ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಮಹಾತ್ಮ ಗಾಂಧೀಜಿ ಅವರ ಕನಸಾಗಿತ್ತು. ಗಾಂಧಿ ಕನಸನ್ನು ಬಿಜೆಪಿ ನನಸು ಮಾಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. ಸೋಮವಾರ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆದ ಸಿಎಎ ಪರವಾದ ಬಿಜೆಪಿ ಜನಜಾಗೃತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯಿದೆ-ಸಿಎಎ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ-ಎನ್‍ಆರ್‍ಸಿ ವಿಷಯದಲ್ಲಿ ವಿರೋಧ ಪಕ್ಷಗಳು ದೇಶ ವಿಭಜಿಸುವ ಕೆಲಸ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು. ಧರ್ಮದ ಆಧಾರದಲ್ಲಿ…
ಜವಾಬ್ದಾರಿ ಹೊತ್ತ 48 ಗಂಟೆಯೊಳಗೆಜವಾಬ್ದಾರಿ ಹೊತ್ತ 48 ಗಂಟೆಯೊಳಗೆರಕ್ಷಣಾ ಸಚಿವ ರಾಜ್‍ನಾಥ್‍ಸಿಂಗ್ ಸಿಯಾಚಿನ್‍ಗೆ ಭೇಟಿ
June 4, 2019ಜಮ್ಮು-ಕಾಶ್ಮೀರ: ಭಾರತದ ರಕ್ಷಣಾ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ನಲವತ್ತೆಂಟು ಗಂಟೆಯೊಳಗಾಗಿ ರಾಜ್ ನಾಥ್ ಸಿಂಗ್ ಅವರು ಸೋಮವಾರ ಸಿಯಾಚಿನ್‍ಗೆ ಭೇಟಿ ನೀಡಿ, ಜಗತ್ತಿನ ಅತಿ ಎತ್ತರದ ಯುದ್ಧ ಭೂಮಿಯಲ್ಲಿ ನಿಯೋಜಿತರಾಗಿರುವ ಸೈನಿಕರೊಂದಿಗೆ ಮಾತುಕತೆ ನಡೆಸಿದ್ದಾರೆ. “ಮುಂಚೂಣಿ ಸೇನಾ ಠಾಣೆಗೆ ಹಾಗೂ ಸಿಯಾಚಿನ್‍ನ ಬೇಸ್ ಕ್ಯಾಂಪ್‍ಗೆ ಭೇಟಿ ನೀಡಿದ್ದೆ. ‘ಜಗತ್ತಿನ ಅತಿ ಎತ್ತರದ ಯುದ್ಧ ಭೂಮಿ’ ಯಲ್ಲಿ ಕಾರ್ಯ ನಿರ್ವಹಿಸುವ ಸೇನಾ ಸಿಬ್ಬಂದಿ ಜತೆಗೆ ಮಾತುಕತೆ ನಡೆಸಿದೆ” ಎಂದು ರಾಜ್‍ನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್…
ಇಂದು ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಸಿಯಾಚಿನ್‍ಗೆ ಭೇಟಿ
June 3, 2019ನವದೆಹಲಿ: ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಅವರು ಜಗ ತ್ತಿನ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್‍ಗೆ ಸೋಮವಾರ ಭೇಟಿ ನೀಡಿ, ಪಾಕಿಸ್ತಾನದೊಂದಿಗೆ ಗಡಿ ಹಂಚಿ ಕೊಂಡಿರುವ ಅಲ್ಲಿನ ಭದ್ರತಾ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಈ ಭೇಟಿ ವೇಳೆ ರಕ್ಷಣಾ ಸಚಿವರ ಜತೆಗೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ರಕ್ಷಣಾ ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಇರಲಿದ್ದಾರೆ. ಈ ಬಗ್ಗೆ ಸರಕಾರದ ಮೂಲಗಳು ಖಚಿತಪಡಿಸಿವೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ….
ಸೆ. 18ರಂದು ಬೆಂಗಳೂರಲ್ಲಿದಕ್ಷಿಣ ಭಾರತ ಮುಖ್ಯಮಂತ್ರಿಗಳ ಸಭೆ
September 15, 2018ಬೆಂಗಳೂರು: ದಕ್ಷಿಣ ಭಾರತ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಈ ತಿಂಗಳ 18ರಂದು ಕೇಂದ್ರ ಗೃಹ ಸಚಿವ ರಾಜನಾಥ್‍ಸಿಂಗ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸುರಿದ ಮಹಾ ಮಳೆಯಿಂದ ಹಾನಿಗೀಡಾದ ಕೊಡಗು ಜಿಲ್ಲೆಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ 10 ಕೋಟಿ ರೂ. ದೇಣಿಗೆ ನೀಡುತ್ತಿದೆ ಎಂದರು. ಇದರಲ್ಲಿ 8 ಕೋಟಿ ರೂ.ಗಳನ್ನು ಸಂಸ್ಥೆ ಗುರುತಿಸಿರುವ ಫಲಾನುಭವಿಗಳಿಗೆ ತಲಾ 65,000 ರೂ. ನೀಡಲಿದೆ. ಇದೇ ಸಂದರ್ಭದಲ್ಲಿ…