ನವದೆಹಲಿ: ದೇವಸ್ಥಾನ ನಿರ್ವಹಣೆ ವಿಚಾರದಲ್ಲಿ ಕರ್ನಾಟಕದ ಧರ್ಮ ಸ್ಥಳದ ಆಡಳಿತ ನೋಡಿ ಕಲಿಯಿರಿ ಎಂದು ಒಡಿಶಾದ ಪುರಿ ಜಗನ್ನಾಥ ದೇಗುಲ ಆಡಳಿತ ಮಂಡಳಿಯನ್ನು ಸುಪ್ರೀಂಕೋರ್ಟ್ ಶನಿವಾರ ತರಾಟೆಗೆ ತೆಗೆದುಕೊಂಡಿದೆ. ದೇವಾಲಯದಲ್ಲಿ ಭಕ್ತರ ಶೋಷಣೆಯನ್ನು ಗಂಭೀರ ವಾಗಿ ಪರಿಗಣ ಸಿರುವ ನ್ಯಾ.ಆದರ್ಶ ಗೋಯಲ್ ಮತ್ತು ನ್ಯಾ.ಅಶೋಕ್ ಭೂಷಣ್ ಅವರಿದ್ದ ಪೀಠ ದೇಗುಲ ನಿರ್ವಹಣೆಗೆ ಸಂಬಂಧಿಸಿದಂತೆ ಪುರಿ ಜಗನ್ನಾಥ ದೇಗುಲ ಆಡಳಿತ ಮಂಡಳಿಗೆ ಹಲವು ನಿರ್ದೇಶನಗಳನ್ನು ನೀಡಿದೆ. ಕರ್ನಾಟಕದ ಧರ್ಮಸ್ಥಳ ದೇವಸ್ಥಾನ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ, ಆಂಧ್ರಪ್ರದೇಶದ…