ಸಕಲೇಶಪುರ: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆಯಲ್ಲಿ ದೂರುಗಳ ಮಳೆಯೇ ಸುರಿಯಿತು.ಪಟ್ಟಣ ಪುರಭವನ ಸಭಾಂಗಣದಲ್ಲಿಂದು ಏರ್ಪಡಿಸಿದ್ದ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆಯಲ್ಲಿ ತಾಲೂಕಿನ ಜನತೆ ತಮ್ಮ ಸಮಸ್ಯೆಗಳನ್ನು ತೆರೆದಿಟ್ಟರು. ಸಭೆಯಲ್ಲಿ ನೂರಾರು ರೈತರು ವೈಯಕ್ತಿಕ ಹಾಗೂ ಗ್ರಾಮದ ಸಮಸ್ಯೆಗಳ ಕುರಿತು ಅಳಲು ತೋಡಿಕೊಂಡರು. ಅಹವಾಲು ಆಲಿಸಿದ ಜಿಲ್ಲಾಧಿಕಾರಿ, ಎಲ್ಲಾ ಅರ್ಜಿಗಳನ್ನು ಕಾಲ ಮಿತಿಯೊಳಗೆ ವಿಲೇವಾರಿ ಮಾಡು ವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು. ಸಭೆಯಲ್ಲಿ ಭೂಮಿ ಸಂಬಂಧಿಸಿದ ವಿಷಯಗಳ ಕುರಿತು ಹೆಚ್ಚಿನ ದೂರು…
ಉರುಳಿಗೆ ಸಿಲುಕಿ ಗಂಡು ಚಿರತೆ ಸಾವು
June 29, 2018ಸಕಲೇಶಪುರ: ಬೇಟೆಗಾರರು ಜಮೀನೊಂದರ ಬೇಲಿಯಲ್ಲಿ ಇಟ್ಟಿದ್ದ ಉರುಳಿಗೆ ಸಿಲುಕಿ 4 ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಅತ್ತಿಬೀಡು ಗ್ರಾಮದ ಬಳಿ ನಡೆದಿದೆ. ತಾಲೂಕಿನ ದೇವಲಕೆರೆ ಸಮೀಪವಿರುವ ಅತ್ತಿಬೀಡು ಗ್ರಾಮದ ಜಮೀನೊಂದರಲ್ಲಿ ಬೇಟೆಗಾರರು ಕಾಡುಹಂದಿ ಬೇಟೆಗೆ ಉರುಳು ಹಾಕಿದ್ದರು. ಆದರೆ, ಬುಧವಾರ ರಾತ್ರಿ ಆಹಾರ ಅರಸಿ ಬಂದ 4 ವರ್ಷದ ಗಂಡು ಚಿರತೆ ಉರುಳಿಗೆ ಸಿಕ್ಕಿ ಹಾಕಿ ಕೊಂಡಿದೆ. ಇದರಿಂದ ಬಿಡಿಸಿಕೊಳ್ಳಲು ಹರಸಾಹಸ ಪಟ್ಟಿರುವ ಚಿರತೆ ಅತ್ತಿಂದತ್ತ ಎಳೆದಾಡಿದೆ. ಆದರೆ, ಉರುಳು ಚಿರತೆಯ ಸೊಂಟದ…
ಮಳೆ ಹಾನಿ: ಹಾನುಬಾಳು ಹೋಬಳಿ ಸುತ್ತಮುತ್ತ ಶಾಸಕರಿಂದ ಪರಿಶೀಲನೆ
June 20, 2018ಹಾಸನ: ಸಕಲೇಶಪುರ ತಾಲೂಕಿನಲ್ಲಿ ಕಳೆದ 15 ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಹಾನಿಗೀಡಾಗಿರುವ ಹಾನುಬಾಳು ಹೋಬಳಿಯ ಹುರುಡಿ, ಅಚ್ಚರಡಿ, ದೇವಾಲಕೆರೆ, ಬೆಟ್ಟದ ಭೈರೇಶ್ವರ ಮತ್ತಿತರ ಪ್ರದೇಶಗಳಿಗೆ ಶಾಸಕ ಕುಮಾರಸ್ವಾಮಿ ಭೇಟಿ ನೀಡಿ, ಪರಿಶೀಲಿಸಿದರು. ಹಾನಿಗೀಡಾಗಿರುವ ರಸ್ತೆ ಸೇತುವೆಗಳನ್ನು ಪರಿಶೀಲಿಸಿ ಕೂಡಲೇ ಪರಿಹಾರ ಕ್ರಮ ಕೈ ಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಕಲೇಶಪುರ ತಹಶೀಲ್ದಾರು, ತಾಲೂಕು ಮಟ್ಟದ ಅಧಿಕಾರಿಗಳು ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಜರಿದ್ದರು. ಪರಿಹಾರ ಚೆಕ್ ವಿತರಣೆ: ಹಾಸನ ತಾಲೂಕು ಕಟ್ಟಾಯ ಹೋಬಳಿ ಕಾರ್ಲೆ ಮತ್ತು ಪದುಮನಹಳ್ಳಿ…
ಹಾಸನದಲ್ಲಿ ವರುಣನ ಆರ್ಭಟ
June 12, 2018ಹೇಮಾವತಿ ಜಲಾಶಯದಲ್ಲಿ ಜೀವಕಳೆ ಶಾಲಾ-ಕಾಲೇಜುಗಳಿಗೆ ರಜೆ ವಿದ್ಯುತ್, ರಸ್ತೆ-ರೈಲು ಸಂಚಾರ ವ್ಯತ್ಯಯ ಹಾಸನ: ಜಿಲ್ಲೆಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ರಸ್ತೆ, ರೈಲು ಸಂಚಾರ ಅಸ್ತವ್ಯಸ್ತವಾಗಿರುವುದಲ್ಲದೆ, ಅನೇಕ ಪ್ರಮಾಣದ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮುಂಗಾರಿನ ಆರ್ಭಟ ಕಳೆದ ನಾಲ್ಕು ದಿನದಿಂದ ಜೋರಾಗಿದ್ದು, ಭಾನುವಾರ ಸುರಿದ ಭಾರೀ ಮಳೆಗೆ ಜನರು ತತ್ತರಿಸಿದ್ದಾರೆ. ಹಲವೆಡೆ ಮರಗಳು ಧರೆಗುರುಳಿದ್ದು, ಮನೆಗಳ ಗೋಡೆಗಳು ಕುಸಿದಿವೆ. ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯೂ ಸಂಭವಿಸಿದೆ. ಹಾಸನ ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ರೈಲು…
ರೈಲಿಗೆ ಸಿಲುಕಿ ಎರಡು ಆನೆ ಮರಿ ಸಾವು
June 5, 2018ಸಕಲೇಶಪುರ: ಬೆಂಗಳೂರು- ಮಂಗಳೂರು ನಡುವೆ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ಎರಡು ಆನೆ ಮರಿಗಳು ಸಾವಿಗೀಡಾಗಿರುವ ಘಟನೆ ತಾಲೂಕಿನ ಯಡಕುಮರಿ ಬಳಿ ನಡೆದಿದೆ. ಪಶ್ಚಿಮ ಘಟ್ಟದ ದಟ್ಟ ಅರಣ್ಯದ ನಡುವೆ ಹಾದು ಹೋಗಿರುವ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಭಾನು ವಾರ ರಾತ್ರಿ ಅವಘಡ ಸಂಭವಿಸಿದೆ. ರೈಲ್ವೆ ಹಳಿ ದಾಟುತ್ತಿದ್ದ ವೇಳೆ ಆನೆ ಮರಿಗೆ ರೈಲು ಡಿಕ್ಕಿ ಹೊಡೆರುವ ಸಾಧ್ಯತೆ ಇದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಶಿವರಾಮ್ ಬಾಬು ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಪರಿಶೀಲನೆ ನಡೆಸಿದರು.
ಅನುಮಾನಾಸ್ಪದ ವ್ಯಕ್ತಿ: ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
May 25, 2018ಸಕಲೇಶಪುರ: ತಾಲೂಕಿನ ಬನವಾಸೆ ಗ್ರಾಮದಲ್ಲಿ ಅನುಮಾನಾಸ್ಪದ ವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಕ್ಕಳ ಕಳ್ಳನೆಂದು ಭಾವಿಸಿ ಗ್ರಾಮಸ್ಥರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬುಧವಾರ ನಡೆದಿದೆ. ಮಕ್ಕಳ ಕಳ್ಳರು ಇದ್ದಾರೆಂಬ ಸಾಮಾಜಿಕ ಜಾಲ ತಾಣದಲ್ಲಿ ಇತ್ತೀಚೆಗೆ ವ್ಯಾಪಕ ವದಂತಿ ಹರಡಿದ್ದು, ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಗ್ರಾಮದಲ್ಲಿ ಬಿಹಾರ ಮೂಲದ ಯುವಕ ನೊಬ್ಬ ಅನುಮಾನಾಸ್ಪದವಾಗಿ ತಿರುಗಾಡುತ್ತ ಮನೆಗಳ ಬಾಗಿಲು ಬಡಿಯುತ್ತಿದ್ದ ಎಂದು ಅವನನ್ನು ಗ್ರಾಮಸ್ಥರು ಹಿಡಿದು ಪೊಲೀಸ ರಿಗೆ ಒಪ್ಪಿಸಿದ್ದಾರೆ. ಈ ಯುವಕನ ಜೊತೆಗೆ ಇನ್ನು…