ಬೆಂಗಳೂರು: ಪ್ರಾಣಿಗಳ ಮೂಲಕ ಮನುಷ್ಯರಲ್ಲಿ ಹರಡುವ ರೇಬಿಸ್ ಸೋಂಕು ಮಾರಣಾಂತಿಕವಾಗಿದ್ದು, ರಾಜ್ಯ ಸರ್ಕಾರ ಬೀದಿನಾಯಿಗಳಿಗೆ ಅತ್ಯುತ್ತಮ ರೇಬಿಸ್ ಲಸಿಕೆಗಳನ್ನು ಹಾಕುತ್ತಿದ್ದರೂ ರೋಗಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಮಾತ್ರ ಏರುತ್ತಲೇ ಇದೆ. ರಾಷ್ಟ್ರೀಯ ಆರೋಗ್ಯ ಪ್ರೊಫೈಲ್ 2018 ಕೆಲ ದಿನಗಳ ಹಿಂದಷ್ಟೇ ಬಿಡುಗಡೆಯಾಗಿದ್ದು, ಇದರಲ್ಲಿರುವ ಮಾಹಿತಿಗಳ ಪ್ರಕಾರ ದೇಶದಲ್ಲಿಯೇ ರೇಬಿಸ್‍ಗೆ ತುತ್ತಾಗಿರುವವರ ಸಂಖ್ಯೆ ಕರ್ನಾಟಕದಲ್ಲಿಯೇ ಹೆಚ್ಚು ಎಂಬುದಾಗಿ ತಿಳಿದುಬಂದಿದೆ. ರೇಬಿಸ್ ರೋಗಕ್ಕೆ ಸಂಬಂಧಿಸಿದ ಸಾವುಗಳಲ್ಲಿ ಕಳೆದ ವರ್ಷ ಕರ್ನಾಟಕ ರಾಜ್ಯ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ವರ್ಷ ರಾಜ್ಯದಲ್ಲಿ 97…

