ತುಮಕೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಇಂದು ಮಧ್ಯಾಹ್ನ ಇಲ್ಲಿನ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಬೆಳಿಗ್ಗೆ ಹೊಳೆನರಸೀ ಪುರದ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಾಲಯ ಮತ್ತು ಮಾವಿನಕೆರೆ ಬೆಟ್ಟದ ಶ್ರೀ ರಂಗನಾಥಸ್ವಾಮಿ ದೇವಾ ಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ತುಮಕೂರಿಗೆ ಮಧ್ಯಾಹ್ನ ಆಗಮಿಸಿ ದರು. ಇಲ್ಲಿನ ಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವ ಸ್ಥಾನದಲ್ಲಿ ಪೂಜೆ ಸಲ್ಲಿಸಿ ಜೂನಿಯರ್ ಕಾಲೇಜು ಮೈದಾನದಿಂದ ಅಪಾರ…
ಪುತ್ರನ ಗೆಲುವಿಗಾಗಿ ಸಿಎಂ ಕುಮಾರಸ್ವಾಮಿ ದೇವಿಗೆ ವಿಶೇಷ ಪೂಜೆ
March 25, 2019ಮೈಸೂರು: ಚಾಮುಂಡಿಬೆಟ್ಟದಲ್ಲಿ ಇಂದು ರಾಜಕೀಯ ಮುಖಂಡರು, ಅದರಲ್ಲೂ ಚುನಾವಣಾ ಅಭ್ಯರ್ಥಿಗಳದ್ದೇ ಸದ್ದು. ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಮತ್ತವರ ಕುಟುಂಬ, ಬಿಜೆಪಿ ಅಭ್ಯರ್ಥಿ, ಸಂಸದ ಪ್ರತಾಪಸಿಂಹ, ಮೈತ್ರಿ ಪಕ್ಷದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ಅವರು ಸೋಮವಾರ ನಾಮಪತ್ರ ಸಲ್ಲಿಕೆಗೂ ಮುನ್ನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದು, ಗೆಲುವಿಗೆ ಪ್ರಾರ್ಥಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ತಮ್ಮ ಪುತ್ರ ನಿಖಿಲ್, ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,…
ಅಂಬರೀಶ್ ಹೆಸರೊಂದೇ ಅವರ ಬಂಡವಾಳ
March 25, 2019ಮೈಸೂರು: ತಾವು ಎಂದಿಗೂ ಅಂಬರೀಶ್ ಹೆಸರು ದುರುಪಯೋಗ ಮಾಡಿಕೊಂಡಿಲ್ಲ. ಅಂಬರೀಶ್ ಹೆಸರನ್ನು ಚುನಾವಣೆಯಲ್ಲಿ ಬಳಸಿಕೊಳ್ಳುತ್ತಿರುವವರು ಅವರು. ಅವ ರಿಗೆ ಅಂಬರೀಶ್ ಹೆಸರೊಂದೇ ಅವರ ಬಂಡವಾಳ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಪ್ರತಿಸ್ಪರ್ಧಿ, ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಹೆಸರೇ ಳದೇ ಆರೋಪಿಸಿದರು. ಮಂಡ್ಯ ಮೈತ್ರಿ ಅಭ್ಯರ್ಥಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿ ಕೆಗೂ ಮುನ್ನ ಚಾಮುಂಡಿಬೆಟ್ಟದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಮಂಡ್ಯದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ…
ಕೋಮುವಾದಿಗಳನ್ನು ದೂರವಿಡಲು ದೇಶದಲ್ಲಿ ಜಾತ್ಯಾತೀತ ಶಕ್ತಿಗಳು ಒಂದಾಗಿವೆ
March 25, 2019ಮೈಸೂರು: ಕೋಮುವಾದಿಗಳನ್ನು ದೂರ ವಿಡಲು ದೇಶದಲ್ಲಿ ಜಾತ್ಯಾತೀತ ಶಕ್ತಿಗಳು ಒಂದಾಗಿವೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಇಂದಿಲ್ಲಿ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ಹಾಗೂ ಕೋಮುವಾದಿಗಳ ಪರವಾಗಿರುವ ಬಿಜೆಪಿಯನ್ನು ದೂರವಿಡುವ ಸಲುವಾಗಿ ದೇಶದಲ್ಲಿ ಜಾತ್ಯಾತೀತ ಶಕ್ತಿಗಳು ಈ ಚುನಾವಣೆಯಲ್ಲಿ ಒಂದಾಗಿವೆ ಎಂದರು. ರಾಜ್ಯದಲ್ಲಿ ಶೇಕಡ 48 ರಷ್ಟು ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿದ್ದರೂ ಬಿಜೆಪಿ ಚುನಾವಣೆಯಲ್ಲಿ ಒಂದೇ ಅಭ್ಯರ್ಥಿ ಪ್ರಾತಿನಿಧ್ಯ ನೀಡಿರುವುದೇ ಅದಕ್ಕೆ…
ನಾಗರಹೊಳೆ ಅಭಯಾರಣ್ಯದಲ್ಲಿ ಹೆಣ್ಣು ಹುಲಿ ಕಳೇಬರ ಪತ್ತೆ
March 25, 2019ಮೈಸೂರು: ನಾಗರಹೊಳೆ ಅಭಯಾರಣ್ಯದಲ್ಲಿ ಹೆಣ್ಣು ಹುಲಿ ಕಳೇಬರ ಪತ್ತೆಯಾಗಿದೆ. ನಾಗರ ಹೊಳೆ ಕುಂತೂರು ಬೀಟ್‍ನಲ್ಲಿ ಸುಮಾರು 9 ವರ್ಷದ ಹೆಣ್ಣು ಹುಲಿ ದೇಹವಿರುವ ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡು ಇದು ಸತ್ತಿರಬಹುದು ಎಂದು ಶಂಕಿಸಲಾಗಿದೆ. ಇದರ ಕತ್ತಿನ ಮೂಳೆ ಮುರಿದಿದೆ. ತಲೆ ಬುರುಡೆ ಬಿರುಕು ಬಿಟ್ಟಿದ್ದು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ. ಮರ ಣೋತ್ತರ ಪರೀಕ್ಷೆ ಬಳಿಕ ಅಂತ್ಯ ಸಂಸ್ಕಾರ ನಡೆಸಲಾಯಿತು. ಹುಲಿ ಸಂತತಿ ಹೆಚ್ಚಳ: ನಾಗರಹೊಳೆ…
ಆಟ್ರ್ಜ್ ಗ್ಯಾಲರಿಯಲ್ಲಿ ವೈವಿಧ್ಯತೆಯಿಂದ ಕೂಡಿದ ಕಲಾಕೃತಿಗಳ ಪ್ರದರ್ಶನಕ್ಕೆ ಚಾಲನೆ
March 25, 2019ಮೈಸೂರು: ಮೈಸೂರಿನ ಗೋಕುಲಂ 3ನೇ ಹಂತದಲ್ಲಿ ರುವ ಆಟ್ರ್ಜ್ ಗ್ಯಾಲರಿಯಲ್ಲಿ ವೈವಿಧ್ಯ ಮಯ ಕಲಾಕೃತಿಗಳ ಅನಾವರಣವಾಗಿದೆ. ಕಲಾವಿದರು ಹಾಗೂ ಕಲಾಸಕ್ತರನ್ನು ಒಗ್ಗೂಡಿಸುವುದರೊಂದಿಗೆ ಕಲೆಯನ್ನು ಪೋಷಿಸುವ ಮಹತ್ವದ ಉದ್ದೇಶದಿಂದ ಏರ್ಪಡಿಸಲಾಗಿರುವ `ಮಾರ್ಚ್ ಕಲಾ ಪ್ರದರ್ಶನ’ದಲ್ಲಿ ವಿವಿಧ ಸೃಜನಾತ್ಮಕ ಕಲಾವಿದರ ಮನಮೋಹಕ ಚಿತ್ರಕತೆ, ಕಲಾಕೃತಿಗಳನ್ನು ಪ್ರದರ್ಶಿಸಲಾಗಿದೆ. ಇಂದಿನಿಂದ ಏ.13ರವರೆಗೆ ಬೆಳಿಗ್ಗೆ 11ರಿಂದ ಸಂಜೆ 7ರವರೆಗೆ ಕಲಾ ಸೊಬ ಗನ್ನು ಕಣ್ತುಂಬಿಕೊಳ್ಳಬಹುದಾಗಿದ್ದು, ಉಚಿತ ಪ್ರವೇಶ ಕಲ್ಪಿಸಲಾಗಿದೆ. ಕಲಾವಿದರ ಮನದಾಳ: ಕಣ್ಣಿಗೆ ಕಂಡದ್ದು, ಎಲ್ಲೋ ಕೇಳಿದ್ದು, ಮನದಲ್ಲಿ ಮೂಡಿ ದ್ದನ್ನು ಸಾಹಿತಿಗಳು ಅಕ್ಷರದಲ್ಲಿ…
ಮೈಸೂರು ವಿವಿಯಲ್ಲಿ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ದಿನಾಚರಣೆ
March 25, 2019ಮೈಸೂರು: ಮೈಸೂರು ವಿವಿಯಲ್ಲಿ ಶಿಕ್ಷಣ ಪಡೆದ ವಿದೇಶಿ ವಿದ್ಯಾರ್ಥಿಗಳು ತಮ್ಮ ದೇಶಗಳಿಗೆ ಮರಳಿದ ಬಳಿಕ ಮಾದರಿ ವ್ಯಕ್ತಿಗಳಾಗಿ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್‍ಕುಮಾರ್ ಅಭಿವ್ಯಕ್ತಪಡಿಸಿದರು. ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಮೈಸೂರು ವಿವಿ ಅಂತರ ರಾಷ್ಟ್ರೀಯ ಕೇಂದ್ರ ಮತ್ತು ಅಂತರ ರಾಷ್ಟ್ರೀಯ ವಿದ್ಯಾರ್ಥಿಗಳ ಸಂಘದ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ವಿದ್ಯಾರ್ಥಿಗಳ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾ ಡಿದ ಅವರು, ಮೈಸೂರು ವಿವಿಯಲ್ಲಿ 58ಕ್ಕೂ ಹೆಚ್ಚು ದೇಶಗಳ 700 ವಿದ್ಯಾರ್ಥಿ ಗಳು ವಿವಿಧ ವಿಷಯಗಳಲ್ಲಿ…
ಜಾಗತಿಕ ವಿದ್ಯಮಾನಗಳನ್ನಾಧರಿಸಿ ಭಾರತ ತನ್ನ ಪ್ರಭಾವ ವೃದ್ಧಿಸಿಕೊಳ್ಳಬೇಕಿದೆ
March 25, 2019ಮೈಸೂರು: ಪ್ರಸ್ತುತ ಜಾಗತಿಕ ವಿದ್ಯಮಾನಗಳನ್ನು ಅವಲೋ ಕಿಸಿ ವಿಶ್ವ ಮಟ್ಟದಲ್ಲಿ ಭಾರತ ತನ್ನ ಪ್ರಭಾವ ವೃದ್ಧಿಸಿಕೊಳ್ಳಲು ಒತ್ತು ನೀಡಬೇಕಿದೆ ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾನಿಲಯದ (ಜೆಎನ್‍ಯು) ಪಶ್ಚಿಮ ಏಷ್ಯಾ ಅಧ್ಯಯನ ಕೇಂದ್ರದ ಮಾಜಿ ಅಧ್ಯಕ್ಷ ಪ್ರೊ. ಎ.ಕೆ.ಪಾಷ ಅಭಿಪ್ರಾಯಪಟ್ಟರು. ಮೈಸೂರಿನ ಮಹಾರಾಜ ಕಾಲೇಜಿನ ಸ್ನಾತಕೋತ್ತರ ಪದವಿಯ ಅಂತಾರಾಷ್ಟ್ರೀಯ ಸಂಬಂಧಗಳು ವಿಭಾಗ, ವಿದ್ಯಾವರ್ಧಕ ಕಾನೂನು ಕಾಲೇಜು, ಆಡಳಿತ ತರಬೇತಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ `ಭಾರತೀಯ ವಿದೇಶಾಂಗ ನೀತಿ: 21ನೇ ಶತ ಮಾನದಲ್ಲಿ…
ಪ್ರಬಂಧ ಮಂಡನೆ, ಸಂವಾದ
March 25, 2019ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಭಾಷಾ ಪ್ರಯೋಗಾಲಯದಲ್ಲಿ ಸೋಮವಾರ ನಡೆದ ಪ್ರಬಂಧ ಮಂಡನೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಎರಡು ವಿಷಯಗಳನ್ನು ಕುರಿತಂತೆ ಸಂಶೋಧನಾ ವಿದ್ಯಾರ್ಥಿಗಳು ಪ್ರಬಂಧ ಮಂಡಿಸಿದರು. `ಕಟ್ಟುತ್ತೇವ ನಾವು ಕಟ್ಟುತೇವ’ ಕವಿತೆ ಕುರಿತು ಪ್ರಬಂಧ ಮಂಡಿಸಿದ ಸಂಸ್ಥೆಯ ಸಂಶೋಧನಾ ವಿದ್ಯಾರ್ಥಿ ಟಿ.ಎನ್.ಪುಟ್ಟರಾಜು, ಬಾಬರಿ ಮಸೀದಿ ಧ್ವಂಸಗೊಳಿಸಿದ ಘಟನೆ ವೇಳೆ ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ನಡುವೆ ಸಂಘರ್ಷ ಉಂಟಾಗಿತ್ತು. ಆಗ ಒಡೆದ ಮನಸ್ಸುಗಳನ್ನು ಕಟ್ಟುವ ಆಶಯದೊಂದಿಗೆ ಸತೀಶ್ ಕುಲಕರ್ಣಿ ಅವರಿಂದ `ಕಟ್ಟುತ್ತೇವ…
ಲೋಕಸಭಾ ಚುನಾವಣಾ ಕರ್ತವ್ಯದಿಂದ ನುಣುಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ
March 25, 2019ಮೈಸೂರು: ಸಾರ್ವತ್ರಿಕ ಚುನಾವಣೆಯ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಯತ್ನಿಸುವ ಸಿಬ್ಬಂದಿಗಳಿಗೆ ಬಿಸಿ ಮುಟ್ಟಿಸಲು ಚುನಾವಣಾ ಆಯೋಗ ಮುಂದಾಗಿದ್ದು, ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳ ಮಾಹಿತಿ ಪಡೆದು ಟ್ರೈಸ್ ಸಾಫ್ಟ್‍ವೇರ್‍ನಲ್ಲಿ ಸಂಗ್ರಹಿಸಿಟ್ಟಿದೆ. ಆ ಮೂಲಕ ಸುಳ್ಳು ನೆಪ ಹೇಳಿ ಕರ್ತವ್ಯದಿಂದ ಮುಕ್ತಿ ಪಡೆಯಲು ಬರುವವರಿಗೆ ಬಿಸಿ ಮುಟ್ಟಿಸಲು ಸಜ್ಜಾಗಿದೆ. ವಿಧಾನಸಭಾ, ಲೋಕಸಭಾ ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋ ಜನೆಗೊಂಡ ಸಿಬ್ಬಂದಿಗಳಲ್ಲಿ ಹಲವರು ವಿವಿಧ ಕಾರಣ ನೀಡಿ ಕರ್ತವ್ಯದಿಂದ ಮುಕ್ತಿ ನೀಡುವಂತೆ ದುಂಬಾಲು ಬೀಳುತ್ತಿದ್ದದ್ದು ಸಾಮಾನ್ಯವಾಗಿತ್ತು. ಮತ…