ಮೈಸೂರು: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣ ಚೆನ್ನಮ್ಮ/ಅಂಬೇಡ್ಕರ್ ವಸತಿ ಶಾಲೆ/ಇಂದಿರಾ ಗಾಂಧಿ ವಸತಿ ಶಾಲೆ/ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಕನ್ನಡ, ಇಂಗ್ಲೀಷ್, ಹಿಂದಿ ಗಣ ತ, ವಿಜ್ಞಾನ(ಸಿ.ಬಿ.ಝಡ್), ದೈಹಿಕ ಶಿಕ್ಷಣ ಶಿಕ್ಷಕ ಹುದ್ದೆಗಳಿಗಾಗಿ ಅತಿಥಿ ಶಿಕ್ಷಕರನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿತ್ತು. ಮಾನ್ಯ ಉಚ್ಛ ನ್ಯಾಯಾಲಯದ ತಡೆಯಾಜ್ಞೆ ಇರುವುದರಿಂದ ಅತಿಥಿ ಶಿಕ್ಷಕರ ಅರ್ಜಿ ಆಹ್ವಾನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ.