Tag: Ramya

ರಾತ್ರೋರಾತ್ರಿ ಮಂಡ್ಯ ಮನೆ ಖಾಲಿ ಮಾಡಿದ ಮಾಜಿ ಸಂಸದೆ ರಮ್ಯಾ
ಮಂಡ್ಯ, ಮೈಸೂರು

ರಾತ್ರೋರಾತ್ರಿ ಮಂಡ್ಯ ಮನೆ ಖಾಲಿ ಮಾಡಿದ ಮಾಜಿ ಸಂಸದೆ ರಮ್ಯಾ

December 4, 2018

ಮಂಡ್ಯ: ಮಾಜಿ ಸಂಸದೆ ರಮ್ಯಾ, ಮಂಡ್ಯ ವಿದ್ಯಾನಗರದ ಕೆ.ಆರ್.ರಸ್ತೆಯಲ್ಲಿದ್ದ ತಮ್ಮ ಬಾಡಿಗೆ ಮನೆ ಯನ್ನು ಭಾನುವಾರ ರಾತ್ರೋರಾತ್ರಿ ಖಾಲಿ ಮಾಡಿದ್ದಾರೆ. 2013ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದ ರಮ್ಯಾ ಅವರು, ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಸಾದತ್ ಆಲಿಖಾನ್ ಅವರ ಮನೆಯನ್ನು ಬಾಡಿಗೆಗೆ ಪಡೆದಿದ್ದರು. ಆದರೆ ಕಳೆದ ಭಾನುವಾರ ತಡರಾತ್ರಿ 2 ಲಾರಿಗಳಲ್ಲಿ ಮನೆಯಲ್ಲಿದ್ದ ಪೀಠೋಪಕರಣಗಳು ಸೇರಿದಂತೆ ಇತರೆ ಸಾಮಾನು ಸರಂಜಾಮುಗಳನ್ನು ಬೆಂಗಳೂರಿಗೆ ಸಾಗಿಸಿದ್ದಾರೆ. ಭಾನುವಾರ ರಾತ್ರಿ ಹತ್ತು ಗಂಟೆ ಯಿಂದ…

ತವರಿಗೆ ಬಾರದ ರಮ್ಯಾಗೆ ಬಾಗಿನ ಕಳುಹಿಸಿದ ಬಿಜೆಪಿ ಕಾರ್ಯಕರ್ತರು!
ಮಂಡ್ಯ

ತವರಿಗೆ ಬಾರದ ರಮ್ಯಾಗೆ ಬಾಗಿನ ಕಳುಹಿಸಿದ ಬಿಜೆಪಿ ಕಾರ್ಯಕರ್ತರು!

September 13, 2018

ಮಂಡ್ಯ:  ತವರೂರಿಗೆ ಬಾರದ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಬಿಜೆಪಿ ಕಾರ್ಯಕರ್ತರು ಗೌರಿ- ಗಣೇಶ ಹಬ್ಬದ ಪ್ರಯುಕ್ತ ಬಾಗಿನವನ್ನು ಪೋಸ್ಟ್ ಮುಖಾಂತರ ಕಳುಹಿಸಿ ಕೊಡುವ ಮೂಲಕ ಗೌರಿ ಹಬ್ಬಕೆ ಆಹ್ವಾನಿಸಿದರು. ನಗರದ ಪ್ರಧಾನ ಅಂಚೆ ಕಚೇರಿ ಮೂಲಕ ಮಾಜಿ ಸಂಸದೆ ರಮ್ಯಾಗೆ ಜಿಲ್ಲಾ ಬಿಜೆಪಿ ಮುಖಂಡರು ಬಾಗಿನ ಉಡುಗೊರೆಯನ್ನು ಕಳುಹಿಸಿಕೊಟ್ಟರು. ಕಳೆದ ಒಂದು ವರ್ಷದಿಂದ ಮಂಡ್ಯದಿಂದ ನಾಪತ್ತೆಯಾಗಿರುವ ರಮ್ಯಾರವರು ಪುನಃ ಮಂಡ್ಯಕ್ಕೆ ಆಗಮಿಸುವಂತೆ ಬಿಜೆಪಿ ಕಾರ್ಯಕರ್ತರು ಗೌರಿ-ಗಣೇಶ ಹಬ್ಬದ ಪ್ರಯುಕ್ತ…

ಲೋಕಸಭಾ ಉಪಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ  ಜೆಡಿಎಸ್‍ನಿಂದ ಲಕ್ಷ್ಮಿಅಶ್ವಿನ್‍ಗೌಡ ಸ್ಪರ್ಧೆ, ಕಾಂಗ್ರೆಸ್‍ನಿಂದ ಟಿಕೆಟ್ ಯಾರಿಗೆ..?
ಮಂಡ್ಯ

ಲೋಕಸಭಾ ಉಪಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ  ಜೆಡಿಎಸ್‍ನಿಂದ ಲಕ್ಷ್ಮಿಅಶ್ವಿನ್‍ಗೌಡ ಸ್ಪರ್ಧೆ, ಕಾಂಗ್ರೆಸ್‍ನಿಂದ ಟಿಕೆಟ್ ಯಾರಿಗೆ..?

June 18, 2018

ಮಂಡ್ಯ: ಸಚಿವ ಸಿ.ಎಸ್. ಪುಟ್ಟರಾಜು ರಾಜೀನಾಮೆಯಿಂದ ತೆರ ವಾಗಿರುವ ಮಂಡ್ಯ ಲೋಕಸಭಾ ಸ್ಥಾನಕ್ಕೆ ಉಪಚುನಾವಣೆಗೆ ಸದ್ದಿಲ್ಲದೆ ತಯಾರಿ ನಡೆಯುತ್ತಿದೆ. ಜೆಡಿಎಸ್ ಪಕ್ಷದ ಅಭ್ಯರ್ಥಿ ಯಾಗಿ ಲಕ್ಷ್ಮಿ ಅಶ್ವಿನ್‍ಗೌಡ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಯಾರು ಎಂಬ ಚರ್ಚೆ ಈಗ ಎಲ್ಲೆಡೆ ಶುರುವಾಗಿದೆ. ಇತ್ತೀಚೆಗಷ್ಟೇ ತಮ್ಮ ಐಆರ್‍ಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಲಕ್ಷ್ಮಿ ಅಶ್ವಿನ್‍ಗೌಡ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿ ಕೊಂಡಿದ್ದಾರೆ. ಲೋಕಸಭೆ ಉಪಚುನಾ ವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ನನಗೇ ಎಂಬ ವಿಶ್ವಾಸ…

ಮತ್ತೆ ಚಿತ್ರರಂಗದತ್ತ ಮೋಹಕ ತಾರೆ?
ಮೈಸೂರು

ಮತ್ತೆ ಚಿತ್ರರಂಗದತ್ತ ಮೋಹಕ ತಾರೆ?

June 10, 2018

ಬೆಂಗಳೂರು: – ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಬಳಿಕ ಚಿತ್ರ ರಂಗದಿಂದ ದೂರ ಉಳಿದಿದ್ದ ಸ್ಯಾಂಡಲ್‍ವುಡ್ ಕ್ವೀನ್, ಮೋಹಕ ತಾರೆ ರಮ್ಯಾ ಅವರು ಮತ್ತೆ ಚಿತ್ರರಂಗದತ್ತ ಮುಖ ಮಾಡುವ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸ್ವತಃ ರಮ್ಯಾ ಅವರೇ ಸ್ಪಷ್ಟನೆ ನೀಡಿದ್ದಾರೆ. ನಟ ರಕ್ಷಿತ್ ಶೆಟ್ಟಿಯವರ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಟೀಸರ್‍ಗೆ ರಮ್ಯಾ ಅವರು ಮೆಚ್ಚುಗೆ ನೀಡಿದ್ದು, ನಂತರ ರಕ್ಷಿತ್ ಶೆಟ್ಟಿಯವರು ಕೇಳಿದ ಪ್ರಶ್ನೆಗೆ ಕುತೂಹಲಭರಿತ ಉತ್ತರವನ್ನು ನೀಡಿದ್ದಾರೆ. ಈ ಹಿಂದೆ ರಕ್ಷಿತ್ ಶೆಟ್ಟಿಯವರಿಗೆ ಟ್ವೀಟ್ ಮಾಡಿದ್ದ ರಮ್ಯಾ…

Translate »