ಹಾಸನ: ‘ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆ ನಿಷೇಧಿಸಲಾಗಿದ್ದು, ಇದನ್ನು ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಾಲೂಕು ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ನಗರದ ಹೊಸ ಬಸ್ ನಿಲ್ದಾಣದ ವಿವಿಧ ಟೀ ಸ್ಟಾಲ್‍ಗಳು, ಹೋಟೆಲ್‍ಗಳು, ಪ್ರಾವಿಜನ್ ಸ್ಟೋರ್ ಹಾಗೂ ಬೀದಿ ಬದಿ ವ್ಯಾಪಾರಿ ಅಂಗಡಿಗಳಿಗೆ ತಂಬಾಕು ನಿಯಂತ್ರಣ ಕೋಶದ ವತಿಯಿಂದ ದಾಳಿ ನಡೆಸಿ 1,180 ರೂ. ದಂಡ ವಸೂಲಿ ಮಾಡಿದ್ದಾರೆ. ಧೂಮಪಾನ, ಗುಟ್ಕಗಳಂತಹ ದುರಭ್ಯಾಸಗಳಿಗೆ ಬಲಿಯಾದರೆ ಗಂಟಲು ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ…