ಹಾಸನ: ಗೌಡರ ಕುಟುಂಬದ ಕಿಚನ್ ಕ್ಯಾಬಿನೆಟ್‍ನಲ್ಲಿ ತೀರ್ಮಾನ ಮಾಡಿ, ದೇವೇಗೌಡರನ್ನು ತುಮಕೂರಿಗೆ ಕಳುಹಿಸಲಾಯಿತು. ದೇವೇಗೌಡರ ಸೋಲಿಗೆ ಸಚಿವ ಹೆಚ್.ಡಿ.ರೇವಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಹಾಗೂ ನೂತನ ಸಂಸದರಾಗಿ ಆಯ್ಕೆಗೊಂಡಿರುವ ಪ್ರಜ್ವಲ್ ಅವರೇ ಕಾರಣ ಎಂದು ಶಾಸಕ ಪ್ರೀತಂ ಜೆ.ಗೌಡ ಆರೋಪಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದ ಜನರು ದೇವೇಗೌಡರು ಸ್ಪರ್ಧಿಸಬೇಕು ಎಂದು ಆಸೆ ಪಟ್ಟಿದ್ದರು. ಆದರೆ, ಕುಟುಂಬ ರಾಜ ಕಾರಣ ವಿಸ್ತಾರ ಮಾಡುವುದಕ್ಕೆ ಹೋಗಿ ಯಡವಟ್ಟು ಮಾಡಿಕೊಂಡರು ಎಂದರು. ಜೆಡಿಎಸ್ ರಾಜಕೀಯ ತಂತ್ರಗಾರಿಕೆ…
ಮೈಸೂರು, ಹಾಸನ
ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರ ದಾಳಿ, ಕಲ್ಲು ತೂರಾಟ
February 14, 2019ಹಾಸನ: ಆಪರೇಷನ್ ಕಮಲದ ಸುಮಾರು 82 ನಿಮಿಷಗಳ ಆಡಿಯೋ ಸುದ್ದಿವಾಹಿನಿಗಳಲ್ಲಿ ಇಂದು ಪ್ರಸಾರವಾಗು ತ್ತಿದ್ದಂತೆಯೇ ಹಾಸನದಲ್ಲಿ ಪ್ರಕ್ಷುಬ್ಧ ವಾತಾ ವರಣ ನಿರ್ಮಾಣವಾಯಿತು. ಸ್ಥಳೀಯ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಮನೆ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿ ದರು. ಈ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ವಿವರ: ಗುರು ಮಿಟ್ಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಅವರ ಪುತ್ರ ಶರಣ್ ಗೌಡ ಜೊತೆ ಆಪರೇಷನ್ ಕಮಲ…