ಮನೆಯಲ್ಲೇ ಕುಳಿತು ಸೂಕ್ತ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಿದರೆ ಸಾಕು 200 ರೂ. ಅಫಿಡವಿಟ್, ಮ್ಯುಟೇಶನ್, ಹಲವು ಮಾಲೀಕರಿದ್ದರೆ 11-ಇ ಆನ್‍ಲೈನ್‍ನಲ್ಲಿ ಸಲ್ಲಿಸಿದರೆ ಮುಗಿಯಿತು; ಅಲೆಯಬೇಕಾದ ಅಗತ್ಯವಿಲ್ಲ 60 ದಿನದಲ್ಲಿ ಮನೆ ಬಾಗಿಲಿಗೆ ಆದೇಶ ಬರದಿದ್ದರೂ ಪರಿವರ್ತನೆ ಆಗಿದೆ ಎಂದೇ ಮುಂದಿನ ಪ್ರಕ್ರಿಯೆ ಆರಂಭಿಸಬಹುದು ಬೆಂಗಳೂರು: ಕೃಷಿ ಭೂಮಿ ಯನ್ನು ಕೃಷಿಯೇತರ ಭೂಮಿಯನ್ನಾಗಿ ಪರಿವರ್ತಿ ಸಲು ಇನ್ನು ಮುಂದೆ ಅಧಿಕಾರಿಗಳಿಗೆ ಲಂಚ ನೀಡುವ ಅಗತ್ಯವಿಲ್ಲ. ಮನೆಯಲ್ಲೇ ಕುಳಿತು ಸರ್ಕಾರ ಕೇಳಿದ ಸೂಕ್ತ ದಾಖಲೆಗಳನ್ನು ಆನ್‍ಲೈನ್ ಮೂಲಕ ಸಂಬಂಧಪಟ್ಟ ಇಲಾಖೆಗೆ…
ಇಂದು ಮೈಸೂರಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ
December 6, 2018ಮೈಸೂರು: ಕಂದಾಯ ಮತ್ತು ಕೌಶಲಾಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಅವರು ನಾಳೆ (ಡಿ. 6) ಮಧ್ಯಾಹ್ನ 3.30 ಗಂಟೆಗೆ ಮೈಸೂರಿಗೆ ಆಗಮಿಸುವರು. ಮೈಸೂರಿನ ನಜರ್ ಬಾದ್‍ನಲ್ಲಿರುವ ಸರ್ಕಾರಿ ಅತಿಥಿ ಗೃಹದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿರುವ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸು ವರು. ಸಂಜೆ 4 ಗಂಟೆಗೆ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯಲ್ಲಿ ಸೀಮೆನ್ಸ್ ಶ್ರೇಷ್ಠತಾ ಕೇಂದ್ರದ ಕೌಶಲ್ಯ ತರಬೇತಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ದೇಶಪಾಂಡೆ ಅವರು ಸಂಜೆ 6 ಗಂಟೆಗೆ…
ಭೂ ಪರಿವರ್ತನೆ ಮತ್ತಷ್ಟು ಸರಳ ಆನ್‍ಲೈನ್ ಅರ್ಜಿ ಸಲ್ಲಿಸಿದ 10 ದಿನದಲ್ಲಿ ವಿಲೇವಾರಿ
September 18, 2018ಬೆಂಗಳೂರು: ರಾಜ್ಯದ ನಗರ ಪ್ರದೇಶ ವ್ಯಾಪ್ತಿಯಲ್ಲಿನ ಭೂ ಪರಿವರ್ತನೆ ಪ್ರಕರಣಗಳನ್ನು ಇತ್ಯರ್ಥ ಗೊಳಿಸುವಲ್ಲಿ ನಿಯಮದಲ್ಲಿ ಸರಳ ಮತ್ತು ಪಾರದರ್ಶಕತೆ ತಂದಿದೆ. ಇನ್ನು ಮುಂದೆ ಆಸಕ್ತರು ನಗರ ಪ್ರದೇಶ ವ್ಯಾಪ್ತಿಯಲ್ಲಿ ತಮ್ಮ ಜಮೀನನ್ನು ಕೃಷಿಯಿಂದ ಬೇರೆ ಉದ್ದೇಶಕ್ಕೆ ಬಳಕೆ ಮಾಡಿ ಕೊಳ್ಳಲು ಆನ್‍ಲೈನ್ ಮೂಲಕ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ 10 ದಿನಗಳಲ್ಲಿ ಅವರ ಮನವಿ ವಿಲೇವಾರಿಗೊಳ್ಳುತ್ತದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ಆಸಕ್ತರು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲೇ ಸ್ಥಳೀಯ ನಗರ ಯೋಜನಾ…
ಮಂಕಾದ ಮುಂಗಾರು: 87 ತಾಲೂಕಲ್ಲಿ ಬರ ಭೀತಿ
August 8, 2018ಇನ್ನೆರಡು ವಾರದಲ್ಲಿ ಮಳೆ ಬಾರದಿದ್ದರೆ ಬಿತ್ತನೆ ಬೆಳೆ ಹಾಳು ಕಡಿಮೆ ನೀರು ಬೇಕಾಗುವ ಬೆಳೆ ಮೊರೆ ಹೋಗಲು ಸೂಚನೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳೊಂದಿಗೆ ಸಭೆ, ಚರ್ಚೆ ಬೆಂಗಳೂರು: ಮುಂಗಾರು ಮಳೆಯ ಆರ್ಭಟಕ್ಕೆ ರಾಜ್ಯದ ಎಲ್ಲಾ ಜಲಾಶಯ ಗಳು ಭರ್ತಿಯಾಗಿವೆ. ಆದರೆ, ಜಲಾನಯನ ಹೊರತುಪಡಿಸಿ, ಉಳಿದ ಭಾಗ ಬರದ ಸುಳಿಗೆ ಸಿಲುಕುವ ಆತಂಕವಿದೆ. ಇನ್ನೆರಡು ವಾರಗಳಲ್ಲಿ ಮಳೆ ಬೀಳದಿದ್ದರೆ, ಲಕ್ಷಾಂತರ ಎಕರೆ ಭೂಮಿಯಲ್ಲಿ ಬಿತ್ತನೆ ಮಾಡಲಾಗಿರುವ ಬೆಳೆ ನಾಶವಾಗುವು ದಲ್ಲದೆ, 13 ಜಿಲ್ಲೆಗಳ 87 ತಾಲೂಕು ತೀವ್ರ…
ರಾಜ್ಯದ ಮಾನಸ ಸರೋವರ ಯಾತ್ರಾರ್ಥಿಗಳು ಸುರಕ್ಷಿತ
July 4, 2018ಬೆಂಗಳೂರು: ಮಾನಸ ಸರೋವರ ಯಾತ್ರೆಗೆ ತೆರ ಳಿರುವ ರಾಜ್ಯದ ಯಾತ್ರಾರ್ಥಿಗಳು ಇದುವರೆಗೆ ಸುರಕ್ಷಿತ ವಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಭಾರೀ ಮಳೆ ಯಿಂದಾಗಿ ಯಾತ್ರಾರ್ಥಿಗಳಿಗೆ ತೊಂದರೆ ಯಾಗಿರುವುದು ನಿಜ. ಯಾತ್ರೆಗೆ ತೆರಳಿದ್ದ 525 ಯಾತ್ರಾರ್ಥಿಗಳ ಪೈಕಿ ರಾಜ್ಯದ 250 ಯಾತ್ರಾರ್ಥಿಗಳಿದ್ದು, ಅವರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಯಾತ್ರಾರ್ಥಿಗಳ ರಕ್ಷಣೆಗೆ ಧಾವಿಸುವಂತೆ ಕೇಂದ್ರದ ಗೃಹ ಇಲಾಖೆ, ವಿದೇಶಾಂಗ ವ್ಯವಹಾರಗಳ…
ವಿಪ್ರನಿಧಿ ಸ್ಥಾಪನೆಗೆ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮನವಿ
June 20, 2018ಮೈಸೂರು: ಮೈಸೂರು ನಗರಕ್ಕೆ ವಿವಿಧ ಕಾರ್ಯಕ್ರಮಗಳ ನಿಮಿತ್ತ ಭೇಟಿ ನೀಡಿದ್ದ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಆರ್.ವಿ ದೇಶಪಾಂಡೆ ಅವರನ್ನು ಬ್ರಾಹ್ಮಣ ಯುವ ವೇದಿಕೆಯ ಪದಾಧಿಕಾರಿಗಳು ಇಂದು ಸರ್ಕಾರಿ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಅವರನ್ನು ಅಭಿನಂದಿಸಿದರಲ್ಲದೆ, ಬ್ರಾಹ್ಮಣರ ಅಭಿವೃದ್ಧಿ ಪ್ರಾಧಿಕಾರ, ವಿಪ್ರನಿಧಿ ಸ್ಥಾಪನೆ ವಿಚಾರವಾಗಿ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಹೆಚ್.ಎನ್.ಶ್ರೀಧರಮೂರ್ತಿ ಮಾತನಾಡಿ, ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ಪ್ರತಿನಿತ್ಯ ಹಲವಾರು ಸಮಸ್ಯೆಗಳನ್ನು ಎದುರಿ…
ರೈತರಿಗೆ ಬೆಳೆ ಪರಿಹಾರ ನೀಡುವಾಗ ಮಾನವೀಯತೆ ಮೆರೆಯಿರಿ
June 19, 2018ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸಲಹೆ ಮೈಸೂರು, ಮಂಡ್ಯ, ಚಾ.ನಗರ ಜಿಲ್ಲೆಯ ಮಳೆ ಬೆಳೆ ಪರಿಸ್ಥಿತಿ ಅವಲೋಕನ ಮೈಸೂರು: ರೈತರಿಗೆ ಬೆಳೆ ಪರಿಹಾರ ನೀಡುವ ವಿಷಯದಲ್ಲಿ ಅಧಿಕಾರಿಗಳು ಜಿಗುಟುತನ ತೋರಬೇಡಿ. ಬದಲಾಗಿ ಸ್ವಲ್ಪ ಉದಾರತೆ, ಮಾನವೀಯತೆ ಇಟ್ಟುಕೊಂಡು ಕೆಲಸ ಮಾಡುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಸಲಹೆ ನೀಡಿದರು. ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಮತ್ತು ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ `ಮಳೆ-ಬೆಳೆ ಪರಿಸ್ಥಿತಿ, ಮಳೆ ಹಾನಿ ಹಾಗೂ ಕೈಗೊಂಡ…
ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ಡಿಸಿ ಕಛೇರಿ ಮುಂದೆ ರೈತರ ಪ್ರತಿಭಟನೆ: ಮನವಿ ಸ್ವೀಕರಿಸಿದ ಕಂದಾಯ ಸಚಿವ ದೇಶಪಾಂಡೆ
June 19, 2018ಮಡಿಕೇರಿ: ಸಂಪೂರ್ಣ ಸಾಲ ಮನ್ನಾದ ವಿಚಾರದಲ್ಲಿ ರಾಜ್ಯ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಮುಂದಾಳತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಮೇ.30ರಂದು ರೈತ ಸಂಘಟನೆಗಳೊಂ ದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ 15 ದಿನಗಳೊಳಗೆ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡುವ ಮೂಲಕ ರೈತರ ಸಾಲ ಮನ್ನಾ ಮಾಡುವು ದಾಗಿ ಹೇಳಿದ್ದರು. ಆದರೆ ಇದೀಗ…
ಪೆರುಂಬಾಡಿ-ಮಾಕುಟ್ಟ ರಸ್ತೆ ಪರಿಶೀಲನೆ
June 19, 2018ವಿರಾಜಪೇಟೆ: ಕಳೆದ ವಾರ ಸುರಿದ ಧಾರಾಕಾರ ಮಳೆಯಿಂದ ಹಾನಿಯಾಗಿ, ಸಾರಿಗೆ ಸಂಪರ್ಕ ಕಡಿತಗೊಂಡಿ ರುವ ಅಂತರರಾಜ್ಯ ಹೆದ್ದಾರಿ ಪೆರುಂಬಾಡಿ-ಮಾಕುಟ್ಟ ರಸ್ತೆಗೆ ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಸೋಮ ವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು. ಅತಿವೃಷ್ಟಿಯಿಂದಾಗಿ ಪೆರುಂಬಾಡಿ-ಮಾಕುಟ್ಟ ಮಾರ್ಗದ ರಸ್ತೆಯಲ್ಲಿ ಸುಮಾರು 30 ಕಡೆಗಳಲ್ಲಿ ಬರೆ ಕುಸಿತ ಹಾಗೂ ಮರಗಳು ಉರುಳಿ ದೊಡ್ಡ ಅನಾಹುತವಾಗಿದ್ದು, ಇದನ್ನು ತುರ್ತಾಗಿ ಸರಿಪಡಿಸಲು ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸಲಾಗು ವುದು ಎಂದು ಸಚಿವರು ತಿಳಿಸಿದರು. ಈಗಾಗಲೇ ಜಿಲ್ಲಾಡಳಿತಕ್ಕೆ ಪ್ರಕೃತಿ ವಿಕೋಪಕ್ಕಾಗಿ 10…
ಮಳೆ ಹಾನಿ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡಲು ಸೂಚನೆ
June 19, 2018ಮಡಿಕೇರಿ: ಕಾನೂನು ನಿಯಮ ಮಿತಿಯೊಳಗೆ ಮಾನವೀಯತೆ ಕಾಯ್ದುಕೊಂಡು ಮಳೆ ಹಾನಿಯಿಂದ ಸಂತ್ರಸ್ಥರಾದವರಿಗೆ ಸಮರ್ಪಕ ಪರಿಹಾರ ವಿತರಿಸಬೇಕು. ಕಚೇರಿಯೊಳಗೆ ಗಡಿಯಾರ ನೋಡುತ್ತ ಕೆಲಸ ಮಾಡುವ ಬದಲು, ಮಳೆಹಾನಿ ಪ್ರದೇಶಗಳಿಗೆ ತೆರಳಿ, ವಾಸ್ತವಾಂಶ ಅರಿತು ಸರಕಾರಕ್ಕೆ ವರದಿ ನೀಡುವಂತೆ ರಾಜ್ಯ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಮಡಿಕೇರಿಯ ಜಿಲ್ಲಾಡಳಿತ ಭವನದಲ್ಲಿ ಮಳೆಹಾನಿ ಮತ್ತು ಅದಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆ ಗಳ ಪ್ರಗತಿ ಪರಿಶೀಲನೆ ನಡೆಸಿದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ…