ನವದೆಹಲಿ, ಜೂ.7- ಮಾರ್ಚ್ 16ರಿಂದ ದೇಶಾದ್ಯಂತ ಬಂದ್ ಆಗಿರುವ ಶಾಲೆ ಕಾಲೇಜುಗಳು ಆಗಸ್ಟ್ ಬಳಿಕ ವಷ್ಟೇ ಪುನಾರಂಭಗೊಳ್ಳಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ನಡೆದ ಖಾಸಗಿ ಸಂದರ್ಶನ ದಲ್ಲಿ ಮಾತನಾಡಿರುವ ಅವರು, ಶಾಲೆ ಕಾಲೇಜು ಗಳನ್ನು ಆರಂಭಿಸುವ ಬಗ್ಗೆ ಮಾತನಾಡಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಆಗಸ್ಟ್ ಬಳಿಕ ಶಾಲೆ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಚಿಂತಿಸಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಶಿಕ್ಷಕರು ಇತರೆ ಸಿಬ್ಬಂದಿಗಳಿಗೆ ಪ್ರತ್ಯೇಕ…