ಗೋಣಿಕೊಪ್ಪಲು: ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯವನ್ನು ಖಾಸಗಿ ಕಾಲೇಜು ಮಾಡಲು ಮುಂದಾಗಿರು ವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಪ್ರಸ್ತುತ ಕಾಲೇಜಿಗೆ ಉತ್ತಮ ಅನುದಾನ ಸೇರಿದಂತೆ ಅಭಿವೃದ್ಧಿಗೆ ಪೂರಕವಾಗಿ ನಡೆಯುತ್ತಿದ್ದು, ಇದನ್ನು ಖಾಸಗಿಗೆ ನೀಡಬಾರದು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು. ಕಾಲೇಜು ಎದುರು ಜಮಾಯಿಸಿದ ವಿದ್ಯಾರ್ಥಿಗಳು ಖಾಸಗಿಗೆ ನೀಡಿದರೆ ಉದ್ಯೋಗ ಸಮಸ್ಯೆ ಉಂಟಾಗುತ್ತದೆ. ಅಲ್ಲದೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಹಣದ ಆಮಿಷಕ್ಕೆ ಒಳಗಾಗುವುದರಿಂದ ಪ್ರತಿಭೆಗಳು ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ….