Tag: Mysuru

ಮೋದಿ ಜೊತೆ ಸೆಲ್ಫಿಗೆ ವ್ಯವಸ್ಥೆ
ಮೈಸೂರು

ಮೋದಿ ಜೊತೆ ಸೆಲ್ಫಿಗೆ ವ್ಯವಸ್ಥೆ

April 9, 2019

ಮೈಸೂರು: ಮಂಗಳವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ಬಹಿರಂಗ ಚುನಾವಣಾ ಪ್ರಚಾರ ಸಭೆಯ ಸಿದ್ಧತೆ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇದಿಕೆಯ ಬಲಭಾಗದಲ್ಲಿ ಒಂದು ಪ್ರತ್ಯೇಕ ಸೆಲ್ಫಿ ಜೋನ್ ಮಾಡಿ, ಅಲ್ಲಿ ಅಭಿಮಾನಿಗಳು ಮೋದಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಅನುಕೂಲ ಮಾಡಿಕೊಡಲು ಚಿಂತನೆ ಮಾಡಲಾಗಿದ್ದು, ಇದು ವಿಶೇಷ ಆಕರ್ಷಣೆಯಾಗಿದೆ ಎಂದರು….

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ  ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಮೈಸೂರು

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕೇಂದ್ರಗಳ ಸುತ್ತ ನಿಷೇಧಾಜ್ಞೆ

April 9, 2019

ಮೈಸೂರು: ನಗರದ ವಿವಿಧೆಡೆ ಏ.9ರಿಂದ ಏ.20 ರವರೆಗೆ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕೇಂದ್ರಗಳ ಸುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಶೋಕಪುರಂ ಠಾಣಾ ವ್ಯಾಪ್ತಿಯ ಕಾವೇರಿ ಪ್ರೌಢಶಾಲೆ, ವಿವಿ ಪುರಂ ಠಾಣಾ ವ್ಯಾಪ್ತಿಯ ನಿರ್ಮಲ ಕಾನ್ವೆಂಟ್, ಜಯಲಕ್ಷ್ಮೀಪುರಂ ಠಾಣಾ ವ್ಯಾಪ್ತಿಯ ಚಿನ್ಮಯ ಪ್ರೌಢಶಾಲೆ, ಸರಸ್ವತಿಪುರಂ ಠಾಣಾ ವ್ಯಾಪ್ತಿಯ ವಿಜಯವಿಠಲ ವಿದ್ಯಾ ಸಂಸ್ಥೆ, ಕುವೆಂಪುನಗರ ಠಾಣಾ ವ್ಯಾಪ್ತಿಯ ಜ್ಞಾನಗಂಗಾ ಪ್ರೌಢಶಾಲೆ, ಎನ್.ಆರ್. ಮೊಹಲ್ಲಾ ಠಾಣಾ ವ್ಯಾಪ್ತಿಯ ಸೆಂಟ್ ಫಿಲೋಮಿನಾ…

ವಿವಿಧ ಪಕ್ಷಗಳ ಮುಖಂಡರು ಬಿಜೆಪಿ ಸೇರ್ಪಡೆ
ಮೈಸೂರು

ವಿವಿಧ ಪಕ್ಷಗಳ ಮುಖಂಡರು ಬಿಜೆಪಿ ಸೇರ್ಪಡೆ

April 9, 2019

ಮೈಸೂರು: ಹೆಚ್.ಡಿ.ಕೋಟೆ ತಾಲೂಕು ವಿವಿಧ ಮುಖಂಡರು ಮಾಜಿ ಸಚಿವ ಹಾಗೂ ಚಾಮರಾಜನಗರ ಲೋಕಸಭಾ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದ್ ಅವರ ಸಮ್ಮುಖದಲ್ಲಿ ಶಾಸಕ ಬಿ.ಶ್ರೀರಾಮುಲು, ಜಿಲ್ಲಾಧ್ಯಕ್ಷ ಎಂ.ಶಿವಣ್ಣ, ವಿ.ರಾಮ ಸ್ವಾಮಿ ಹಾಗೂ ವಿ.ಶ್ರೀನಿವಾಸಪ್ರಸಾದ್ ಅಭಿಮಾನಿಗಳ ಬಳಗ ಮೈಸೂರು ವತಿ ಯಿಂದ ನೂರಾರು ಮುಖಂಡರು ವಿ.ಶ್ರೀನಿವಾಸಪ್ರಸಾದ್ ಅವರನ್ನು ಬೆಂಬಲಿಸಿ ಬಿಜೆಪಿ ಸೇರ್ಪಡೆಗೊಂಡರು. ಬಿಎಸ್‍ಪಿ ಜಿಲ್ಲಾ ಮಾಜಿ ಅಧ್ಯಕ್ಷ ದೇವದತ್ತ, ಹೆಚ್.ಡಿ.ಕೋಟೆ ತಾಲೂಕು ಒಕ್ಕಲಿಗ ಸಂಘದ ಉಪಾಧ್ಯಕ್ಷ ಪುಟ್ಟೇಗೌಡ, ಹೊಸಹಳ್ಳಿ ತಾಲೂಕು ಮಹಿಳಾ ಸಂಘದ ಅಧ್ಯಕ್ಷೆ ಹೆಚ್.ಎನ್.ಸುಧಾ, ಬಿದ್ದರಹಳ್ಳಿ ಗ್ರಾಪಂ ಹಾಲಿ…

ಮೈಸೂರು ವಿವಿಗೆ 54ನೇ ರ್ಯಾಂಕಿಂಗ್ ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪಟ್ಟಿ ಬಿಡುಗಡೆ
ಮೈಸೂರು

ಮೈಸೂರು ವಿವಿಗೆ 54ನೇ ರ್ಯಾಂಕಿಂಗ್ ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪಟ್ಟಿ ಬಿಡುಗಡೆ

April 9, 2019

ಮೈಸೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನವದೆಹಲಿಯಲ್ಲಿ ಸೋಮವಾರ ಭಾರತೀಯ ವಿಶ್ವವಿದ್ಯಾನಿಲಯಗಳ 2019ನೇ ಸಾಲಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು, ಮೈಸೂರು ವಿಶ್ವವಿದ್ಯಾನಿಲಯ 54ನೇ ಸ್ಥಾನಕ್ಕೆ ಭಾಜನವಾಗಿದೆ. ಜೊತೆಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ದೇಶದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣೆ ಗುಣಮಟ್ಟ ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ನ್ಯಾಷನಲ್ ಇನ್‍ಸ್ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಮ್‍ವರ್ಕ್ ಮೂಲಕ 2016ರಿಂದ ವಿವಿಧ ವಿಭಾಗಗಳಲ್ಲಿ ರ್ಯಾಂಕಿಂಗ್ ಪದ್ಧತಿಯನ್ನು ಜಾರಿಗೊಳಿಸಿದ್ದು, 2017ರಲ್ಲಿ ಮೈಸೂರು…

ಸರ್ಜಿಕಲ್ ಸ್ಟ್ರೈಕ್ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ
ಮೈಸೂರು

ಸರ್ಜಿಕಲ್ ಸ್ಟ್ರೈಕ್ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ

April 9, 2019

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭ ಮಾಡಿಕೊಳ್ಳುವುದಕ್ಕಾಗಿ ಸರ್ಜಿಕಲ್ ಸ್ಟ್ರೈಕ್ ಅನ್ನೇ ಬಿಜೆಪಿ ಬಂಡವಾಳ ಮಾಡಿಕೊಂಡು ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡು ತ್ತಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಹೊಸ ಹುಂಡಿ, ಚಾಮುಂಡಿಬೆಟ್ಟ, ಆಲನಹಳ್ಳಿ, ಹಂಚ್ಯಾ, ಸಿದ್ದಲಿಂಗಪುರದ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಭೆ ನಡೆಸಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್‍ನ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳುವ…

ಮೊದಲ ಹಂತದ ಮತದಾನದಂದು ಪ್ರಧಾನಿ  ನರೇಂದ್ರ ಮೋದಿ ಭಾಷಣ ನಿರ್ಬಂಧಕ್ಕೆ ಆಗ್ರಹ
ಮೈಸೂರು

ಮೊದಲ ಹಂತದ ಮತದಾನದಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ನಿರ್ಬಂಧಕ್ಕೆ ಆಗ್ರಹ

April 9, 2019

ಮೈಸೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾ ವಣೆ ಮತದಾನ ನಡೆಯುವ ದಿನವಾದ ಏ.18ರಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವುದು ಚುನಾವಣಾ ನೀತಿ ಸಂಹಿತೆ ಉಲ್ಲಂ ಘನೆ ಮಾಡಿದಂತಾಗಲಿದ್ದು, ಈ ಕುರಿತು ಚುನಾವಣಾ ಆಯೋ ಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಹೆಚ್.ಎ.ವೆಂಕಟೇಶ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.18 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಅದೇ ದಿನ ರಾಜ್ಯದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ…

80 ತುಂಬಿದ ಸಾಹಿತಿ ಡಾ.ಸಿಪಿಕೆ ಅವರಿಗೆ  ವಿವಿಧ ಸಂಘಟನೆಗಳಿಂದ ಅಭಿನಂದನೆ
ಮೈಸೂರು

80 ತುಂಬಿದ ಸಾಹಿತಿ ಡಾ.ಸಿಪಿಕೆ ಅವರಿಗೆ ವಿವಿಧ ಸಂಘಟನೆಗಳಿಂದ ಅಭಿನಂದನೆ

April 9, 2019

ಮೈಸೂರು: ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ (ಸಿಪಿಕೆ) ಅವರಿಗೆ 80 ತುಂಬಿದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಸೋಮವಾರ ಮೈಸೂ ರಿನ ಸರಸ್ವತಿಪುರಂನಲ್ಲಿರುವ ಅವರ ನಿವಾ ಸಕ್ಕೆ ತೆರಳಿ `ಕವಿ ಮನೆಯಲ್ಲಿ ಕವಿಗೆ ಸನ್ಮಾನ’ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕನ್ನಡ ಚಳವಳಿಗಾರರ ಕೇಂದ್ರ ಸಮಿತಿ, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿ ಷತ್, ಮೈಸೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಕಲಾಕೂಟ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಸಿಪಿಕೆ ಅವರನ್ನು ಅಭಿನಂದಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ….

ಇಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಯಿಂದ ಸುಮಾರು 6 ಸಾವಿರ ಕಾರ್ಯಕರ್ತರು ಭಾಗಿ: ಮಲ್ಲಿಕಾರ್ಜುನಪ್ಪ
ಮೈಸೂರು

ಇಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಯಿಂದ ಸುಮಾರು 6 ಸಾವಿರ ಕಾರ್ಯಕರ್ತರು ಭಾಗಿ: ಮಲ್ಲಿಕಾರ್ಜುನಪ್ಪ

April 9, 2019

ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ (ಏ.9) ಮಧ್ಯಾಹ್ನ 3 ಗಂಟೆಗೆ ಮೈಸೂರಿಗೆ ಆಗಮಿಸಿ ನಗರದ ಮಹಾ ರಾಜ ಕಾಲೇಜು ಮೈದಾನದಲ್ಲಿ ಆಯೋ ಜಿಸಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊ ಳ್ಳಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸುಮಾರು 6 ಸಾವಿರ ಕಾರ್ಯಕರ್ತರು ತೆರಳುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ತಿಳಿಸಿದರು. ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.18ರಂದು ನಡೆಯುವ ಲೋಕ ಸಭಾ ಚುನಾವಣೆ ಪ್ರಚಾರಕ್ಕಾಗಿ ನರೇಂದ್ರ ಮೋದಿ ಅವರು ನಾಳೆ(ಏ.9) ಮೈಸೂರಿಗೆ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ…

ಏ.13ರಂದು ಕೆ.ಆರ್.ನಗರದಲ್ಲಿ ರಾಹುಲ್ ಪ್ರಚಾರ
ಮೈಸೂರು

ಏ.13ರಂದು ಕೆ.ಆರ್.ನಗರದಲ್ಲಿ ರಾಹುಲ್ ಪ್ರಚಾರ

April 8, 2019

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಮತ ಯಾಚಿಸಲು ಏ.13ರಂದು ಸಂಜೆ 5ಕ್ಕೆ ಕೆ.ಆರ್.ನಗರದ ರೇಡಿಯೋ ಮೈದಾನದಲ್ಲಿ ಬೃಹತ್ ಸಮಾವೇಶ ದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೇರಿದಂತೆ ಎರಡೂ ಪಕ್ಷಗಳ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳಲಿದ್ದಾರೆಂದು ಸಚಿವ ಸಾ.ರಾ. ಮಹೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೆ.ಆರ್. ನಗರದ ರೇಡಿಯೋ ಮೈದಾನದಲ್ಲಿ ಏ.13ರಂದು ಸಂಜೆ 5ಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಜಂಟಿ ಕಾರ್ಯಕರ್ತರ…

ಚುನಾವಣೆ ನಂತರ ಮೈತ್ರಿ ಸರ್ಕಾರ ಪತನ
ಮೈಸೂರು

ಚುನಾವಣೆ ನಂತರ ಮೈತ್ರಿ ಸರ್ಕಾರ ಪತನ

April 8, 2019

ಮೈಸೂರು:ಲೋಕಸಭಾ ಚುನಾವಣೆ ನಂತರ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ. ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ನೂತನ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಅಧಿಕಾರದ ಆಸೆಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಇದೀಗ ಲೋಕಸಭಾ ಚುನಾ ವಣೆ ಎದುರಿಸಲು ಮುಂದಾಗಿದ್ದಾರೆ. ದೊಡ್ಡವರ ಮಟ್ಟದಲ್ಲಿ ಮಾಡಿಕೊಂಡಿ ರುವ ಮೈತ್ರಿಗೆ ಎರಡೂ ಪಕ್ಷದ ಕಾರ್ಯಕರ್ತರಲ್ಲಿ ಸಹಮತವಿಲ್ಲದ ಕಾರಣ ಈ ಚುನಾವಣೆಯಲ್ಲಿ ಅವರು ನೆಲಕಚ್ಚುವುದು ಗ್ಯಾರಂಟಿ ಎಂದು ವ್ಯಂಗ್ಯ ಮಾಡಿದರು….

1 29 30 31 32 33 194
Translate »