ಮೈಸೂರು: ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ನಗರ ಪಾಲಿಕೆಯು ಮೈಸೂರು ನಗರದಾದ್ಯಂತ ಎಲ್ಲಾ ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿ ಆರಂಭವಾಗಿದೆ. ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯಕ್ಕೆ ಪಾಲಿಕೆಯ ಎಲ್ಲಾ 9 ವಲಯ ಕಚೇರಿ ಸರಹದ್ದಿನಲ್ಲಿ ಕಳೆದ ಒಂದು ವಾರದಿಂದ ಕಾಮಗಾರಿ ಭರದಿಂದ ಸಾಗಿದ್ದು, ಇನ್ನೊಂದು ವಾರದಲ್ಲಿ ಕೆಲಸ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ವಲಯ 1ರಲ್ಲಿ ವಲಯಾಧಿಕಾರಿ ಸುನೀಲ್ಬಾಬು, 2ರಲ್ಲಿ ಜವರೇಗೌಡ, 3ರಲ್ಲಿ ಶಿವಾನಂದ್ಮೂರ್ತಿ, 4ನೇ ವಲಯದಲ್ಲಿ ಪ್ರಿಯದರ್ಶಿನಿ ಮತ್ತು 6ರಲ್ಲಿ…