ಮೈಸೂರು: ದೊಡ್ಡಕೆರೆ ಮೈದಾನದ ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆರಂಭ ವಾಗಿರುವ ದಸರಾ ನಾಡಕುಸ್ತಿ ಪಂದ್ಯಾವಳಿಗೆ ಬುಧವಾರ ಚಾಲನೆ ನೀಡಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಹಾಗೂ ಕರ್ನಾಟಕ ರೆಸ್ಲಿಂಗ್ ಅಸೋಸಿಯೇಷನ್ ಸಹಯೋಗದೊಂದಿಗೆ ಅ.10ರಿಂದ 15ರವರೆಗೆ ನಡೆಯುವ ದಸರಾ ನಾಡಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪೈಲ್ವಾನರನ್ನು ಅಖಾಡಕ್ಕೆ ಬಿಡುವ ಮೂಲಕ ಕುಸ್ತಿಗೆ ಚಾಲನೆ ನೀಡಿದರು. ನಂತರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ,…
ಮೈಸೂರು
ದಸರಾ ಕುಸ್ತಿ ಪಂದ್ಯಾವಳಿ: ಕುಸ್ತಿ ಕಟ್ಟುವ ಕಾರ್ಯಕ್ಕೆ ಚಾಲನೆ
October 1, 2018ಮೈಸೂರು: ನಶಿಸಿ ಹೋಗುತ್ತಿರುವ ಕುಸ್ತಿ, ಕಬಡ್ಡಿ, ಖೋಖೋ ಸೇರಿದಂತೆ ಗ್ರಾಮೀಣ ಕ್ರೀಡೆಗಳಲ್ಲಿ ಯುವ ಜನತೆ ತೊಡಗಿಸಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಇವುಗಳ ರಕ್ಷಣೆಗೆ ಯುವ ಸಮುದಾಯ ಪಣ ತೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಅವರು ಸಲಹೆ ನೀಡಿದ್ದಾರೆ. ಮೈಸೂರಿನ ದಸರಾ ವಸ್ತು ಪ್ರದರ್ಶ ನದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂದಿರದಲ್ಲಿ ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಹಾಗೂ ಕರ್ನಾಟಕ ರೆಸ್ಲಿಂಗ್ ಅಸೋಸಿ ಯೇಷನ್ ವತಿಯಿಂದ ಆಯೋಜಿಸ ಲಾಗಿದ್ದ…