ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‍ಡಿಎ ಸರ್ಕಾರ ‘ನವ ಭಾರತ’ ನಿರ್ಮಾಣಕ್ಕಾಗಿ ದುಡಿ ಯುತ್ತಿದ್ದು, ಜನರಿಗೆ ಭರವಸೆ ಮೂಡಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಹೇಳಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ಕೊನೆಯ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಮನಾಥ್ ಕೋವಿಂದ್ ಭಾಷಣ ಆರಂಭಿಸಿದ್ದಾರೆ. ಪ್ರತೀ ಕ್ಷೇತ್ರದಲ್ಲಿರುವ, ಎಲ್ಲಾ ರೀತಿಯ ಜನರ ಭರವಸೆಗಳು ಹಾಗೂ ಆಸೆಗಳನ್ನು ಈಡೇರಿಸಲು ಸರ್ಕಾರ ಕೆಲಸ ಮಾಡುತ್ತಿದೆ. ಮುಸ್ಲಿಂ ಮಹಿಳೆಯರು ಯಾವುದೇ ರೀತಿಯ ಭಯವಿಲ್ಲದೆ ಜೀವನ…