ಮೈಸೂರು: ಆರ್‍ಬಿಐ ಸೇರಿದಂತೆ ಬ್ಯಾಂಕಿಂಗ್ ವ್ಯವಸ್ಥೆ ಸುಧಾರಣೆ ಮತ್ತು ಜಿಎಸ್‍ಟಿ ಸಾಧಕ-ಬಾಧಕಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಮಂಗಳವಾರ ಮೈಸೂರಿಗೆ ಆಗಮಿಸಿರುವ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ನೇತೃತ್ವದ ಕೇಂದ್ರ ಆರ್ಥಿಕ ಸ್ಥಾಯಿ ಸಮಿತಿ ಸದಸ್ಯರು 2ನೇ ದಿನವಾದ ಇಂದೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಸಭೆ ನಡೆಸಿದ ಮೊಯ್ಲಿ ಅವರು, ನಂತರ ಮಧ್ಯಾಹ್ನ ಮೈಸೂರು ಅರಮನೆಗೆ ಭೇಟಿ ನೀಡಿದ್ದರು. ಸಂಜೆ ಕೆಆರ್‍ಎಸ್‍ಗೆ ಸಮಿತಿಯ ಸದಸ್ಯರನ್ನು ಕರೆದೊಯ್ದು ರಾತ್ರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದು,…