಯಾಚಿನ್‍ಗೆ ಭೇಟಿ ನೀಡಿ, ಜಗತ್ತಿನ ಅತಿ ಎತ್ತರದ ಯುದ್ಧ ಭೂಮಿಯಲ್ಲಿ ನಿಯೋಜಿತರಾಗಿರುವ ಸೈನಿಕರೊಂದಿಗೆ ಮಾತುಕತೆ ನಡೆಸಿದ್ದಾರೆ. “ಮುಂಚೂಣಿ ಸೇನಾ ಠಾಣೆಗೆ ಹಾಗೂ ಸಿಯಾಚಿನ್‍ನ ಬೇಸ್ ಕ್ಯಾಂಪ್‍ಗೆ ಭೇಟಿ ನೀಡಿದ್ದೆ. ‘ಜಗತ್ತಿನ ಅತಿ ಎತ್ತರದ ಯುದ್ಧ ಭೂಮಿ’ ಯಲ್ಲಿ ಕಾರ್ಯ ನಿರ್ವಹಿಸುವ ಸೇನಾ ಸಿಬ್ಬಂದಿ ಜತೆಗೆ ಮಾತುಕತೆ ನಡೆಸಿದೆ” ಎಂದು ರಾಜ್‍ನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್…
ಕರ್ನಾಟಕ ಸೇರಿ ಹಲವು ರಾಜ್ಯಗಳ ಬಿಜೆಪಿ ಅಧ್ಯಕ್ಷರ ಬದಲಾವಣೆ
June 4, 2019ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಚುನಾ ವಣೆಯ ಬಳಿಕ ಕೆಲವು ರಾಜ್ಯಗಳಲ್ಲಿ ಬಿಜೆಪಿ, ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುವ ಮೂಲಕ ಪಕ್ಷದ ಮಟ್ಟದಲ್ಲಿ ಭಾರಿ ಬದಲಾವಣೆಗೆ ಚಾಲನೆ ನೀಡಲಿದೆ. ಇಷ್ಟರಲ್ಲೇ ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ತೆಲಂಗಾಣ ಮತ್ತು ಮಹಾ ರಾಷ್ಟ್ರ ರಾಜ್ಯ ಘಟಕದ ಅಧ್ಯಕ್ಷರ ಬದಲಾ ವಣೆ ಆಗಲಿದೆ ಎಂದು ಪಕ್ಷದ ಮೂಲ ಗಳು ತಿಳಿಸಿವೆ. ಎಲ್ಲಕ್ಕಿಂತ ಮುಖ್ಯವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಕೇಂದ್ರ ಸಚಿವ ಸಂಪುಟ…
ದ್ವಿಗುಣವಾದ ಮೇಕೆದಾಟು ಯೋಜನಾ ವೆಚ್ಚ
June 4, 2019ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಸಮಾನಾಂತರ ವಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಜಲಾಶಯ ಯೋಜನಾ ವೆಚ್ಚ 5,460 ಕೋಟಿ ರೂ.ಯಿಂದ 9,000 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಮೇಕೆದಾಟು ಜಲಾಶಯ ಯೋಜನೆಯ ಪೂರ್ಣ ವಿವರವನ್ನು ರಾಜ್ಯ ಸರ್ಕಾರ ಇದುವರೆಗೂ ಕೇಂದ್ರಕ್ಕೆ ನೀಡಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ, ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದ ಬೆನ್ನಲ್ಲೇ ಸರ್ಕಾರದ ಉನ್ನತ ಮೂಲಗಳು ಈ ಮಾಹಿತಿಯನ್ನು ಬಹಿರಂಗಪಡಿಸಿವೆ. 2019ರ ಫೆಬ್ರವರಿಯಲ್ಲಿ ಕೇಂದ್ರ ಜಲಸಂಪನ್ಮೂಲ ಇಲಾಖೆಗೆ…
ಸಿಎಂ ಕುಮಾರಸ್ವಾಮಿ ಜನತಾದರ್ಶನ, ಪ್ರಗತಿ ಪರಿಶೀಲನೆ
June 4, 2019ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನಡೆ ನಂತರ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಆಡಳಿತ ಚುರುಕಿಗೆ ಚಾಲನೆ ನೀಡಿದ್ದಾರೆ.ಮುಖ್ಯಮಂತ್ರಿಗಳು ಇಂದು ಗೃಹ ಕಚೇರಿ ಕೃಷ್ಣಾ ದಲ್ಲಿ ಕುಳಿತು ಜನರ ಸಮಸ್ಯೆಗಳನ್ನು ಆಲಿಸಿದ್ದಲ್ಲದೆ, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಾಲು ಮರದ ತಿಮ್ಮಕ್ಕ, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಬಾಗೇಪಲ್ಲಿ-ಹಲಗೂರು ಹೆದ್ದಾರಿ ಅಗಲೀಕರಣಕ್ಕಾಗಿ ಕುದೂರು ವ್ಯಾಪ್ತಿಯಲ್ಲಿ ತಾವು ನೆಟ್ಟು ಪೋಷಿಸಿದ ಮರ ಗಳನ್ನು ಕಡಿಯದಂತೆ ಮನವಿ ಮಾಡಿದರು. ತಕ್ಷಣವೇ ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಅವರು, ಮರ ಗಳನ್ನು…
ಮೈಸೂರಿನಿಂದ ಕಣ್ಣೂರು ಏರ್‍ಪೋರ್ಟ್‍ಗೆ ಬಸ್ ಸೇವೆ ಒದಗಿಸಿ
June 4, 2019ಮೈಸೂರು: ಪ್ರಯಾ ಣಿಕರ ಅನುಕೂಲಕ್ಕಾಗಿ ಮೈಸೂರು ಮತ್ತು ಕೊಡಗು ಪ್ರಾಂತ್ಯಗಳಿಂದ ಕೇರಳದ ಕಣ್ಣೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾರಿಗೆ ಬಸ್ ಸೌಲಭ್ಯ ಒದಗಿ ಸುವಂತೆ ಕಣ್ಣೂರು ವಿಮಾನ ನಿಲ್ದಾಣದ ಅಧಿಕಾರಿಗಳು ಕೋರಿಕೊಂಡಿದ್ದಾರೆ. ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‍ಆರ್‍ಟಿಸಿ) ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾ ಣದ ಅಧಿಕಾರಿಗಳು, ಮೈಸೂರು ಮತ್ತು ಕೊಡಗು ಭಾಗಗಳಿಂದ ಕಣ್ಣೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಸ್ ಸೌಲಭ್ಯ ಕಲ್ಪಿಸಿದಲ್ಲಿ ಪ್ರಯಾಣಿಕರು ಹೆಚ್ಚಿನ…
ಜೂ. 6ರಂದು ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ
June 4, 2019ಮೈಸೂರು: ಸಕಾಲದಲ್ಲಿ ಮಳೆಗಾಗಿ ಪ್ರಾರ್ಥಿಸಲು ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಮೇ 31ರಂದು ಸುತ್ತೋಲೆ ಹೊರಡಿಸಿ ರುವ ಕಂದಾಯ ಇಲಾಖೆ (ಮುಜರಾಯಿ) ಅಧೀನ ಕಾರ್ಯದರ್ಶಿ ಎಂ. ತಿಪ್ಪೀರಮ್ಮ ಅವರು, ಜೂನ್ 6 ರಂದು ಬ್ರಾಹ್ಮೀ ಮುಹೂರ್ತದಲ್ಲಿ ಪರ್ಜನ್ಯ ಜಪ ಮತ್ತು ವಿಶೇಷ ಪೂಜೆ ನಡೆಸುವಂತೆ ಆದೇಶಿಸಿದ್ದಾರೆ. ರಾಜ್ಯದಲ್ಲಿ ಸಕಾಲದಲ್ಲಿ ಮಳೆಯಾಗದೆ ಜನರು ಹಾಗೂ ಜಾನುವಾರುಗಳಿಗೆ ಕುಡಿ ಯುವ ನೀರಿನ ಅಭಾವ…
ಸಿಎಂ ಗ್ರಾಮ ವಾಸ್ತವ್ಯ ಪುನಾರಂಭ
June 4, 2019ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಗ್ರಾಮ ವಾಸ್ತವ್ಯವನ್ನು ಮೊದಲ ಹಂತದಲ್ಲಿ ಯಾದಗಿರಿ ಮತ್ತು ಕಲಬುರಗಿಯಲ್ಲಿ ಕೈಗೊಳ್ಳಲಿದ್ದಾರೆ. ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಹಾಗೂ ಜೂ. 22ರಂದು ಕಲಬುರಗಿ ಜಿಲ್ಲೆಯ ಅಫಜಲ ಪುರ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಹೂಡಲಿ ದ್ದಾರೆ. ಅಂತೆಯೇ ಜುಲೈ 5 ಹಾಗೂ 6 ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ಗಳಲ್ಲೂ ಗ್ರಾಮ ವಾಸ್ತವ್ಯಕ್ಕೆ ದಿನಾಂಕ ನಿಗದಿಯಾಗಿದೆ. ಈ ಮೊದಲು ಕುಮಾರಸ್ವಾಮಿ ಅವರು ಕೊಡಗು…
ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಹಿಂದಿಯೇತರ ರಾಜ್ಯಗಳುಜೂ.15ರಂದು ಬೆಂಗಳೂರಲ್ಲಿ ಶಕ್ತಿ ಪ್ರದರ್ಶನ
June 4, 2019ಬೆಂಗಳೂರು: ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯಡಿ ಹಿಂದಿ ಭಾಷೆ ಹೇರಲು ಮುಂದಾಗಿರುವುದರ ವಿರುದ್ಧ ಈ ತಿಂಗಳ 15ರಂದು ಬೆಂಗಳೂರಿನಲ್ಲಿ ಹಿಂದಿಯೇತರ ರಾಜ್ಯಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ. ಸಮಾವೇಶದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಗೋವಾ ಹಾಗೂ ಪುದುಚೇರಿ ಸೇರಿದಂತೆ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳು, ಪ್ರಮುಖ ರಾಜಕೀಯ ಮುಖಂಡರು, ಸಾಹಿತಿಗಳು, ಬರಹಗಾರರು, ಚಿಂತಕರು ಪಾಲ್ಗೊಳ್ಳ ಲಿದ್ದಾರೆ. ಹೋರಾಟದ ರೂಪುರೇಷೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸಿದ್ಧಪಡಿ ಸಿದ್ದು,…
ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ
June 4, 2019ಮೈಸೂರು: ಅತಿಸಾರ ಭೇದಿಯಿಂದ ಐದು ವರ್ಷದೊಳಗಿನ ಮಕ್ಕಳು ಸಾವಿಗೀಡಾಗುವುದನ್ನು ತಡೆ ಗಟ್ಟುವ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಇಂದಿನಿಂದ ಜೂ.17ರವರೆಗೆ ಪ್ರಸಕ್ತ ಸಾಲಿನ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ (ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯ ಕಾರ್ಯಕ್ರಮ) ನಡೆಯಲಿದೆ. 5 ವರ್ಷದೊಳಗಿನ ಮಕ್ಕಳಲ್ಲಿ ಭೇದಿ ಲಕ್ಷಣಗಳು ಕಂಡುಬಂದಲ್ಲಿ ಅಂತಹ ಪ್ರಕ ರಣಗಳನ್ನು ಸಂಶಯಾತ್ಮಕ ಅತಿಸಾರ ಭೇದಿ ಪ್ರಕರಣ ಎಂದು ಪರಿಗಣಿಸಿ, ಅಂತಹ ಮಕ್ಕಳಿಗೆ ವಿಶೇಷ ಆದ್ಯತೆಯ ಮೇರೆಗೆ 14 ದಿನಗಳವರೆವಿಗೂ ಓಆರ್‍ಎಸ್ ದ್ರಾವಣ ಮತ್ತು ಝಿಂಕ್ ಮಾತ್ರೆಗಳನ್ನು ದ್ರ್ರಾವಣ ರೂಪದಲ್ಲಿ…
ಸಾಂಕ್ರಾಮಿಕ ರೋಗ ಹರಡದಂತೆ ಕಟ್ಟೆಚ್ಚರ ವಹಿಸಲು ಮೈಸೂರು ಡಿಸಿ ಸೂಚನೆ
June 4, 2019ಮೈಸೂರು: ಮಳೆ ಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ, ಸ್ವಚ್ಛತೆ ಕಾಪಾಡುವುದರೊಂದಿಗೆ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಂಡು ಸಾಂಕ್ರ್ರಾಮಿಕ ರೋಗಗಳು ಹರಡದಂತೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತಾದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಆರಂಭ ವಾಗಿದ್ದು ಸಾಂಕ್ರಾಮಿಕ ರೋಗ ಹರಡುವ ಆತಂಕವಿದೆ. ಮಳೆ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ…










