ಮೈಸೂರು, ಮಾ.14(ಎಸ್‍ಪಿಎನ್)- ಮೈಮುಲ್ ಚುನಾವಣೆ ಸೇರಿದಂತೆ ಯಾವುದೇ ಚುನಾವಣೆಯಲ್ಲೂ ಜೆಡಿಎಸ್‍ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವು ದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದರು. ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ರಾಜಕೀಯ ವಿಚಾರ ವಾಗಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸ್ಥಳೀಯ ಚುನಾವಣೆಗಳು ಯಾವುದೇ ಪಕ್ಷದ ಚಿಹ್ನೆ ಮೇಲೆ ನಡೆಯುವುದಿಲ್ಲ. ಸ್ಥಳೀಯ ಹೊಂದಾಣಿಕೆ ಮೇಲೆ ಈ ಚುನಾವಣೆ ಗಳು ನಡೆಯಲಿವೆ. ಹಾಗಿದ್ದರೂ ನಮ್ಮ ಕಡೆಯಿಂದ ಜೆಡಿಎಸ್‍ಗೆ ಯಾವುದೇ…
ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಜೆಡಿಎಸ್ ಸೋತು ಸಿದ್ದರಾಮಯ್ಯ ಗೆಲ್ಲಲು ಜಿಟಿಡಿ ಕಾರಣ
March 15, 2021ಮೈಸೂರು,ಮಾ.14(ಎಂಟಿವೈ)-2006 ರಲ್ಲಿ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡರು ದೂರವುಳಿದ ಕಾರಣ ನಮ್ಮ ಪಕ್ಷದ ಅಭ್ಯ ರ್ಥಿಗೆ ಸೋಲುಂಟಾಗಿ ಸಿದ್ದರಾಮಯ್ಯ ಗೆದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ಮೈಸೂರಲ್ಲಿ ಭಾನುವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಜಿ.ಟಿ. ದೇವೇಗೌಡರಿಂದ ಪಕ್ಷಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಲೇ ಬಂದಿದೆ. ಅವರಿಂದ ಪಕ್ಷಕ್ಕೆ ಆಗುತ್ತಿರುವ ದ್ರೋಹ ಹೊಸದೇನು ಅಲ್ಲ. 2006ರಲ್ಲಿ ನಡೆದ ಚಾಮುಂಡೇಶ್ವರಿ ವಿಧಾನಸಭಾ ಉಪ ಚುನಾವಣೆಯಲ್ಲಿ ಸಿದ್ದ ರಾಮಯ್ಯ ವಿರುದ್ಧ ಜೆಡಿಎಸ್ ಅಭ್ಯರ್ಥಿ ಸೋಲು ಅನುಭವಿಸಲು ಜಿ.ಟಿ.ದೇವೇಗೌಡ…
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಧ್ರುವನಾರಾಯಣ್, ರಾಮಲಿಂಗಾರೆಡ್ಡಿ ಅಧಿಕಾರ ಪದಗ್ರಹಣ
February 22, 2021ಬೆಂಗಳೂರು,ಫೆ.21-ಕೆಪಿಸಿಸಿ ಕಾರ್ಯಾ ಧ್ಯಕ್ಷರ ಅಧಿಕಾರ ಪದಗ್ರಹಣ ಕಾರ್ಯ ಕ್ರಮ ಭಾನುವಾರ ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ನಡೆಯಿತು. ಕಾಂಗ್ರೆಸ್ ಧ್ವಜ ಸ್ವೀಕರಿಸುವ ಮೂಲಕ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಂಸದ ಧ್ರುವನಾರಾಯಣ್ ನೂತನ ಕಾರ್ಯಾ ಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಧ್ರುವನಾರಾಯಣ್ ವಿದ್ಯಾರ್ಥಿ ನಾಯಕರಾಗಿ ಬಂದವರು. ಬಳಿಕ ಲೋಕ ಸಭೆಗೆ ಆಯ್ಕೆಯಾದವರು. ಹೆಚ್ಚಿನ ಜವಾ ಬ್ದಾರಿಯನ್ನು ನಾವೆಲ್ಲ ಒಗ್ಗಟ್ಟಾಗಿ ನಿರ್ವಹಿಸ ಬೇಕಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನಮ್ಮ ಮೇಲೆ…
ಯಡಿಯೂರಪ್ಪ ಅಸಮರ್ಥ ಮುಖ್ಯಮಂತ್ರಿ, ರಾಜ್ಯದಲ್ಲಿ ಸರ್ಕಾರವೇ ಇಲ್ಲ: ಸಿದ್ದರಾಮಯ್ಯ
December 4, 2020ಮೈಸೂರು. ಡಿ.3(ಎಸ್‍ಬಿಡಿ)- ರಾಜ್ಯದಲ್ಲಿ ಸರ್ಕಾ ರವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಮೂಲಕ ರಾಜ್ಯದ ಜನತೆಗೆ ಕನಕದಾಸರ ಜಯಂತ್ಯೋತ್ಸವದ ಶುಭಾ ಶಯ ತಿಳಿಸಿದ ಅವರು, ಮಾಧ್ಯಮದವರ ನಾನಾ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಈವರೆಗೂ ಸರ್ಕಾರ ಟೇಕ್ ಆಫ್ ಆಗಿಯೇ ಇಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬ ಪರಿಸ್ಥಿತಿ ಇದೆ. ಯಡಿಯೂರಪ್ಪ ಅಸಮರ್ಥ ಮುಖ್ಯಮಂತ್ರಿ. ಈ ಹಿಂದೆಯೂ ಸಮರ್ಥವಾಗಿ ಇರಲಿಲ್ಲ, ಈಗಲೂ ಇಲ್ಲ. ತಿಂಗಳ ಹಿಂದೆಯೇ ಹೇಳಿದಂತೆ ಮುಖ್ಯಮಂತ್ರಿ…
ಸಾಹಿತಿಗಳು, ಪ್ರಗತಿಪರರೊಂದಿಗೆ ಸಿದ್ದರಾಮಯ್ಯ ಸಭೆ
December 4, 2020ಮೈಸೂರು,ಡಿ.3- ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮೈಸೂರಿನಲ್ಲಿ ಪ್ರಗತಿಪರ ಚಿಂತಕರು, ಸಮಾಜವಾದಿ ಹೋರಾಟಗಾರರು, ಪ್ರಾಧ್ಯಾಪಕರು ಹಾಗೂ ಜಾತ್ಯತೀತ ಚಿಂತನೆಯುಳ್ಳ ಸಾಹಿತಿಗಳ ಜೊತೆ ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಚರ್ಚೆ ನಡೆಸಿದರು. ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿರುವುದು ನಿಜ. ಇದೇನೂ ರಹಸ್ಯ ಸಭೆ ಅಲ್ಲ. ಪ್ರಸಕ್ತ ಪರಿಸ್ಥಿತಿಯಲ್ಲಿ ತಳ ಸಮುದಾಯದವರು, ಬಡವರು ಜೀವನ ನಡೆಸಲು ಹೆಣಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಅನಿ ವಾರ್ಯ ಎಂಬ…
ಎಲ್ಲಾ ಗ್ರಾಮಗಳ ಸೇರ್ಪಡೆಗೆ ಸಿದ್ದರಾಮಯ್ಯರಿಗೆ ಮನವಿ
December 4, 2020ಮೈಸೂರು, ಡಿ.3-ಮೈಸೂರು ಸಮೀಪದ ಬೀರಿಹುಂಡಿ ಪಂಚಾಯಿತಿಗೆ ಸೇರಿದ ಎಲ್ಲಾ ಗ್ರಾಮಗಳನ್ನು ಬೋಗಾದಿ ಪಟ್ಟಣ ಪಂಚಾ ಯಿತಿಗೆ ಸೇರಿಸಲು ಸರ್ಕಾರಕ್ಕೆ ಸಲಹೆ ನೀಡು ವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡರ ನೇತೃತ್ವದಲ್ಲಿ ಗುರುವಾರ ಮನವಿ ಸಲ್ಲಿಸಲಾಯಿತು. ಹೊಸದಾಗಿ ರಚನೆ ಯಾಗಿರುವ ಬೋಗಾದಿ ಪಟ್ಟಣ ಪಂಚಾಯಿತಿಗೆ ಬೀರಿಹುಂಡಿ ಪಂಚಾಯಿತಿ ವ್ಯಾಪ್ತಿಗೆ ಬರುವ ಬಡಗಲಹುಂಡಿ, ಕೇರ್ಗಳ್ಳಿ, ಕೆ. ಸಾಲುಂಡಿ, ನಂಜರಾಜಯ್ಯ ನಹುಂಡಿ, ಮನ್ನಹುಂಡಿ ಗ್ರಾಮ ಗಳು ಸೇರ್ಪಡೆಯಾಗುತ್ತವೆ. ಉಳಿದಂತೆ ಬಲ್ಲಹಳ್ಳಿ, ಬೀರಿ ಹುಂಡಿ, ಕುಮಾರಬೀಡು,…
ಬಿಜೆಪಿಯ ಸರ್ಕಸ್‍ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ
November 22, 2020ಬೆಂಗಳೂರು: ಬಿಜೆಪಿಯ ಸರ್ಕಸ್‍ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದ್ದು, ಶೀಘ್ರವಾಗಿ ಏನಾ ದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿ ಎಂದು ಸಿದ್ದರಾಮಯ್ಯ ಆಡ ಳಿತಾರೂಢ ಬಿಜೆಪಿಯನ್ನು ಟೀಕಿಸಿದ್ದಾರೆ. ಹಿಂದೆಲ್ಲ ಬಿಜೆಪಿ ನಾಯಕರು, ಹೈಕಮಾಂಡ್ ಸಂಸ್ಕೃತಿ’ ಮೂಲ ನಿವಾಸಿಗಳು-ವಲಸೆ ಗಾರರು’ಕುಟುಂಬ ರಾಜಕಾರಣ’ ಎಂಬಿ ತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ ಅದೇ ಆರೋಪಗಳನ್ನು ಪರಸ್ಪರ ಮಾಡ್ಕೊಂಡು ಬೆತ್ತಲಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ರುವ ಅವರು,…
ಸರ್ವಪಕ್ಷ ನಾಯಕರ ಸಭೆಯಲ್ಲಿ ಸಿದ್ದರಾಮಯ್ಯ ಅವರು ಹೇಳಿದ್ದು
March 30, 2020ಬೆಂಗಳೂರು, ಮಾ.29-ನಮ್ಮ ತಪ್ಪಿನಿಂದ ಯಾವ ನ್ಯೂನತೆ ಆಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಸರ್ಕಾರದ ಮಾಹಿತಿಯೂ ಅಸ್ಪಷ್ಟವಾಗಿದೆ. 23 ಸಾವಿರ ಮಂದಿ ಪೈಕಿ 4.500 ಮಂದಿಯನ್ನು ಇನ್ನೂ ಗುರುತಿಸಬೇಕಿದೆ ಎಂದು ಸರ್ಕಾರ ಹೇಳಿದೆ. ಅವರನ್ನು ಕೂಡಲೇ ಪತ್ತೆ ಮಾಡಬೇಕು. ಮೂರನೇ ಹಂತಕ್ಕೆ ನಾವು ಇನ್ನೂ ಹೋಗಿಲ್ಲ ಎಂದು ಸಚಿವರು ಹೇಳಿದ್ದಾರೆ. ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ. ಆತನಿಗೆ ವಿದೇಶದಿಂದ ಬಂದವರ ಸಂಪರ್ಕ ಇರಲಿಲ್ಲ. ಆದರೂ ಕರೋನ…
ಹೈಕಮಾಂಡ್ ಬುಲಾವ್: ಇಂದು ಸಿದ್ದರಾಮಯ್ಯ ದೆಹಲಿಗೆ
January 13, 2020ಬೆಂಗಳೂರು, ಜ.12- ನಿರೀಕ್ಷಿತ ಕೆಪಿಸಿಸಿ ಸಾರಥ್ಯ ಬದಲಾವಣೆ ವಿಚಾರ ಅಂತಿಮ ಘಟ್ಟ ತಲುಪಿದ್ದು, ಇನ್ನೆರಡು ದಿನಗಳಲ್ಲಿಯೇ ಪ್ರದೇಶ ಕಾಂಗ್ರೆಸ್‍ಗೆ ಹೊಸ ಅಧ್ಯಕ್ಷರ ನೇಮಕಾತಿಯಾಗಲಿದೆ. ರಾಜ್ಯ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರ ಸಂಬಂಧ ಚರ್ಚಿಸಲು ಸೋಮವಾರ ಸಂಜೆ ದೆಹಲಿಗೆ ಬರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಹೈಕಮಾಂಡ್ ಸೂಚನೆ ನೀಡಿದೆ. ಈ ಹಿನ್ನೆಲೆ ಯಲ್ಲಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಅಧ್ಯಕ್ಷರ ನೇಮಕ ಸಂಬಂಧ ದಿಲ್ಲಿಗೆ ಬರಲು ಆಯ್ದ ರಾಜ್ಯ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಮತ್ತೊಂ ದೆಡೆ ಮಾಜಿ ಸಚಿವ…
ಕರ್ನಾಟಕದಲ್ಲಿ ಹಿಟ್ಲರ್ ಆಡಳಿತಕ್ಕೆ ಅವಕಾಶ ಕೊಡಲ್ಲ: ವಿದ್ಯಾರ್ಥಿಗಳ ಮೇಲಿನ ದಾಳಿಗೆ ಸಿದ್ದರಾಮಯ್ಯ ಕಿಡಿ
January 10, 2020ಬೆಂಗಳೂರು: ಶಿಕ್ಷಣ ಸಂಸ್ಥೆಗಳು ಜ್ಞಾನದ ಪ್ರಸಾರ ಕೇಂದ್ರಗಳು, ವಿಮರ್ಶಾತ್ಮಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವದ ಮೂಲ ವಾಗಿದೆ. ಬಿಜೆಪಿಯ ಸಿದ್ಧಾಂತವು ಫ್ಯಾಸಿ ಸಂನ ದುರ್ಬಲ ಅಡಿಪಾಯದಲ್ಲಿದೆ. ನಮ್ಮ ವಿಶ್ವವಿದ್ಯಾಲಯಗಳ ಜ್ಞಾನದ ನೆಲೆಯಿಂದ ಬಿಜೆಪಿಗೆ ಬೆದರಿಕೆ ಇದೆ. ಆದ್ದರಿಂದ ಅವು ಗಳನ್ನು ಮಟ್ಟಹಾಕಲು ಮತ್ತು ದುರ್ಬಲ ಗೊಳಿಸಲು ಬಯಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಿಜೆಪಿಯ ಗೂಂಡಾಗಳು ಬೆಂಗಳೂ ರಿನ ಜ್ಯೋತಿನಿವಾಸ್ ಕಾಲೇಜಿನ ವಿದ್ಯಾರ್ಥಿ ಗಳಿಗೆ ಸಿಎಎಗೆ ಬೆಂಬಲ ನೀಡುವಂತೆ ಬೆದ ರಿಕೆ ಹಾಕುತ್ತಿದ್ದಾರೆ. ಯಡಿಯೂರಪ್ಪ ಅವರೇ,…