ಮೈಸೂರು: ಮುಂದಿನ ತಮ್ಮ ಐದು ವರ್ಷಗಳ ಅವಧಿಯಲ್ಲಿ ಮೈಸೂರು-ಬೆಂಗಳೂರು ರೈಲ್ವೆ ಮಾರ್ಗದ ವಿದ್ಯುದ್ದೀಕರಣ, ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ, ಮೈಸೂರು-ಮಡಿಕೇರಿ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಪರಿವರ್ತಿ ಸುವುದು, ರಿಂಗ್ ರಸ್ತೆ ಅಭಿವೃದ್ಧಿ, ನಾಗನಹಳ್ಳಿ ಸ್ಯಾಟಲೈಟ್ ಸ್ಟೇಷನ್ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೆತ್ತಿ ಕೊಳ್ಳುವುದಾಗಿ ಸಂಸದ ಪ್ರತಾಪಸಿಂಹ ತಿಳಿಸಿದರು. ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿ ಕುರಿತು ಪ್ರಸ್ತಾಪಿಸಿ, ಕಳೆದ ಅವಧಿಯಲ್ಲಿ ತಾವು ಮೈಸೂರಿನಿಂದ ಹಲವು ರಾಜ್ಯಗಳಿಗೆ ವಿಮಾನ ಸಂಪರ್ಕ…
ಕಾರ್ಮಿಕರ ಮುಂದಾಳತ್ವದಲ್ಲೇ ಫಾಲ್ಕನ್ ಟೈರ್ಸ್ ಪುನರಾರಂಭಕ್ಕೆ ಸರ್ಕಾರದ ಸಮ್ಮತಿ
May 29, 2019ಬೆಂಗಳೂರು: ಕಾರ್ಮಿಕರ ಮುಂದಾಳತ್ವ ದಲ್ಲಿ ಮೈಸೂರಿನ ರೋಗಗ್ರಸ್ಥ ಫಾಲ್ಕನ್ ಟೈರ್ಸ್ ಕಾರ್ಖಾನೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಸಮ್ಮತಿಸಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಖಾನೆ ಪುನರಾರಂಭ ಸಂಬಂಧ ಕಾರ್ಮಿಕರು, ಅಧಿಕಾರಿಗಳು ಮತ್ತು ಸಂಸ್ಥೆಯ ಆಡಳಿತ ಮಂಡಳಿ ಜೊತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸುದೀರ್ಘ ಸಮಾಲೋಚನೆ ನಂತರ ಪುನಶ್ಚೇತನಕ್ಕೆ ಸರ್ಕಾರದ ವತಿಯಿಂದ ಅಗತ್ಯ ಕ್ರಮಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸುವಂತೆ ಕಾರ್ಮಿಕರಿಗೆ ಸೂಚಿಸಿದ್ದಾರೆ. ಜೂನ್ 4 ರಂದು ಕಾರ್ಖಾನೆಗೆ ಸಂಬಂಧಿಸಿದಂತೆ ನ್ಯಾಯಾ ಲಯದಲ್ಲಿ ವಿಚಾರಣೆಗೆ ಬರಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ತನ್ನ ನಿರ್ಧಾರ…
ಇಂದು 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ
May 29, 2019ಬೆಂಗಳೂರು: ರಾಜ್ಯದ ಮಿನಿ ಸಮರವೆಂದೇ ಪರಿಗಣಿತ ವಾಗಿರುವ 61 ನಗರ ಸ್ಥಳೀಯ ಸಂಸ್ಥೆ ಗಳಿಗೆ ನಾಳೆ(ಮೇ29) ಮತದಾನ ನಡೆ ಯಲಿದೆ. ರಾಜ್ಯದ ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ಸೇರಿದಂತೆ 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮತ ದಾನ ನಡೆಯಲಿದ್ದು, 1296 ವಾರ್ಡ್ ಗಳಲ್ಲಿ 4360 ಅಭ್ಯರ್ಥಿಗಳು ಸ್ಪರ್ಧಿ ಸಿದ್ದಾರೆ. ಬೆಳಿಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಮತದಾನ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸಾರ್ವಜನಿಕ ಉದ್ದಿಮೆಗಳು, ಖಾಸಗಿ ಕಂಪೆನಿಗಳು…
ಮೈತ್ರಿ ಸರ್ಕಾರ `ಉಳಿಸಲು’ ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ
May 29, 2019ಬೆಂಗಳೂರು: ಚೊಚ್ಚಲ ಒಂದು ವರ್ಷ ಅಧಿಕಾರ ಪೂರೈಸಿರುವ ರಾಜ್ಯ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ಸ್ಥಿರತೆಗೆ ಎದುರಾಗಿರುವ ‘ಗಂಡಾಂತರ’ ತಪ್ಪಿಸುವ ಕಾರ್ಯತಂತ್ರ ರೂಪಿಸಿ, ರಾಜ್ಯ ಕಾಂಗ್ರೆಸ್ ನಾಯಕ ರಿಗೆ ನೆರವಾಗಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಕೇಂದ್ರೀಯ ತಂಡವನ್ನು ನಿಯೋಜಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಂಟಾಗಿರುವ ತೀವ್ರ ಹಿನ್ನಡೆಯ ಕಾರಣ ರಾಜ್ಯ ಮೈತ್ರಿ ಕೂಟ ಸರ್ಕಾರ ಗಂಭೀರ ಬಿಕ್ಕಟ್ಟು ಎದುರಿ ಸುತ್ತಿದ್ದು, ಅವುಗಳನ್ನು ನಿವಾರಿಸಿ ಚೊಚ್ಚಲ ವರ್ಷ ಪೂರೈಸಿರುವ ಸರ್ಕಾರವನ್ನು ಹೇಗಾದರೂ ಮಾಡಿ ಉಳಿಸಲು…
ಕರ್ನಾಟಕ ರಾಜ್ಯ ಮುಕ್ತ ವಿವಿ ನೂತನ ಕುಲಪತಿಯಾಗಿ ಪ್ರೊ.ವಿದ್ಯಾಶಂಕರ್ ನೇಮಕ
May 29, 2019ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ನೂತನ ಕುಲಪತಿಯಾಗಿ ಪ್ರೊ. ಎಸ್.ವಿದ್ಯಾಶಂಕರ್ ಅವರನ್ನು ನೇಮಕ ಗೊಳಿಸಿ ರಾಜ್ಯಪಾಲ ವಿ.ಆರ್.ವಾಲಾ ಮಂಗಳ ವಾರ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ಅವರ ಅಧಿಕಾರಾವಧಿ ಮಾ.11ಕ್ಕೆ ಮುಕ್ತಾಯ ಗೊಂಡಿದ್ದು, ಈ ಹಿನ್ನೆಲೆಯಲ್ಲಿ ನೂತನ ಕುಲಪತಿ ಆಯ್ಕೆಗೆ ಜಾನಪದ ವಿವಿ ಕುಲಪತಿ ಪ್ರೊ.ಡಿ.ಬಿ.ನಾಯಕ್, ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಸ್.ಎನ್.ಹೆಗ್ಡೆ ಹಾಗೂ ನ್ಯಾಕ್ ನಿರ್ದೇಶಕ ಡಾ.ಎಸ್.ಸಿ.ಶರ್ಮಾ ಒಳಗೊಂಡ ಆಯ್ಕೆ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ಮುಕ್ತ ವಿವಿ ಶೈಕ್ಷಣಿಕ ಡೀನ್ ಪ್ರೊ.ಜಗದೀಶ್,…
ಮೈಸೂರಲ್ಲಿ 24×7 ನೀರು ಪೂರೈಕೆಗೆ ಹೆಚ್ಚುವರಿ 85 ಕೋಟಿ ಬಿಡುಗಡೆ
May 28, 2019ಬೆಂಗಳೂರು: ಮೈಸೂರು ನಗರಕ್ಕೆ ಅಮೃತ್ ಯೋಜನೆಯಡಿ 24×7 ಕುಡಿ ಯುವ ನೀರು ಸರಬರಾಜು ಯೋಜನಾ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಹೆಚ್ಚುವರಿ ಯಾಗಿ 85 ಕೋಟಿ ರೂ. ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಇಂದಿಲ್ಲಿ ಸಮ್ಮತಿಸಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇ ಗೌಡ, ಜೆಎನ್ ನರ್ಮ್ ಯುಐಜಿ -ಸ್ಥಿತ್ಯಂತರ ಹಂತದಡಿಯಲ್ಲಿ ಪೂರ್ಣಗೊಂಡಿರುವ ಈ ಯೋಜನೆಗಳಿಗೆ ಮತ್ತಷ್ಟು ಹಣ ಅಗತ್ಯವಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಂಡಿದೆ. ಬೆಂಗಳೂರು ಜಯದೇವ ಹೃದ್ರೋಗ ಸಂಸ್ಥೆಯ…
ಸಂಪುಟ ಪುನರ್ರಚನೆ ಇಲ್ಲ, ವಿಸ್ತರಣೆ ಮಾತ್ರ
May 28, 2019ಮೈಸೂರು: ಕಾಂಗ್ರೆಸ್‍ನ ಯಾವ ಸಚಿವರನ್ನೂ ಸಂಪುಟದಿಂದ ಕೈಬಿಡುವುದಿಲ್ಲ. ಖಾಲಿಯಿರುವ 3 ಸ್ಥಾನವನ್ನಷ್ಟೇ ತುಂಬಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದ ಬಳಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಪುನರ್ರಚನೆ ಮಾಡುವುದಿಲ್ಲ. ಖಾಲಿಯಿರುವ 3 ಸ್ಥಾನ ತುಂಬುವುದಕ್ಕೆ ಕ್ರಮ ಕೈಗೊಳ್ಳಲಾ ಗಿದೆ. ಸಚಿವ ಶಿವಳ್ಳಿ ಅವರ ನಿಧನದಿಂದ ತೆರವಾಗಿರುವ ಸ್ಥಾನ ಹಾಗೂ ಜೆಡಿಎಸ್ ಕೋಟಾದಲ್ಲಿ ಖಾಲಿಯಿರುವ 2 ಸ್ಥಾನವನ್ನು ತುಂಬಲಾಗುತ್ತಿದೆ….
ಮುಕ್ತ ವಿವಿ 2011-12, 2012-13ನೇ ಸಾಲಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ
May 28, 2019ಮೈಸೂರು: ಯುಜಿಸಿ ಮಾನ್ಯತೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಮತ್ತೆ ಮಾನ್ಯತೆ ಸಿಕ್ಕಿರುವ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಾಗುತ್ತಿದ್ದು, ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಲು ವಿದ್ಯಾರ್ಥಿಗಳು ಮುಗಿ ಬೀಳುತ್ತಿದ್ದಾರೆ. ಅತಂತ್ರ ಸ್ಥಿತಿಯಲ್ಲಿದ್ದ 2011-12, 2012-13ನೇ ಸಾಲಿನಲ್ಲಿ ಪ್ರವೇಶಾತಿ ಪಡೆದಿರುವ ಬಿಎ, ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸ ಲಾಗಿದೆ ಎಂದು ಮುಕ್ತ ವಿವಿ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ತಿಳಿಸಿದ್ದಾರೆ. ಮೈಸೂರಿನ ಮುಕ್ತ ಗಂಗೋತ್ರಿಯಲ್ಲಿ ಸೋಮ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಿಂದ…
ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯದ ಜಲಾಶಯಗಳ ಪರಿಶೀಲನೆ
May 28, 2019ಮೈಸೂರು: ಸುಪ್ರೀಂಕೋರ್ಟ್ ನಿರ್ದೇಶನದಂತೆ ರಚನೆಯಾಗಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಜೂನ್ 4 ರಿಂದ 24 ರವರೆಗೆ ಕಾವೇರಿ ನದಿ ಪಾತ್ರದ ನಾಲ್ಕು ರಾಜ್ಯಗಳ ಅಣೆಕಟ್ಟೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವರು. ಜೂನ್ 4 ಮತ್ತು 5 ರಂದು ಕೃಷ್ಣರಾಜಸಾಗರ ಅಣೆಕಟ್ಟೆ, 7 ರಿಂದ 9 ರವರೆಗೆ ತಮಿಳುನಾಡಿನ ಮೆಟ್ಟೂರು ಜಲಾಶಯ, ಭವಾನಿ ಹಾಗೂ ಅಮರಾವತಿ ಜಲಾಶಯ, ಜೂನ್ 9 ರಿಂದ 10 ರವರೆಗೆ ಪುದುಚೇರಿ ಮತ್ತು ಪಾಂಡಿಚೇರಿ, ಜೂನ್ 17 ರಿಂದ 20 ರವರೆಗೆ…
ಪಾಲಿಕೆ ಅಧಿಕಾರಿಗಳು ವಶಪಡಿಸಿಕೊಂಡ ವಾಹನವೇ ನಾಪತ್ತೆ
May 28, 2019ಮೈಸೂರು: ನಗರ ಪಾಲಿಕೆ ಆವರಣದಲ್ಲಿದ್ದ ವಾಹನವೊಂದು ಇದ್ದಕ್ಕಿದ್ದಂತೆ ನಾಪತ್ತೆ ಯಾಗಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡುವಂತೆ ಮೇಯರ್ ಪುಷ್ಪಲತಾ ಜಗನ್ನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಗರಪಾಲಿಕೆ ಅನುಮತಿ ಪಡೆಯದೆ ಅನಧಿಕೃತ ವಾಗಿ ವಿದ್ಯುತ್ ಕಂಬಗಳಿಗೆ ಟೆಲಿಕಾಂ ನೆಟ್‍ವರ್ಕ್ ಕೇಬಲ್ ಅಳವಡಿಸುತ್ತಿದ್ದ ಆರೋಪದಡಿ ಏ.30ರಂದು 4ನೇ ವಾರ್ಡ್‍ನಲ್ಲಿ ಕೇಬಲ್ ಸಹಿತ ವಶಪಡಿಸಿಕೊಳ್ಳ ಲಾಗಿದ್ದ ಜೀಪ್ ಮಾದರಿ ಬೊಲೆರೋ ವಾಹನ 3 ದಿನಗಳ ಹಿಂದೆ ನಾಪತ್ತೆಯಾಗಿದೆ. ವಲಯ ಕಚೇರಿ 5ರ ಸಹಾಯಕ ಆಯುಕ್ತ ಮಹೇಶ್,…










