ಬೆಂಗಳೂರು: ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರನ್ನಾಗಿ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರನ್ನು ನೇಮಕ ಮಾಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಮಂಡಳಿಯಲ್ಲಿ ನಾರಾಯಣಮೂರ್ತಿ ಅವರು ಹೆಸರಿಸುವ ತಜ್ಞರೇ ಇರಲಿದ್ದಾರೆ. ಇದುವರೆಗೂ ಮಂಡಳಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತಿತ್ತು. ಇನ್ನು ಮುಂದೆ ಮಂಡಳಿಗೆ ಸಂಪುಟ ದರ್ಜೆ ಸ್ಥಾನ ನೀಡಿ, ವಿಧಾನಸೌಧ ಅಥವಾ ವಿಕಾಸಸೌಧದಲ್ಲಿ ಕೊಠಡಿ ನೀಡಲಾಗುವುದು. ನಿರುದ್ಯೋಗ ಸಮಸ್ಯೆ ಬಗೆಹರಿಸಲು ರಾಜ್ಯದಲ್ಲಿ ಉದ್ಯಮಗಳ ಸ್ಥಾಪನೆ ಮತ್ತು ಸಂಪನ್ಮೂಲ ಕ್ರೋಢೀಕರಣ, ಹೊಸ ಯೋಜನೆಗಳ ಅನುಷ್ಠಾನದ ಉದ್ದೇಶ ದಿಂದ ಇದೇ ಮೊದಲ…