ಬೆಂಗಳೂರು: ಆರ್‍ಎಸ್‍ಎಸ್ ಕಾರ್ಯಕರ್ತನಾಗಿದ್ದ ಶರತ್ ಮಡಿವಾಳ ಹತ್ಯೆಯ ಪ್ರಮುಖ ಆರೋಪಿ ಮಹಮದ್ ಷರೀಫ್‍ಗೆ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಜಾನ್ ಮೈಕಲ್ ಕುನ್ಹಾ ಅವರ ಏಕಸದಸ್ಯ ಪೀಠ ಜಾಮೀನು ಅರ್ಜಿ ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಿದೆ. 2 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ ಸೇರಿದಂತೆ ಇನ್ನಿತರೆ ಷರತ್ತುಗಳ ಮೇಲೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ವರದಿಯಾಗಿದೆ. ಆರೊಪಿಗಳ ವಿರುದ್ಧ ಸಮರ್ಪಕ ಸಾಕ್ಷಾಧಾರ ಸಂಗ್ರಹಣೆ ಮಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ ಹತ್ಯೆ…