ನಿರ್ಗಮನ ಪಥಸಂಚಲನದಲ್ಲಿ ವಂದನೆ ಸ್ವೀಕರಿಸಿ ಐಜಿಪಿ ಶರತ್‍ಚಂದ್ರ ಅಭಿಮತ ಮೈಸೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಶಿಸ್ತು ಪಾಲಿಸದಿದ್ದರೆ ಇಡೀ ಪೊಲೀಸ್ ವ್ಯವಸ್ಥೆಯೇ ವಿಫಲವಾಗುತ್ತದೆ ಎಂದು ದಕ್ಷಿಣ ವಲಯ ಐಜಿಪಿ ಕೆ.ವಿ.ಶರತ್‍ಚಂದ್ರ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಲಲಿತ್‍ಮಹಲ್ ರಸ್ತೆಯಲ್ಲಿರುವ ಕೆಎಸ್‍ಆರ್‍ಪಿ 5ನೇ ಪಡೆ ಕವಾಯತು ಮೈದಾನದಲ್ಲಿ ಇಂದು ಆಯೋಜಿಸಿದ್ದ ಸಿಎಆರ್ ಪೊಲೀಸ್ ತರಬೇತಿ ಶಾಲೆಯ 7ನೇ ತಂಡದ ಸಶಸ್ತ್ರ ಮೀಸಲು ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ವಂದನೆ ಸ್ವೀಕರಿಸಿ ಮಾತನಾಡಿದರು. ಶಿಸ್ತಿಗೆ ಹೆಸರಾಗಿರುವ…