ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಬಗ್ಗೆ ವ್ಯಾಪಕ ಚರ್ಚೆ ರಸ್ತೆ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ತಾಕೀತು ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡ ಸಂಸದ ಧ್ರುವನಾರಾಯಣ ಚಾಮರಾಜನಗರ: ಚಾಮರಾಜನಗರದಿಂದ ಸಂತೇಮರಹಳ್ಳಿ ವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಈ ಮಾರ್ಗದಲ್ಲಿ ಸೃಷ್ಟಿಯಾ ಗಿದ್ದ ಹಳ್ಳಕ್ಕೆ ಬಿದ್ದು ಇಬ್ಬರು ಪ್ರಾಣ ಕಳೆದು ಕೊಂಡಿದ್ದಾರೆ. ಇದಕ್ಕೆ ಹೊಣೆ ಯಾರು? ಮನುಷ್ಯನ ಪ್ರಾಣಕ್ಕೆ ಬೆಲೆ ಇಲ್ಲವೇ? ಎಂದು ಸಂಸದ ಆರ್.ಧ್ರುವನಾರಾಯಣ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು….