Tag: Mysuru-Kodagu Constituency

ಕೊಡಗಿನ ಸಂಸ್ಕೃತಿ ಅನಾವರಣಗೊಳಿಸಿದ ಸಂಸದ ಪ್ರತಾಪ್‍ಸಿಂಹ
ಮೈಸೂರು

ಕೊಡಗಿನ ಸಂಸ್ಕೃತಿ ಅನಾವರಣಗೊಳಿಸಿದ ಸಂಸದ ಪ್ರತಾಪ್‍ಸಿಂಹ

June 18, 2019

ನವದೆಹಲಿ: ನಾನು ಮೈಸೂರು-ಕೊಡಗು ಸಂಸದನಾಗಿದ್ದು, ವಿಶಿಷ್ಟ ಭಾಷೆ, ಸಂಸ್ಕೃತಿ, ಆಚಾರ-ವಿಚಾರ ಗಳನ್ನು ಹೊಂದಿರುವ ಕೊಡಗು ಸಂಸ್ಕೃತಿಯನ್ನು ಸಂಸತ್‍ನಲ್ಲಿ ಪ್ರಚುರಪಡಿಸಬೇಕಾಗಿರುವುದು ನನ್ನ ಕರ್ತವ್ಯವೆಂದು ಕೊಡವರ ಸಾಂಪ್ರದಾಯಿಕ ಉಡುಪಿನಲ್ಲಿ ಬಂದಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ನಾನು ಈ ಉಡುಗೆ ತೊಟ್ಟು ಬರಲು ನನ್ನ ಪತ್ನಿ ಅರ್ಪಿತಾ ಕಾರಣ ಎಂದು ಹೇಳಿದ ಅವರು, ಈ ಬಾರಿ ಸಂಸತ್ ಪ್ರವೇಶಿಸುವಾಗ ನಮ್ಮ ಸಂಸ್ಕೃತಿಯನ್ನು ಬಿಂಬಿಸುವಂತಹ ಉಡುಗೆ ತೊಡಬೇಕು. ಅದರಲ್ಲೂ ಕೊಡವರ ಉಡುಗೆ ತೊಡಬೇಕು ಎಂದು ಪತ್ನಿ ಅರ್ಪಿತ ಹೇಳಿದ್ದರೆಂದು ಪ್ರತಾಪ್…

ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್‍ಸಿಂಹಗೆ ಅತೀ ಹೆಚ್ಚು ಮತಗಳ ಮುನ್ನಡೆ
ಮೈಸೂರು

ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್‍ಸಿಂಹಗೆ ಅತೀ ಹೆಚ್ಚು ಮತಗಳ ಮುನ್ನಡೆ

May 26, 2019

ಮೈಸೂರು: ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್‍ಸಿಂಹರಿಗೆ ಅತ್ಯಧಿಕ ಮತಗಳ ಮುನ್ನಡೆ ದೊರೆತಿದೆ ಎಂದು ಶಾಸಕ ಎಸ್.ಎ.ರಾಮದಾಸ್ ಇಂದಿಲ್ಲಿ ತಿಳಿಸಿದ್ದಾರೆ. ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಪ್ರೆಸಿಡೆಂಟ್ ಹೋಟೆಲಿನಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾ ಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 60,000 ಮತಗಳ ಮುನ್ನಡೆ ಸಾಧಿಸಲು ಅವಕಾಶ ನೀಡಿ, ಪ್ರತಾಪ್‍ಸಿಂಹ 2ನೇ ಬಾರಿ ಸಂಸದರಾಗಿ ಆಯ್ಕೆಯಾಗಲು ಕಾರಣಕರ್ತರಾದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. 2018ರ ವಿಧಾನಸಭೆ ಚುನಾವಣೆಯಲ್ಲಿ 1,46,690 ಮತಗಳು ಚಲಾವಣೆಯಾಗಿತ್ತು. 100 ದಿನಗಳಲ್ಲಿ 1 ಲಕ್ಷ ಮತ ಕ್ಷೇತ್ರವಾಗಿಸುವ…

ಸೋಲಿನ ಕಾರಣ ತಿಳಿಯಲು ಶೀಘ್ರವೇ ಆತ್ಮಾವಲೋಕನ ಸಭೆ
ಮೈಸೂರು

ಸೋಲಿನ ಕಾರಣ ತಿಳಿಯಲು ಶೀಘ್ರವೇ ಆತ್ಮಾವಲೋಕನ ಸಭೆ

May 25, 2019

ಮೈತ್ರಿ ಪರಾಜಿತ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪ್ರತಿಕ್ರಿಯೆ ಮೈಸೂರು: ಸೋಲಿನ ಸ್ಪಷ್ಟ ಕಾರಣದ ಬಗ್ಗೆ ತಿಳಿಯಲು ಶೀಘ್ರದಲ್ಲಿ ಆತ್ಮಾವಲೋಕನ ಸಭೆ ಕರೆಯಲಾಗುವುದು ಎಂದು ತಿಳಿಸಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ಮೈತ್ರಿಯ ಪರಾಜಿತ ಅಭ್ಯರ್ಥಿ ಸಿ.ಹೆಚ್.ವಿಜಯ ಶಂಕರ್, ಈಗಲಾದರೂ ಮಾನಸಿಕವಾಗಿ ಒಂದಾಗಿ ರಾಜ್ಯ ಮೈತ್ರಿ ಸರ್ಕಾರ ಉಳಿಸಿಕೊಳ್ಳಬೇಕು ಎಂದಿದ್ದಾರೆ. `ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಅವರು, ಮೇಲ್ನೋ ಟಕ್ಕೆ ಕಾಣುವ ಕಾರಣಗಳನ್ನೇ ಮುಂದಿಟ್ಟುಕೊಂಡು ಹೇಳಿಕೆ ನೀಡುವುದು ಸೂಕ್ತವಲ್ಲ. ಎರಡೂ ಪಕ್ಷಗಳ ಕಾರ್ಯ ಕರ್ತರನ್ನು ಒಟ್ಟಿಗೆ ಸೇರಿಸಿ ಮಾತನಾಡಬೇಕು. ತಕ್ಷಣಕ್ಕೆ…

ಮೈಸೂರು-ಕೊಡಗು ಶೇ.68.85, ಮಂಡ್ಯ ಶೇ. 80.23,  ಚಾಮರಾಜನಗರ ಶೇ.74.11, ಹಾಸನದಲ್ಲಿ ಶೇ.77.28 ದಾಖಲೆ ಮತದಾನ
ಮೈಸೂರು

ಮೈಸೂರು-ಕೊಡಗು ಶೇ.68.85, ಮಂಡ್ಯ ಶೇ. 80.23, ಚಾಮರಾಜನಗರ ಶೇ.74.11, ಹಾಸನದಲ್ಲಿ ಶೇ.77.28 ದಾಖಲೆ ಮತದಾನ

April 19, 2019

ಮೈಸೂರು: ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಚಾಮರಾಜ, ಕೃಷ್ಣರಾಜ ಹಾಗೂ ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು. ಒಟ್ಟು 18,95,056 ಮತದಾರರಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಾದ್ಯಂತ ಸ್ಥಾಪಿಸಿದ್ದ ಒಟ್ಟು 2,187 ಮತಗಟ್ಟೆಗಳಲ್ಲೂ ಕುಡಿಯುವ ನೀರು, ಶೌಚಾಲಯ, ರ್ಯಾಂಪ್, ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲಾ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿತ್ತು. ಪ್ರತೀ ಮತಗಟ್ಟೆಯ ಬಳಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಹೆಸರು, ಕ್ರಮ ಸಂಖ್ಯೆ, ಚಿಹ್ನೆಗಳನ್ನು ಬರೆದು ಅಂಟಿಸಲಾಗಿತ್ತು. ಮತಗಟ್ಟೆ…

ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರ
ಮೈಸೂರು

ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರ

April 19, 2019

ಮೈಸೂರು: ಲೋಕ ಸಮರದ ಮೊದಲ ಹಂತದ ಮತದಾನ ಪೂರ್ಣಗೊಂಡಿದ್ದು, ಇದೀಗ ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರವಾಗಿದೆ. ಮತದಾರ ಯಾರಿಗೆ ಒಲಿದಿದ್ದಾನೆ ಎಂಬುದು ಮೇ 23ರಂದು ಬಹಿ ರಂಗಗೊಳ್ಳಲಿದೆ. ಇಂದು ರಾತ್ರಿ ವೇಳೆಗೆ ಮತಗಳಿರುವ ಸೀಲ್ ಮಾಡಿದ ಇವಿಎಂಗಳನ್ನು ಆಯಾ ಮಸ್ಟರಿಂಗ್ ಕೇಂದ್ರಗಳಿಗೆ ತಂದು ಪರಿಶೀಲಿಸಿದ ನಂತರ ಮೈಸೂರಿನ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ಸುರಕ್ಷಿತವಾಗಿ ಇರಿಸಿ ದಿನದ 24 ಗಂಟೆಯೂ ಮೂರು ಸುತ್ತಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಿಜೆಪಿಯ ಪ್ರತಾಪ್ ಸಿಂಹ, ಕಾಂಗ್ರೆಸ್ಸಿನ…

ಮೈಸೂರಲ್ಲಿ ಜನ ಸಂಚಾರ ವಿರಳ
ಮೈಸೂರು

ಮೈಸೂರಲ್ಲಿ ಜನ ಸಂಚಾರ ವಿರಳ

April 19, 2019

ಮೈಸೂರು: ಲೋಕಸಭಾ ಚುನಾವಣೆ ಮತದಾನದ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಮೈಸೂರಿನ ಹೃದಯ ಭಾಗಗಳೂ ಸೇರಿದಂತೆ ಹಲ ವೆಡೆ ಜನ ಸಂಚಾರ ವಿರಳವಾಗಿತ್ತು. ಮೈಸೂರಿನ ಕೆಆರ್ ವೃತ್ತ, ಚಾಮರಾಜ ವೃತ್ತ, ದೊಡ್ಡ ಗಡಿಯಾರ ವೃತ್ತ ಸೇರಿದಂತೆ ಸಯ್ಯಾಜಿರಾವ್ ರಸ್ತೆ, ಡಿ. ದೇವರಾಜ ಅರಸು ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನಿತ್ಯ ಇರುತ್ತಿದ್ದಷ್ಟು ಜನ ಸಂಚಾರವೇ ಇರಲಿಲ್ಲ. ಬಹುತೇಕರು ಮತದಾನ ಪ್ರಕ್ರಿಯೆಯಲ್ಲಿ ತಲ್ಲೀನರಾದರೆ, ರಜೆಯೊಂದಿಗೆ ಬಿಸಿಲಿನ ಬೇಗೆ ಯಿಂದಲೂ ಅನೇಕರು ಹೊರ ಬಾರದಿರಬಹುದು. ಸಾಮಾನ್ಯವಾಗಿ ನಿತ್ಯ ಇರುತ್ತಿದ್ದ ಜನ ಸಂದಣಿ…

ನೂರಾರು ಮಂದಿಯ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದೇಕೆ?
ಮೈಸೂರು

ನೂರಾರು ಮಂದಿಯ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದೇಕೆ?

April 19, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ನೂರಾರು ಮಂದಿ ಮತದಾನದಿಂದ ವಂಚಿತರಾಗಿದ್ದಾರೆ. ಹಲವು ವರ್ಷ ಗಳಿಂದ ಮತದಾನ ಮಾಡಿರುವ ಮತದಾರರನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕಲಾಗಿರುವ ಬಗ್ಗೆ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ನಗರಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ಅವರು ಮತದಾನ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆ ಯಲ್ಲಿ ಮತದಾರರ ಹಕ್ಕು. ಈ ಹಕ್ಕು ಚಲಾವಣೆ ಮಾಡಿ ಪ್ರಜಾಪ್ರಭುತ್ವದಲ್ಲಿ ನಮಗೆ ಇಷ್ಟವಾದ ವ್ಯಕ್ತಿ ಯನ್ನು ಆಯ್ಕೆ ಮಾಡುವುದು ಪ್ರತಿಯೊಬ್ಬರ ಕರ್ತ ವ್ಯವೂ ಹೌದು. ಕಳೆದ ಮಹಾನಗರಪಾಲಿಕೆ ಚುನಾ ವಣೆ, ವಿಧಾನ…

ಮೈಸೂರು ಎನ್‍ಆರ್ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತ ಶೇ.60.83 ಮತದಾನ
ಮೈಸೂರು

ಮೈಸೂರು ಎನ್‍ಆರ್ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತ ಶೇ.60.83 ಮತದಾನ

April 19, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆ ಸಂಬಂಧ ಎನ್‍ಆರ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ಶೇ.60.83ರಷ್ಟು ಮತದಾನ ಸಂಪೂರ್ಣ ಶಾಂತಿಯುತವಾಗಿ ನಡೆಯಿತು. ಗಾಂಧಿನಗರ, ಉದಯಗಿರಿ, ಕ್ಯಾತ ಮಾರನಹಳ್ಳಿ, ಗೌಸಿಯಾನಗರ, ಶಕ್ತಿನಗರ ಸೇರಿದಂತೆ ಕ್ಷೇತ್ರದ ವಿವಿಧೆಡೆಯಲ್ಲಿ ಒಟ್ಟು 282 ಮತಗಟ್ಟೆಗಳಲ್ಲಿ ಕ್ಷೇತ್ರದ ಮತ ದಾರರು ಮತ ಚಲಾಯಿಸಿದರು. ಬೆಳಿಗ್ಗೆ 9 ಗಂಟೆ ವೇಳೆ ಶೇ.4.48 ಮತ ಚಲಾವಣೆ ಆಗುವ ಮೂಲಕ ನಿಧಾನಗತಿಯಲ್ಲಿದ್ದ ಮತದಾನ, ಬೆಳಿಗ್ಗೆ 11ರ ವೇಳೆಗೆ ಶೇ.10.17ರಷ್ಟು ಹೆಚ್ಚಳ ಗೊಂಡಿತು. ಆ ಬಳಿಕ ಮತದಾನದ ಬಿರುಸು ಗೊಂಡಿದ್ದು, ಮಧ್ಯಾಹ್ನ…

ಕೆ.ಆರ್.ಕ್ಷೇತ್ರದಲ್ಲಿ ಆರಂಭದಲ್ಲಿ ಉತ್ಸಾಹ ಬಿಸಿಲೇರುತ್ತಿದ್ದಂತೆ ನಿರುತ್ಸಾಹ
ಮೈಸೂರು

ಕೆ.ಆರ್.ಕ್ಷೇತ್ರದಲ್ಲಿ ಆರಂಭದಲ್ಲಿ ಉತ್ಸಾಹ ಬಿಸಿಲೇರುತ್ತಿದ್ದಂತೆ ನಿರುತ್ಸಾಹ

April 19, 2019

ಮೈಸೂರು: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ ಚುರುಕಾಗಿ ಆರಂಭವಾದ ಮತ ದಾನ ಮಧ್ಯಾಹ್ನದ ವೇಳೆಗೆ ಇಳಿಮುಖ ವಾಯಿತು. ಆದರೆ ಮತ್ತೆ ಸಂಜೆ ಬಿರುಸಾಗಿ ಸಾಗಿತು. ಕ್ಷೇತ್ರದ ಎಲ್ಲಾ 270 ಮತಗಟ್ಟೆಗಳಲ್ಲಿಯೂ ಯಾವುದೇ ಗೊಂದಲವಿಲ್ಲದೆ ಶಾಂತಿಯುತ ಶೇ.60.36 ರಷ್ಟು ಮತದಾನ ನಡೆಯಿತು. ಕೆ.ಆರ್.ಕ್ಷೇತ್ರದಲ್ಲಿ 1,20,146 ಪುರು ಷರು, 1,23,568 ಮಹಿಳೆಯರು ಹಾಗೂ 22 ತೃತೀಯ ಲಿಂಗಿಗಳು ಸೇರಿ ಒಟ್ಟು 2,43, 736 ಮತದಾರರಿದ್ದು, ಇಂದು ಬೆಳಿಗ್ಗೆ ಎಲ್ಲ ಮತಗಟ್ಟೆಗಳಲ್ಲಿಯೂ ನಿಗದಿತ ಸಮಯದಲ್ಲಿ ಮತದಾನ ಆರಂಭವಾಯಿತು. ಆರಂಭದಲ್ಲಿ ಮತ…

ಗುರುತಿನ ಚೀಟಿ ಇದ್ದರೂ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ: ಶಾಸಕ ನಾಗೇಂದ್ರ ಅಸಮಾಧಾನ
ಮೈಸೂರು

ಗುರುತಿನ ಚೀಟಿ ಇದ್ದರೂ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ: ಶಾಸಕ ನಾಗೇಂದ್ರ ಅಸಮಾಧಾನ

April 19, 2019

ಮೈಸೂರು: ಮತದಾನ ಗುರುತಿನ ಚೀಟಿ ಇದ್ದರೂ ಸಾಕಷ್ಟು ಮತದಾರರನ್ನು ಪಟ್ಟಿಯಲ್ಲಿ ಕೈ ಬಿಡಲಾಗಿದೆ. ಇದಕ್ಕೆ ಚುನಾವಣಾ ಅಧಿಕಾರಿಗಳ ಲೋಪವೇ ಕಾರಣ ಎಂದು ಶಾಸಕ ಎಲ್.ನಾಗೇಂದ್ರ ಹೇಳಿದರು. ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ‘ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯಿ ಸಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡಿದವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಸಾಕಷ್ಟು ಮತದಾರರು ಈ ಸಂಬಂಧ ನನಗೆ ಕರೆ ಮಾಡಿ ತಿಳಿಸಿದ್ದಾರೆ. ಅಲ್ಲದೆ ವಿದೇಶದಿಂದ ನನ್ನ ಸ್ನೇಹಿತರು ಮತದಾನ ಮಾಡಲು ಬಂದಿದ್ದರು. ಅವರ ಹೆಸರನ್ನು…

1 2 3
Translate »