ಮೈಸೂರು: ಖಾಯಂ ಮಾಡಬೇಕು. ಬೆಳಗಿನ ಉಪಾಹಾರಕ್ಕೆ ಹಣ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮೂರು ದಿನದಿಂದ ಮೈಸೂರು ಮಹಾನಗರಪಾಲಿಕೆ ಎದುರು ಅನಿರ್ದಿಷ್ಟಾವಧಿಯ ಮುಷ್ಕರ ನಡೆಸುತ್ತಿರುವ ಪೌರ ಕಾರ್ಮಿಕರ ಮನವೊಲಿಸುವ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಪ್ರವಾಸೋದ್ಯಮ ಸಚಿವರ ಯತ್ನ ವಿಫಲವಾಯಿತು. ಹೀಗಾಗಿ ತಮ್ಮ ಬೇಡಿಕೆ ಈಡೇರದ ಹೊರತು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ಮುಷ್ಕರ ನಿರತರು ಪ್ರತಿಭಟನೆ ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು ಕೈಗೊಂಡಿರುವ ತೀರ್ಮಾನವನ್ನು ಜಾರಿಗೊಳಿಸುವ ಜತೆಗೆ ಇಂದಿರಾ ಕ್ಯಾಂಟೀನ್…
ಪೌರ ಕಾರ್ಮಿಕರ ಧರಣಿ ಸ್ಥಳಕ್ಕೆ ಶಾಸಕ ರಾಮದಾಸ್ ಭೇಟಿ
October 6, 2018ಮೈಸೂರು: ಮುಷ್ಕರ ನಿರತ ಪೌರಕಾರ್ಮಿಕರನ್ನು ಶುಕ್ರವಾರ ಭೇಟಿ ಮಾಡಿದ ಕೃಷ್ಣ ರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿಕೊಂಡರು. ನಿಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳ ಬಗ್ಗೆ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತಿಳಿಸಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನೂ ಭೇಟಿ ಮಾಡಿ ಅವರ ಗಮನಕ್ಕೂ ತಂದಿದ್ದೇನೆ. ಪೌರ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಗಮನಹರಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಲ್ಲೂ ಮನವಿ ಮಾಡಿದ್ದೇವೆ ಎಂದು ರಾಮದಾಸ್, ಪ್ರತಿ ಭಟನಾನಿರತ ಕಾರ್ಮಿಕರಿಗೆ ತಿಳಿಸಿದರು. ನಿಮ್ಮ ಸಮಸ್ಯೆಗಳು,…
ಮೈಸೂರಲ್ಲಿ ಪೌರಕಾರ್ಮಿಕರ ಮುಷ್ಕರ ಮುಂದುವರಿಕೆ
October 5, 2018ಮೈಸೂರು: ಮೈಸೂರು ಮಹಾ ನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕೆಂಬ ಪ್ರಮುಖ ಬೇಡಿಕೆಯೊಂದಿಗೆ ಇನ್ನಿತರ ಸೌಲಭ್ಯಕ್ಕಾಗಿ ಪಾಲಿಕೆಯ ಖಾಯಂ ಹಾಗೂ ಗುತ್ತಿಗೆ ಪೌರಕಾರ್ಮಿಕರು ಒಕ್ಕೊರಲಿನಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋ ರಾತ್ರಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರ ಸಭೆಗಳ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ ನೇತೃತ್ವದಲ್ಲಿ ಬುಧವಾರ ನಗರದಾದ್ಯಂತ ಕೆಲಸ ಸ್ಥಗಿತಗೊಳಿಸಿ, ಮಹಾನಗರ ಪಾಲಿಕೆಯ ಮುಖ್ಯದ್ವಾರದ ಬಳಿ ಪಾಲಿಕೆ ಪೌರಕಾರ್ಮಿಕರು ಪ್ರತಿಭಟನೆ ಆರಂಭಿಸಿದ್ದರು. ಬೇಡಿಕೆಗಳು ಈಡೇರುವವರೆಗೂ ಸ್ಥಳದಿಂದ ಕದಲುವುದಿಲ್ಲ…
ಪೌರ ಕಾರ್ಮಿಕರಿಗೆ ಇಂದಿನಿಂದ ಇಂದಿರಾ ಕ್ಯಾಂಟೀನ್ ಊಟ
October 4, 2018ಮೈಸೂರು: ಪೌರ ಕಾರ್ಮಿಕರ ಬಹುದಿನದ ಬೇಡಿಕೆಯೊಂದನ್ನು ಸರ್ಕಾರ ಗುರುವಾರ(ಅ.4) ಈಡೇರಿಸುತ್ತಿದ್ದು, ಹಸಿವಿನಿಂದ ಕಂಗೆಡುತ್ತಿದ್ದ ಪೌರಕಾರ್ಮಿಕರಿಗೆ ಮೈಸೂರಿನಲ್ಲಿ ಇಂದಿರಾ ಕ್ಯಾಂಟೀನ್ ಮೂಲಕ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದೆ. ಮುಂಜಾನೆಯಿಂದಲೇ ಪೊರಕೆ ಹಿಡಿದು ರಸ್ತೆಗಿಳಿಯುತ್ತಿದ್ದ ಪೌರ ಕಾರ್ಮಿಕರು ಊಟ ವಿಲ್ಲದೆ ಮಧ್ಯಾಹ್ನ 4 ಗಂಟೆಗೆ ತಮ್ಮ ಮನೆ ಸೇರುತ್ತಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ನೀಡ ಲಾಗುವ ಬಿಸಿಯೂಟದ ಯೋಜನೆಯಂತೆ ಪೌರ ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡುವಂತೆ ಪೌರ ಕಾರ್ಮಿಕ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದವು. ಪೌರ…
ಮೈಸೂರಲ್ಲಿ ಸಾವಿರಾರು ಪೌರ ಕಾರ್ಮಿಕರ ಭಾರೀ ಮೆರವಣಿಗೆ
September 20, 2018ಮೈಸೂರು: ಗುತ್ತಿಗೆ ಪದ್ಧತಿ ರದ್ದುಗೊಳಿಸಿ, ಸ್ಥಳೀಯ ಸಂಸ್ಥೆಯಿಂದ ನೇರವಾಗಿ ತಮಗೆ ವೇತನ ಪಾವತಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾಲಿಕೆ ಪೌರಕಾರ್ಮಿಕರು ಇಂದು ಮೈಸೂರಿನಲ್ಲಿ ಭಾರೀ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರ ಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘದ ರಾಜ್ಯಾಧ್ಯಕ್ಷರಾದ ಮಾಜಿ ಮೇಯರ್ ನಾರಾಯಣ ನೇತೃತ್ವದಲ್ಲಿ ನಡೆದ ಪ್ರತಿ ಭಟನೆಯಲ್ಲಿ 1500ಕ್ಕೂ ಹೆಚ್ಚು ಪೌರ ಕಾರ್ಮಿಕರು ಪಾಲ್ಗೊಂಡಿದ್ದರು. ಪುರಭವನದಿಂದ ಆರಂಭವಾದ ಮೆರವಣಿಗೆಯು ಗಾಂಧಿಚೌಕ, ಮಕ್ಕಾಜಿ ಚೌಕ, ಕೆ.ಆರ್. ಸರ್ಕಲ್, ದೇವರಾಜ…
ಪೌರಕಾರ್ಮಿಕರ ಗುತ್ತಿಗೆ ಪದ್ಧತಿ ರದ್ದಿಗೆ ಆಗ್ರಹಿಸಿ ನಾಳೆ ಮೈಸೂರಲ್ಲಿ ಪ್ರತಿಭಟನೆ
September 18, 2018ಬೇಡಿಕೆ ಈಡೇರದಿದ್ದರೆ ದಸರಾ ಉತ್ಸವ ಬಹಿಷ್ಕಾರ ನಿರ್ಧಾರ: ನಾರಾಯಣ ಮೈಸೂರು: ಮೈಸೂರು ಮಹಾನಗರ ಪಾಲಿಕೆಯು ಸರ್ಕಾರದ ಆದೇಶದಂತೆ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಸೆ.19ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೇಡಿಕೆ ಈಡೇರಿಸದಿದ್ದರೆ, ಕೆಲಸ ಸ್ಥಗಿತಗೊಳಿಸಿ ದಸರಾ ಮಹೋತ್ಸವ ಬಹಿಷ್ಕರಿಸುವ ಅನಿವಾರ್ಯ ಎದು ರಾಗಲಿದೆ ಎಂದು ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ ಎಚ್ಚರಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2017ರ ಜು.12ರಂದು ಸ್ಥಳೀಯ…
ಮುಂದುವರಿದ ಮೈಸೂರು ವಿವಿ ಮಹಿಳಾ ಪೌರ ಕಾರ್ಮಿಕರ ಅಹೋರಾತ್ರಿ ಧರಣಿ
September 8, 2018ಮೈಸೂರು: ಮೈಸೂರು ವಿವಿ ಮಹಿಳಾ ಪೌರ ಕಾರ್ಮಿಕರು ತಮ್ಮ ಅನಿರ್ಧಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ಇಂದು 4ನೇ ದಿನಕ್ಕೆ ಕಾಲಿಟ್ಟಿತು. ಕನಿಷ್ಠ ಕೂಲಿ, ಇಪಿಎಫ್ ಹಾಗೂ ಆರೋಗ್ಯ ವಿಮಾ ಸೌಲಭ್ಯಗಳನ್ನು ಕಲ್ಪಿಸು ವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಿಶ್ವವಿದ್ಯಾನಿಲಯಗಳ ಸ್ವಚ್ಛತಾ ಕಾರ್ಯ ನೌಕರರ ಸಂಘದ (ರಾಜ್ಯ ಸಮಿತಿ) ಆಶ್ರಯದಲ್ಲಿ ಮೈಸೂರು ವಿಶ್ವವಿದ್ಯಾ ನಿಲಯದ ಮಹಿಳಾ ಪೌರ ಕಾರ್ಮಿಕರು ಮೈಸೂರು ಮಾನಸಗಂಗೋತ್ರಿಯ ಕುವೆಂಪು ಪ್ರತಿಮೆ ಬಳಿಯ ಮುಖ್ಯ ದ್ವಾರ ದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿ…
ಮೈಸೂರು ವಿವಿ ಸ್ವಚ್ಛತಾಗಾರರ ಅಹೋರಾತ್ರಿ ಧರಣಿ ಮುಂದುವರಿಕೆ
September 7, 2018ಮೈಸೂರು: 14 ವರ್ಷಗಳಿಂದ ಕಸ ಗುಡಿಸಿಕೊಂಡು ಬಂದ ಮಹಿಳೆಯರನ್ನು ಮೈಸೂರು ವಿಶ್ವವಿದ್ಯಾಲಯ ಕಸದ ರೀತಿಯೇ ಗುಡಿಸಿ ಹೊರ ಹಾಕಲು ಹೊರಟಿದೆ ಎಂದು ಮೈಸೂರು ವಿವಿ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರು ವಿವಿ ಮಹಿಳಾ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪ್ರೊ.ಮಹೇಶ್ ಚಂದ್ರಗುರು, 14 ವರ್ಷಗಳಿಂದ ನೂರಾರು ಜನ ಮಹಿಳೆಯರು ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿ ಮೈಸೂರು ವಿಶ್ವವಿದ್ಯಾಲಯದ ಆರೋಗ್ಯ ಮತ್ತು…
ಕೈಯಿಂದ ಸ್ವಚ್ಛತೆ ಮಾಡುವವರ ನೋಂದಣಿ ಅಭಿಯಾನ: ಮೈಸೂರು ತಾಲೂಕಲ್ಲಿ 400ಕ್ಕೂ ಅಧಿಕ ಮಂದಿ ನೋಂದಣ
July 7, 2018ಮೈಸೂರು: ಮೈಸೂರು ಜಿಲ್ಲಾ ಪಂಚಾಯತ್ ಸಬಾಂಗಣದಲ್ಲಿ ಶುಕ್ರವಾರ ಕೇಂದ್ರ ಹಾಗೂ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ವತಿಯಿಂದ ಶುಕ್ರವಾರ ನಡೆದ `ಮ್ಯಾನ್ಯುಯಲ್ ಸ್ಕ್ಯಾವೆಂಜರ್’ ವೃತ್ತಿ ಮಾಡುವವರ ನೋಂದಣಿ ಅಭಿಯಾನದಲ್ಲಿ ಮೈಸೂರು ತಾಲೂಕಿನ 36 ಗ್ರಾ.ಪಂಗಳ 400ಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡರು. ಮೈಸೂರು ಜಿ.ಪಂ ಸಭಾಂಗಣದಲ್ಲಿ ನಡೆದ ನೋಂದಣಿ ಕಾರ್ಯಕ್ರಮದಲ್ಲಿ ಮೈಸೂರು ತಾಲೂಕಿನ ಎಲ್ಲಾ ಗ್ರಾ.ಪಂಗಳ ಪಿಡಿಒಗಳು ಪಾಲ್ಗೊಂಡು ತಮ್ಮ ಗ್ರಾಮ ಪಂಚಾಯ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಫಾಯಿ ಕರ್ಮಚಾರಿಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ, ಗ್ರಾಮೀಣ ಪ್ರದೇಶದಲ್ಲಿ…