ನವದೆಹಲಿ: ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ಬೋಧಕರ ನೇಮಕಾತಿಯಲ್ಲಿ ಮೀಸಲಾತಿಗಾಗಿ 200 ಅಂಶಗಳ ರೋಸ್ಟರ್ ಪದ್ಧತಿಯನ್ನು ಜಾರಿಗೊಳಿಸುವ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ ಯಲ್ಲಿ ನಡೆದ ಸಚಿವ ಸಂಪುಟ ಸಭೆ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ಉದ್ದೇಶಿತ ಪ್ರಸ್ತಾವನೆ ವಿಶ್ವವಿದ್ಯಾಲಯಗಳಲ್ಲಿ ಬೋಧಕರ ಹುದ್ದೆಗಳ ನೇಮಕಾತಿಯಲ್ಲಿ ದಲಿತರು, ಬುಡಕಟ್ಟು ಸಮುದಾಯ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಖಾತರಿ ಪಡಿಸುತ್ತದೆ. ಕೇಂದ್ರ ಸರ್ಕಾರ…