Tag: Rohini Sindhuri

ಅನಗತ್ಯ ಹೆರಿಗೆ ಶಸ್ತ್ರ ಚಿಕಿತ್ಸೆ ಕಡಿವಾಣಕ್ಕೆ ಸೂಚನೆ
ಹಾಸನ

ಅನಗತ್ಯ ಹೆರಿಗೆ ಶಸ್ತ್ರ ಚಿಕಿತ್ಸೆ ಕಡಿವಾಣಕ್ಕೆ ಸೂಚನೆ

August 8, 2018

ಹಾಸನ: ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ನಡೆಯುವ ಅನಗತ್ಯ ಹೆರಿಗೆ ಶಸ್ತ್ರಚಿಕಿತ್ಸೆಗಳು ಸಂಪೂರ್ಣ ನಿಯಂತ್ರಣಗೊಳ್ಳಬೇಕಿದ್ದು, ಕನಿಷ್ಠ ಶೇ.50ರಷ್ಟು ಶಿಶುಗಳು ಸಹಜ ಜನನವಾಗಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು. ತಮ್ಮ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಆರೋಗ್ಯ ಅಭಿಯಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.45-50 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶೇ.67ರಷ್ಟು ಹೆರಿಗೆಗಳು ಶಸ್ತ್ರ ಚಿಕಿತ್ಸೆ ಮೂಲಕವೇ ಆಗುತ್ತಿವೆ. ಎಲ್ಲಾ ವೈದ್ಯರೂ ಆದಷ್ಟು ಸಹಜ ಹೆರಿಗೆಗೆ ಗಮನ ಹರಿಸಬೇಕು. ಈ ಬಗ್ಗೆ…

ಅತಿವೃಷ್ಠಿ ಹಾನಿಗೆ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿ
ಹಾಸನ

ಅತಿವೃಷ್ಠಿ ಹಾನಿಗೆ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿ

August 4, 2018

ಹಾಸನ:  ‘ಜಿಲ್ಲೆಯ ವಿವಿಧೆಡೆ ಅತಿವೃಷ್ಠಿಯಿಂದ ಸಾಕಷ್ಟು ಹಾನಿ ಸಂಭವಿ ಸಿದ್ದು, ರಾಷ್ಟೀಯ ಪ್ರಕೃತಿ ವಿಕೋಪ ನಿಧಿ ಮಾನದಂಡದಂತೆ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು. ಬೆಂಗಳೂರಿನಲ್ಲಿ ನಡೆದ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಅನುಪಾಲನೆ ಕುರಿತು ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅತಿವೃಷ್ಠಿ ಹಿನ್ನೆಲೆಯಲ್ಲಿ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಬೆಳೆ, ಮನೆ, ಜಾನುವಾರು,…

ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ: ಅರ್ಹರಿಗೆ ಭೂಮಿ ನೀಡಲು ಶಾಸಕರ ಸೂಚನೆ
ಹಾಸನ

ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ: ಅರ್ಹರಿಗೆ ಭೂಮಿ ನೀಡಲು ಶಾಸಕರ ಸೂಚನೆ

August 3, 2018

ಹಾಸನ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿ ಕಾರಿ ರೋಹಿಣಿ ಸಿಂಧೂರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಈ ವೇಳೆ ಹೇಮಾವತಿ ಯಗಚಿ ವಾಟೆವಳೆ ಜಲಾಶಯ ಯೋಜನೆಗಳ ನಿರಾಶ್ರಿತರ ಸಮಸ್ಯೆಗಳು, ಪುನರ್‍ವಸತಿಗೆ ಮೀಸಲಿರಿಸಿರುವ ಜಾಗದಲ್ಲಿ ಹಲವು ದಶಕಗಳಿಂದ ಮನೆ ನಿರ್ಮಿಸಿಕೊಂಡಿರುವ ದಲಿತ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಕುರಿತು ಪ್ರಸ್ತಾಪಿಸಲಾಯಿತು. ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ ಹಾಗೂ ಕೆ.ಎಸ್.ಲಿಂಗೇಶ್ ಮಾತನಾಡಿ, ಹೆಚ್‌ಆರ್‌ಪಿ ಯೋಜನೆ ಜಾರಿಗೆ ಬಂದು ದಶಕಗಳೇ ಆದರೂ,…

ಮೃತ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಹಾಸನ

ಮೃತ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

July 29, 2018

ಹಾಸನ: ಕಳೆದ ಸಾಲಿನಲ್ಲಿ ಬಾಕಿ ಉಳಿದಿರುವ ರೈತರ ಆತ್ಮಹತ್ಯೆ ಪ್ರಕರಣಗಳ ಪರಿಹಾರವನ್ನು ತಕ್ಷಣ ಸಂಪೂರ್ಣವಾಗಿ ವಿತರಿಸಿ, ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್ ಸಿಂಗ್ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಂಟಿ ಕೃಷಿ ನಿರ್ದೇಶಕರ ಉಳಿತಾಯ ಖಾತೆಯಲ್ಲಿ ಲಭ್ಯವಿರುವ ಹಣದಲ್ಲಿ ಬಾಕಿ ಇರುವ 10 ರೈತರ ಆತ್ಮಹತ್ಯೆ ಪ್ರಕರಣದ ಪರಿಹಾರ ವಿತರಿಸಿ, ನಂತರ ಅದನ್ನು ಸರ್ಕಾರದಿಂದ ಪುನರ್ ಭರಿಸಿಕೊಳ್ಳುವಂತೆ ನಿರ್ದೇಶನ ನೀಡಿದರು. ಜಂಟಿ ಕೃಷಿ…

ನಿರಂತರ ಅಭ್ಯಾಸದಿಂದ ಗುರಿ ಸಾಧನೆ ಸುಲಭ ತಾಯಂದಿರ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಭಿಮತ
ಹಾಸನ

ನಿರಂತರ ಅಭ್ಯಾಸದಿಂದ ಗುರಿ ಸಾಧನೆ ಸುಲಭ ತಾಯಂದಿರ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಭಿಮತ

July 27, 2018

ಹಾಸನ:  ‘ವಿದ್ಯಾರ್ಥಿ ಜೀವನದಲ್ಲಿ 10ನೇ ತರಗತಿಯಿಂದ ಅಂತಿಮ ಪದವಿ ಪೂರ್ಣಗೊಳಿಸುವ ಹಂತವು ಮುಖ್ಯವಾದ ಕಾಲಘಟ್ಟವಾಗಿದೆ. ಈ ಸಮಯವನ್ನು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ನಿಗದಿತ ಗುರಿ ಸಾಧಿಸಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು. ತಾಲೂಕಿನ ಕಟ್ಟಾಯದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗುವಂತೆ ಏರ್ಪಡಿಸಿದ್ದ ತಾಯಂ ದಿರ ಸಭೆಯನ್ನು ಉದ್ಘಾಟಿಸಿ ಅವರು ಮಾತ ನಾಡಿದರು. ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿ ಕೊಳ್ಳಬೇಕು. ಪ್ರತಿದಿನ ವೇಳಾಪಟ್ಟಿ ತಯಾರಿಸಿಕೊಂಡು ಪ್ರತಿನಿತ್ಯ…

ಹಾಸನದಲ್ಲಿ 7 ಅಂತಸ್ತಿನ ಅಕ್ರಮ ಕಟ್ಟಡ ತೆರವಿಗೆ ಡಿಸಿ ಸೂಚನೆ
ಹಾಸನ

ಹಾಸನದಲ್ಲಿ 7 ಅಂತಸ್ತಿನ ಅಕ್ರಮ ಕಟ್ಟಡ ತೆರವಿಗೆ ಡಿಸಿ ಸೂಚನೆ

July 24, 2018

ಹಾಸನ:  ನಗರ ಹೃದಯ ಭಾಗದ ಎನ್‍ಡಿಆರ್‍ಕೆ ಆಸ್ಪತ್ರೆ ಸಮೀಪ ಅಕ್ರಮವಾಗಿ ನಿರ್ಮಾಣವಾಗುತ್ತಿದ್ದ ಬೃಹತ್ ವಾಣಿಜ್ಯ ಕಟ್ಟಡ ತೆರವುಗೊಳಿಸಿ, ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ನಿರ್ದೇಶಿಸಿದ್ದು, ಅದರಂತೆ ನಗರಸಭೆ ಆಯುಕ್ತ ಪರಮೇಶ್ ಅವರಿಂದು ಆದೇಶ ಹೊರಡಿಸಿದ್ದಾರೆ. ನಗರದ ವಾರ್ಡ್ ನಂ.1ರ ಆಸ್ತಿ ಸಂಖ್ಯೆ 104ರಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಕಟ್ಟಡ(9859 ಚ.ಅಡಿ) ಎನ್.ಲೀಲಾಕುಮಾರ್ ಎಂಬುವವರಿಗೆ ಸೇರಿದ್ದು, ನಗರಸಭೆಯ ನಿಯಮಗಳ ಉಲ್ಲಂಘನೆ ಹಾಗೂ ಸ್ಥಳ ಒತ್ತುವರಿ ಮಾಡಿರುವ ಕುರಿತು ಸಾರ್ವಜನಿಕರು ದೂರಿದ್ದರು. ಮಾಹಿತಿ ಆಧರಿಸಿ ಜಿಲ್ಲಾಧಿಕಾರಿ…

ಅತಿವೃಷ್ಠಿ ಹಾನಿ ಸ್ಪಷ್ಟ ವರದಿ ನೀಡಲು ಜಿಲ್ಲಾಧಿಕಾರಿ ಸೂಚನೆ
ಹಾಸನ

ಅತಿವೃಷ್ಠಿ ಹಾನಿ ಸ್ಪಷ್ಟ ವರದಿ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2018

ಹಾಸನ: ಜಿಲ್ಲೆಯಲ್ಲಿ ಅತಿವೃಷ್ಠಿ ಯಿಂದ ಉಂಟಾಗಿರುವ ಜನ ಜಾನುವಾರು ಹಾಗೂ ವೈಯಕ್ತಿಕ ಮತ್ತು ಸಾರ್ವಜನಿಕ ಆಸ್ತಿಗಳ ಹಾನಿಗೆ ಪ್ರಕೃತಿ ವಿಕೋಪ ನಿಧಿ ಯಿಂದ ಪರಿಹಾರ ನೀಡಬಹುದಾಗಿದ್ದು, ಎಲ್ಲವನ್ನು ಸ್ಪಷ್ಟವಾಗಿ ಅಂದಾಜಿಸಿ ಕೂಡಲೇ ವರದಿ ನೀಡುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತಮ್ಮ ಕಚೇರಿ ಸಭಾಂಗಣದಲ್ಲಿಂದು ತಹಶೀಲ್ದಾರು ಹಾಗೂ ಪಪಂ ಮುಖ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಅವರು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಲೆನಾಡು ಸೇರಿದಂತೆ ಜಿಲ್ಲೆಯ ವಿವಿಧೆಡೆ ಹಲವು ರೀತಿಯ…

ವಿದ್ಯಾರ್ಥಿ ಸ್ನೇಹಿ ಗ್ರಂಥಾಲಯ ನಿರ್ಮಿಸಲು ಡಿಸಿ ಸೂಚನೆ
ಹಾಸನ

ವಿದ್ಯಾರ್ಥಿ ಸ್ನೇಹಿ ಗ್ರಂಥಾಲಯ ನಿರ್ಮಿಸಲು ಡಿಸಿ ಸೂಚನೆ

July 20, 2018

ಹಾಸನ: ‘ಜಿಲ್ಲೆಯಲ್ಲಿನ ಗ್ರಂಥಾಲಯಗಳು ಸಾರ್ವಜನಿಕರಿಗೆ ಇನ್ನಷ್ಟು ಅನುಕೂಲಕಾರಿಯಾಗುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಪುಸ್ತಕಾಭಿರುಚಿ ಬೆಳೆಸುವ ಕೇಂದ್ರವಾಗಿ ಪರಿವರ್ತನೆ ಯಾಗಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸಭೆ ನಡೆಸಿದ ಅವರು, ನಗರ ಹಾಗೂ ಗ್ರಾಮೀಣ ಮಟ್ಟ ದಲ್ಲಿ ಗ್ರಂಥಾಲಯ ಜ್ಞಾನ ಭಂಡಾರ ಗಳಾಗುವ ಜೊತೆಗೆ, ವಿದ್ಯಾರ್ಥಿ ಸ್ನೇಹಿ ಯಾಗಿರಬೇಕು. ಅದಕ್ಕೆ ಅಧಿಕಾರಿಗಳು ಅಗತ್ಯವಾದ ಪೂರಕ ವಾತಾವರಣ ಕಲ್ಪಿಸಿ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಮಟ್ಟದ ಬಹು ತೇಕ…

ನಾಲ್ಕು ವರ್ಷದ ಬಳಿಕ  ಹೇಮಾವತಿ ಜಲಾಶಯ ಭರ್ತಿ
ಮೈಸೂರು, ಹಾಸನ

ನಾಲ್ಕು ವರ್ಷದ ಬಳಿಕ  ಹೇಮಾವತಿ ಜಲಾಶಯ ಭರ್ತಿ

July 15, 2018

ಹಾಸನ: ತಾಲೂಕಿನ ಗೊರೂರಿನಲ್ಲಿರುವ ಹೇಮಾ ವತಿ ಜಲಾಶಯ 4 ವರ್ಷಗಳ ಬಳಿಕ ಭರ್ತಿಯಾಗಿದ್ದು, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಪತ್ನಿ ಜಿಪಂ ಸದಸ್ಯೆ ಭವಾನಿ ರೇವಣ್ಣ ಜಲಾಶಯಕ್ಕೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸುವ ಮೂಲಕ 15,000ಕ್ಯೂಸೆಕ್ಸ್ ನೀರು ನದಿಗೆ ಬಿಡಲು ಚಾಲನೆ ನೀಡಿದರು. ಜಲಾಶಯ ನಿರ್ಮಾಣದ ನಂತರ ಇದೇ ಮೊದಲ ಬಾರಿಗೆ ಜುಲೈ ತಿಂಗಳ ಮಧ್ಯದಲ್ಲೇ ಭರ್ತಿಯಾಗಿರುವುದು ವಿಶೇಷ. ಇಂದು ಹೇಮಾವತಿ ಅಣೆಕಟ್ಟೆಯ 6 ಕ್ರೆಸ್ಟ್‍ಗೇಟ್‍ಗಳಿಂದ ನೀರು ಬಿಡಲಾಯಿತು. ಜಿಲ್ಲೆಯ ಸಕಲೇಶಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವ್ಯಾಪ್ತಿಯಲ್ಲಿ…

ಎಂ.ಆರ್.ರವಿಕುಮಾರ್ ಮೈಸೂರು ನಗರ ಪಾಲಿಕೆ ನೂತನ ಕಮೀಷ್ನರ್
ಮೈಸೂರು

ಎಂ.ಆರ್.ರವಿಕುಮಾರ್ ಮೈಸೂರು ನಗರ ಪಾಲಿಕೆ ನೂತನ ಕಮೀಷ್ನರ್

July 14, 2018

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಕಮೀಷ್ನರ್ ಆಗಿ ಐಎಎಸ್ ಅಧಿಕಾರಿ ಎಂ.ಆರ್.ರವಿಕುಮಾರ್ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿನ ವೃತ್ತಿ ಮತ್ತು ತರಬೇತಿ ವಿಭಾಗದ ಆಯುಕ್ತರನ್ನಾಗಿ ವರ್ಗಾಹಿಸಲಾಗಿದೆ. ರಾಜ್ಯ ಸರ್ಕಾರ ಇಂದು ಒಟ್ಟು 20 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ರವಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿತ್ತಾದರೂ, ಸ್ಥಳ ನಿಯೋಜಿಸದ ಕಾರಣ ಡಿಪಿಆರ್…

1 2 3 4
Translate »