ಬೆಂಗಳೂರು, ಏ.4-ಸಿಡಿ ಪ್ರಕರಣದಲ್ಲಿ ಎಸ್‍ಐಟಿ ಅಧಿಕಾರಿಗಳಿಂದ ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಅವರನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಂತ್ರಸ್ತ ಯುವತಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಭಾನುವಾರ ಪತ್ರ ರವಾನಿಸಿದ್ದಾರೆ. ಯುವತಿ ತನ್ನ ಕೈಬರಹದಲ್ಲೇ ಬರೆದಿರುವ ಪತ್ರವನ್ನು ಆಕೆಯ ಪರ ವಕೀಲ ಜಗದೀಶ್‍ಕುಮಾರ್ ಮತ್ತು ವಕೀ ಲರೂ ಆಗಿರುವ ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದ ರಾಜ್ ಅವರು ಪೊಲೀಸ್ ಆಯುಕ್ತರ ಕಚೇರಿಗೆ ತಲುಪಿಸಿದರು. ಎಸ್‍ಐಟಿ…
ಸಿಡಿ ಪ್ರಕರಣ: ರಾಜ್ಯದ ಜನರ ಗಮನ ಬೇರೆಡೆ ಸೆಳೆಯಲು ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಆರೋಪ
March 30, 2021ಮೈಸೂರು,ಮಾ.29(ಎಂಟಿವೈ)- ಅಶ್ಲೀಲ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜನರ ಗಮನ ಬೇರೆಡೆ ಸೆಳೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಆರೋ ಪಿಸಿ ಹಾಗೂ ಅತ್ಯಾಚಾರ ಪ್ರಕರಣ ದಾಖ ಲಿಸಿ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಂಗ್ರೆಸ್ ಕಚೇರಿ ಮುಂಭಾಗ ದಲ್ಲಿ ಸೋಮವಾರ ಮಧ್ಯಾಹ್ನ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗ, ಮೈಸೂರು ನಗರ ಹಾಗೂ ಗ್ರಾಮಾಂ ತರ ಕಾಂಗ್ರೆಸ್ ಘಟಕÀದ ವತಿಯಿಂದ ನಡೆದ…
ಡಿಕೆಶಿ ಕಾರಿನ ಮೇಲೆ ಚಪ್ಪಲಿ ಎಸೆತ
March 29, 2021ಬೆಳಗಾವಿ, ಮಾ.28- ರಾಸಲೀಲೆ ಸಿಡಿ ಪ್ರಕ ರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವ ಕುಮಾರ್ ಹೆಸರು ಪ್ರಸ್ತಾಪದ ಮಾರನೇ ದಿನವೇ ಡಿ.ಕೆ.ಶಿವಕುಮಾರ್ ಇಂದು ಬೆಳಗಾವಿಗೆ ಆಗಮಿ ಸಿದರು. ಅವರಿಗೆ ರಮೇಶ್ ಜಾರಕಿಹೊಳಿ ಬೆಂಬ ಲಿಗರ ಭಾರೀ ಪ್ರತಿಭಟನೆ ಬಿಸಿ ತಟ್ಟಿತು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿ ಳಿದ ಡಿ.ಕೆ.ಶಿವಕುಮಾರ್, ಅಲ್ಲಿಂದ ಹೋಟೆಲ್‍ಗೆ ತೆರಳುವ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಡಿಕೆಶಿ ಪ್ರಯಾಣಿಸುತ್ತಿದ್ದ ಕಾರಿಗೆ ಮುತ್ತಿಗೆ ಹಾಕಿ, ಚಪ್ಪಲಿ…
ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು
March 17, 2021ಬೆಂಗಳೂರು,ಮಾ.16-ಸಿಡಿ ಪ್ರಕರಣದಲ್ಲಿ ಈಗಾಗಲೇ ಸಂಕಷ್ಟಕ್ಕೆ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಸಿಡಿಯಲ್ಲಿ ಸಂತ್ರಸ್ತ ಯುವತಿಯೊಂದಿಗೆ ಸಂಭಾಷಣೆ ನಡೆಸಿರುವ ರಮೇಶ್ ಜಾರಕಿಹೊಳಿ ಕನ್ನಡಿಗರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕನ್ನಡಿಗರ ರಕ್ಷಣಾ ವೇದಿಕೆ ಕಬ್ಬನ್ ಪಾರ್ಕ್ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಕರ್ನಾಟಕದಲ್ಲಿ ಹುಟ್ಟಿ, ಬೆಳೆದು ಕನ್ನಡಿಗರ ಬಗ್ಗೆ ರೀತಿ ಹೇಳುವುದು ಅವರಿಗೆ ಶೋಭೆಯಲ್ಲ. ಕೂಡಲೇ ಅವರನ್ನ ರಾಜ್ಯ ಸರ್ಕಾರ ಶಾಸಕ…
ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಂದ ಯುವತಿಗೆ ನೋಟಿಸ್
March 15, 2021ಬೆಂಗಳೂರು, ಮಾ.14-ಸಾಮಾಜಿಕ ಕಾರ್ಯ ಕರ್ತ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರು ಆಧರಿಸಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಯಲ್ಲಿದ್ದಳೆನ್ನಲಾದ ಯುವತಿಗೆ ನೋಟಿಸ್ ಜಾರಿ ಮಾಡಿದ್ದರೆ, ಎಸ್‍ಐಟಿ ತಂಡ ರಮೇಶ್ ಜಾರಕಿಹೊಳಿ ನೀಡಿದ್ದ ದೂರನ್ನು ಆಧರಿಸಿ ನಾಲ್ವರಿಗೆ ನೋಟಿಸ್ ಜಾರಿ ಮಾಡಿದೆ. ಸಿಡಿಯಲ್ಲಿದ್ದ ಯುವತಿ ಶನಿವಾರ ವೀಡಿಯೋ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಮಾಡಿ, ತನ್ನ ಹಾಗೂ ತನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಗೃಹ ಸಚಿವ ರನ್ನು ಕೋರಿದ್ದರು. ಇದರ…
ಸಿಡಿ ಯುವತಿಗೆ ಈಗಾಗಲೇ ಕೆಲವರಿಂದ ರಕ್ಷಣೆ ಸಿಕ್ಕಿದೆ
March 15, 2021ಮೈಸೂರು,ಮಾ.14(ಎಂಟಿವೈ)-ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿಗೆ ಯಾರಿಂದ ರಕ್ಷಣೆ ಸಿಗಬೇಕಿದೆಯೋ ಅವರಿಂದ ರಕ್ಷಣೆ ಸಿಕ್ಕಿದೆ. ಸರ್ಕಾರಕ್ಕೆ ಆ ಯುವತಿ ಟ್ರೇಸ್ ಆಗದೇ ಇದ್ದರೂ, ಆ ಯುವತಿಗೆ ಸಿಗಬೇಕಾದ ರಕ್ಷಣೆ ಕೆಲವರಿಂದ ಸಿಕ್ಕಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ಕಾರದ ಒಳಗಿರುವವರೋ ಅಥವಾ ಸರ್ಕಾರದ ವಿರುದ್ಧ ಇರುವ ಯಾರೋ ಆ ಯುವತಿಗೆ ರಕ್ಷಣೆ ಕೊಟ್ಟಿದ್ದಾರೆ. ಆ ಮನುಷ್ಯನ (ರಮೇಶ್ ಜಾರಕಿಹೊಳಿ) ಸ್ಪೀಡ್‍ಗೆ ಬ್ರೇಕ್ ಹಾಕಲು ಸರ್ಕಾರದ ಒಳಗೆ…
ಮೈತ್ರಿ ಸರ್ಕಾರಕ್ಕೆ ಮತ್ತೆ ಗಂಡಾಂತರ: ಕಾಂಗ್ರೆಸ್ ತೊರೆಯಲು ರಮೇಶ್ ಜಾರಕಿಹೊಳಿ ನಿರ್ಧಾರ
April 24, 2019ಬೆಂಗಳೂರು: ಕಾಂಗ್ರೆಸ್‍ನ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಪಕ್ಷ ತೊರೆಯುವುದಾಗಿ ಹೇಳಿದ್ದಾರೆ. ವಿಧಾನಸಭಾ ಸದಸ್ಯತ್ವ ಹಾಗೂ ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರುವುದಾಗಿ ಹೇಳಿದ್ದಾರೆ. ಕಳೆದ ಆರು ತಿಂಗಳಿಂದ ಬಂಡಾಯ ನಾಯಕರಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ ಜೊತೆ ಕೈ ಜೋಡಿಸಿದ್ದರು. ಆ ಪಕ್ಷದ ನಾಯಕರ ಜೊತೆ ಗೂಡಿ ಆಪರೇಷನ್ ಕಮಲದ ಉಸ್ತುವಾರಿ ವಹಿಸಿಕೊಂಡಿದ್ದ ರಮೇಶ್, ಹತ್ತು ಹಲವು ಬಾರಿ ಆಪರೇಷನ್ ಕಮಲ ಮಾಡಿದ್ದರೂ, ಯಶಸ್ವಿ ಕಂಡಿರಲಿಲ್ಲ. ಇದೀಗ…
ರಮೇಶ್ ಜಾರಕಿಹೊಳಿ, ಮಹೇಶ್ ಕಮಟಹಳ್ಳಿ ಮೇಲೆ ಕ್ರಮಕ್ಕೆ ನಿರ್ಧಾರ
January 19, 2019ಬೆಂಗಳೂರು: ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕಮಟಹಳ್ಳಿ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಗೆ ರಮೇಶ್ ಜಾರಕಿಹೊಳಿ, ಮಹೇಶ್ ಕಮಟಹಳ್ಳಿ, ಬಿ.ನಾಗೇಂದ್ರ ಮತ್ತು ಡಾ. ಉಮೇಶ್ ಜಾಧವ್ ಗೈರು ಹಾಜರಾಗಿದ್ದರು. ಇವರಲ್ಲಿ ಆರೋಗ್ಯ ಸಮಸ್ಯೆಯಿಂದ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಡಾ….
ರಾಜೀನಾಮೆ ಮಾತಿಗೆ ಈಗಲೂ ಬದ್ಧ 4 ದಿನ ಕಾದು ನೋಡಿ: ರಮೇಶ್ ಜಾರಕಿಹೊಳಿ
December 25, 2018ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮಾತಿಗೆ ನಾನು ಈಗಲೂ ಬದ್ಧ. ಆದರೆ ನನಗೆ ನಾಲ್ಕು ದಿನ ಸಮಯ ಕೊಡಿ. ನಾಲ್ಕು ದಿನದಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಚಿವ ಸ್ಥಾನ ಕಳೆದುಕೊಂಡ ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಜಾರಕಿಹೊಳಿ ಸೋಮವಾರ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಮಾಜಿ ಸಚಿವ, ಕಳೆದ ಒಂದು ವಾರದಲ್ಲಿ ಮಾಧ್ಯಮಗಳು ಹೀರೋನ ವಿಲನ್ ಮಾಡಿವೆ. ವಿಲನ್‍ನ ಹೀರೋ ಮಾಡಿವೆ. ವಿಲನ್ ಯಾರು? ಹೀರೋ ಯಾರು? ಅನ್ನೋದನ್ನು ಮುಂದೆ ಹೇಳುತ್ತೇನೆ…
ರಮೇಶ್ ಜಾರಕಿಹೊಳಿ ರಾಜೀನಾಮೆ ಚಿಂತನೆ
December 24, 2018ಬೆಳಗಾವಿ: ಸಚಿವರಾಗಿದ್ದಾಗಲೂ ಪಕ್ಷ ಹಾಗೂ ಸರ್ಕಾರದ ಜೊತೆಗೆ ಅಂತರ ಕಾಯ್ದುಕೊಂಡಿದ್ದ ರಮೇಶ್ ಜಾರಕಿ ಹೊಳಿ ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಚಿಂತನೆಯಲ್ಲಿದ್ದಾರೆ ಎನ್ನಲಾಗಿದೆ. ಆಪ್ತರ ಬಳಿ ಈ ಸಂಬಂಧ ಚರ್ಚಿಸಿರುವ ರಮೇಶ್ ಜಾರಕಿಹೊಳಿ ಶೀಘ್ರವೇ ರಾಜೀನಾಮೆ ನಿರ್ಧಾರ ಪ್ರಕಟಿಸುವುದಾಗಿಯೂ ಹೇಳಿಕೊಂಡಿದ್ದಾರೆ. ತಮ್ಮ ಜೊತೆಗೆ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಬಾಂಬ್ ಸಿಡಿಸಿರುವ ರಮೇಶ್, ರಾಜೀನಾಮೆ ಸಲ್ಲಿಸಲಿರುವವರ ಸಂಖ್ಯೆಯನ್ನು ಗೌಪ್ಯವಾಗಿ ಇಟ್ಟಿದ್ದಾರೆ. ರಮೇಶ್ ಮತ್ತು ಆಪ್ತರ ಮಾತುಕತೆಯ ಆಡಿಯೋ ಇದೀಗ ವೈರಲ್ ಆಗಿದ್ದು, ಸಮ್ಮಿಶ್ರ…