ಮೈಸೂರು: ಸಮಯಕ್ಕೆ ಸರಿಯಾಗಿ ವೇತನ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸದೇ ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಆರ್‍ಎಸ್ ರಸ್ತೆಯ ಪಿಕೆಟಿಬಿ ಆಸ್ಪತ್ರೆಯ ಗುತ್ತಿಗೆ ಸ್ವಚ್ಛತಾ ಕೆಲಸಗಾರರು ಹಾಗೂ ಭದ್ರತಾ ಸಿಬ್ಬಂದಿ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಕರ್ನಾಟಕ ರಾಜ್ಯ ಜಿಲ್ಲಾ ಆಸ್ಪತ್ರೆಗಳ ಗುತ್ತಿಗೆ ಪೌರಕಾರ್ಮಿಕರು ಹಾಗೂ ನೌಕರರ ಸಂಘದ ಆಶ್ರಯದಲ್ಲಿ ಗುರುವಾರ ದಿಢೀರ್ ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆ ಕೆಲಸ ಸ್ಥಗಿತಗೊಳಿಸಿ ಆಸ್ಪತ್ರೆಯ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸಮಯಕ್ಕೆ ಸರಿಯಾಗಿ ವೇತನ ನೀಡಲು ಗುತ್ತಿಗೆದಾರರು…
ಮೈಸೂರು
ಭರವಸೆ ಮೇರೆಗೆ ಪ್ರತಿಭಟನೆ ಕೈಬಿಟ್ಟರು
April 27, 2018ಮೈಸೂರು: ಬೆಳಿಗ್ಗೆ ಸುಮಾರು 9ಕ್ಕೆ ಕೆಲಸ ಸ್ಥಗಿತಗೊಳಿಸಿ ಆಸ್ಪತ್ರೆಯ ಮುಖ್ಯದ್ವಾರದಲ್ಲಿ ಪ್ರತಿಭಟನೆ ಕುಳಿತ ಪೌರಕಾರ್ಮಿಕರಿಗೆ ಗುತ್ತಿಗೆ ಆಧಾರದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ 10ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ತಮ್ಮ ಬೆಂಬಲ ಸೂಚಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸುಮಾರು 11.20ರ ವೇಳೆಗೆ ಪ್ರತಿಭಟನಾನಿರತರ ಬಳಿ ಬಂದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ವಿರೂಪಾಕ್ಷ, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ಆದರೂ ಪಟ್ಟು ಬಿಡದೆ ತಮ್ಮ ಪ್ರತಿಭಟನೆ ಮುಂದುವರೆಸಿದರು. ಈ ವೇಳೆ ಪೌರಕಾರ್ಮಿಕರ ಬೇಡಿಕೆಗಳನ್ನು ಆಲಿಸಿದ ಡಾ.ವಿರೂಪಾಕ್ಷ, ಗುತ್ತಿಗೆದಾರರನ್ನು ದೂರವಾಣ ಮೂಲಕ…