ಮೈಸೂರು, ಫೆ. 15(ಆರ್‍ಕೆ)- 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಎನ್.ಆರ್. ಸಂಚಾರ ಠಾಣೆ ಪೊಲೀಸರು ಭಾನುವಾರ ಮೈಸೂರಿನಲ್ಲಿ ಬೈಕ್ ರ್ಯಾಲಿ ಮೂಲಕ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದರು. ಮೈಸೂರಿನ ಸೆಂಟ್ ಫಿಲೋಮಿನಾ ಚರ್ಚ್ ಆವರಣದಲ್ಲಿ ಆರಂಭವಾದ ಬೈಕ್ ರ್ಯಾಲಿಗೆ ಸಂಚಾರ ವಿಭಾಗದ ಎಸಿಪಿ ಸಂದೇಶ್‍ಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಮೈಸೂರು ಬೈಕ್ ರೈಡರ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ನಡೆದ ರ್ಯಾಲಿಯು, ಅಶೋಕ ರಸ್ತೆ, ನೆಹರು ಸರ್ಕಲ್, ಇರ್ವಿನ್ ರಸ್ತೆ,…