ಮೈಸೂರು: ಮೈಸೂರು ನಗರದ ನಾಗರಿಕರ ಬಾಯಾರಿಕೆ ನೀಗಿಸಲು ಈಗಾಗಲೇ 13 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು, ಇದೀಗ ಇನ್ನು 15 ಘಟಕಗಳನ್ನು ಸ್ಥಾಪಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಮೈಸೂರು ನಗರದಲ್ಲಿ ಮಹಾನಗರ ಪಾಲಿಕೆ ಸ್ಥಾಪಿಸಿದ ಶುದ್ಧ ಕುಡಿಯುವ ನೀರಿನ ಘಟಕಗಳ ಬಳಕೆಯಲ್ಲಿ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 5 ರೂ.ಗಳ ಚಿನ್ನದ ಬಣ್ಣ ಲೇಪನದ ನಾಣ್ಯವನ್ನು ಹಾಕಿದರೆ, 20 ಲೀಟರ್ ಶುದ್ಧ ಕುಡಿಯುವ ನೀರು ದೊರೆಯಲಿದೆ….